Home
Deal of the day

ಜನಪ್ರಿಯ ಫೋನ್‌ಗಳನ್ನು ಭಾರೀ ಡಿಸ್ಕೌಂಟ್‌ನಲ್ಲಿ ಖರೀದಿಸಲು ಬೊಂಬಾಟ್ ಅವಕಾಶ!

ಪ್ರಸ್ತುತ ಬಹುತೇಕ ಗ್ರಾಹಕರು ಏನನ್ನಾದರೂ ಖರೀದಿಸಬೇಕಿದ್ದರೇ, ಮೊದಲು ಆನ್‌ಲೈನ್‌ ಇ ಕಾಮರ್ಸ್‌ಗಳಲ್ಲಿ ಕಣ್ಣಾಡಿಸುತ್ತಾರೆ. ಅದರಲ್ಲಿಯೂ ಗ್ಯಾಡ್ಜೆಟ್ಸ್‌ ಉತ್ಪನ್ನಗಳನ್ನು ಖರೀದಿ ಮಾಡುವಾಗ ಇ ಕಾಮರ್ಸ್‌ನಲ್ಲಿ ಜಾಲಾಡುತ್ತಾರೆ. ಏಕೆಂದರೇ ಜನಪ್ರಿಯ ಇ ಕಾಮರ್ಸ್‌ ತಾಣಗಳು ಸ್ಮಾರ್ಟ್‌ಫೋನ್‌, ಲ್ಯಾಪ್‌ಟಾಪ್‌, ಸ್ಪೀಕರ್ ಸೇರಿದಂತೆ ಇತರೆ ಎಲೆಕ್ಟ್ರಾನಿಕ್ ಡಿವೈಸ್‌ಗಳಿಗೆ ಏನಾದರೊಮದು ಆಕರ್ಷಕ ರಿಯಾಯಿತಿ ನೀಡಿರುತ್ತವೆ.

ಜನಪ್ರಿಯ ಫೋನ್‌ಗಳನ್ನು ಭಾರೀ ಡಿಸ್ಕೌಂಟ್‌ನಲ್ಲಿ ಖರೀದಿಸಲು ಬೊಂಬಾಟ್ ಅವಕಾಶ!

ಹೌದು, ಹೊಸದಾಗಿ ಸ್ಮಾರ್ಟ್‌ಫೋನ್‌ ಖರೀದಿಸುವ ಗ್ರಾಹಕರಿಗೆ ಅಮೆಜಾನ್ ಸೂಕ್ತ ತಾಣ ಎನಿಸಿದೆ. ಅಮೆಜಾನ್‌ನಲ್ಲಿ ಹಬ್ಬದ ದಿನಗಳನ್ನು ಹೊರತು ಪಡಿಸಿ ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ, ಅಲ್ಲದೇ ಬ್ಯಾಂಕ್‌ಗಳ ಇನ್‌ಸ್ಟಂಟ್‌ ಕೊಡುಗೆ ಸಹ ಲಭ್ಯ ಇರುತ್ತವೆ. ಈ ನಿಟ್ಟಿನಲ್ಲಿ ಫೋನ್ ಖರೀದಿಸುವ ಬಹುತೇಕ ಗ್ರಾಹಕರು ಅಮೆಜಾನ್‌ನತ್ತ ಮುಖ ಮಾಡುತ್ತಾರೆ. ಹಾಗಾದರೇ ಅಮೆಜಾನ್‌ನಲ್ಲಿ ಕೊಡುಗೆಯೊಂದಿಗೆ ಖರೀದಿಸಬಹುದಾದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A52s 5G ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ A52s 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೆ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದುದು 25W ಸೂಪರ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ವಿವೋ V19 ಸ್ಮಾರ್ಟ್‌ಫೋನ್
ವಿವೋ V19 ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 6.44 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಈ ಫೋನ್ ಕ್ವಾಡ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಹಾಗೆಯೇ ಡ್ಯುಯೆಲ್‌ ಸೆಲ್ಫಿ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರೊಂದಿಗೆ ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದೆ.

ಒನ್‌ಪ್ಲಸ್‌ 8 ಸ್ಮಾರ್ಟ್‌ಫೋನ್
ಒನ್‌ಪ್ಲಸ್‌ 8 ಸ್ಮಾರ್ಟ್‌ಫೋನ್ 6.55 AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಇದು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 865 SoC ಪ್ರೊಸೆಸರ್ ಹೊಂದಿದ್ದು, ಜೊತೆಗೆ Adreno 650 GPU ಹೊಂದಿದೆ. ಹಾಗೆಯೇ ಈ ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 4,300mAh ಬ್ಯಾಟರಿ ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, ಇದರೊಂದಿಗೆ 30W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M31 ಸ್ಮಾರ್ಟ್‌ಫೋನ್‌
ಈ ಸ್ಮಾರ್ಟ್‌ಫೋನ್‌ 1080x2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿರುವ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಇನ್‌ಫಿನಿಟಿ ಯು ಡಿಸ್‌ಪ್ಲೇ ಹೊಂದಿದೆ. ಇದು ಸ್ಯಾಮ್‌ಸಂಗ್‌ exynos 9611 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಆಪ್‌ ಅನ್ನು ಹೊಂದಿದೆ.

English summary
You Can Buy These Popular Phones With Discount Price At Amazon.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+