Home
Deal of the day

iPhone ಖರೀದಿಸುವ ಪ್ಲ್ಯಾನ್‌ ಇದ್ರೆ, ಈ ಬೊಂಬಾಟ್‌ ಆಫರ್‌ ಕಳೆದುಕೊಳ್ಳಬೇಡಿ!

ಜನಪ್ರಿಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಏನಾದರೊಂದು ಆಫರ್‌ ಮೇಳಗಳನ್ನು ಮೂಲಕ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದ್ದು, ಇದೀಗ ಸ್ಮಾರ್ಟ್‌ಫೋನ್‌ ಫೆಸ್ಟಿವಲ್‌ ಸೇಲ್‌ ಆಯೋಜಿಸಿದ್ದು ಸಖತ್ ಕೊಡುಗೆಗಳ ಘೋಷಣೆ ಮಾಡಿದೆ. ಅದರಲ್ಲಿಯೂ ಪ್ರಮುಖವಾಗಿ ಆಯ್ದ ಮೊಬೈಲ್‌ಗಳಿಗೆ ಬೊಂಬಾಟ್‌ ರಿಯಾಯಿತಿ ಲಭ್ಯ ಮಾಡಿದೆ. ಆ ಪೈಕಿ ಆಪಲ್‌ ಸಂಸ್ಥೆಯು ಐಫೋನ್‌ 15 ಮೊಬೈಲ್‌ (Apple iPhone 15) ಗ್ರಾಹಕರು ಹುಬ್ಬೇರಿಸುವಂತಹ ಡಿಸ್ಕೌಂಟ್‌ ನಲ್ಲಿ ಕಾಣಿಸಿಕೊಂಡಿದೆ.

ಹೌದು, ಫ್ಲಿಪ್‌ಕಾರ್ಟ್‌ ಆಯೋಜಿಸಿರುವ ಸ್ಮಾರ್ಟ್‌ಫೋನ್‌ ಫೆಸ್ಟಿವಲ್‌ ಸೇಲ್‌ನಲ್ಲಿ ಐಫೋನ್‌ 15 (Apple iPhone 15) ಮೊಬೈಲ್‌ ಶೇ. 17% ರಷ್ಟು ನೇರ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 128 GB ಸ್ಟೋರೇಜ್‌ ವೇರಿಯಂಟ್‌ ಆಫರ್‌ನಲ್ಲಿ 57,999ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಅಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ಡಿಸ್ಕೌಂಟ್‌ ಸಹ ಪಡೆಯಬಹುದಾಗಿದೆ.

iPhone ಖರೀದಿಸುವ ಪ್ಲ್ಯಾನ್‌ ಇದ್ರೆ, ಈ ಬೊಂಬಾಟ್‌ ಆಫರ್‌ ಕಳೆದುಕೊಳ್ಳಬೇಡಿ!

ಐಫೋನ್‌ 15 ಮೊಬೈಲ್‌ (Apple iPhone 15) ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 48 ಮೆಗಾ ಪಿಕ್ಸಲ್‌ ಸೆನ್ಸಾರ್‌ ಆಗಿದೆ. ಅಲ್ಲದೇ ಇದು ಬ್ಲೂ, ಗ್ರೀನ್‌ ಹಾಗೂ ಬ್ಲ್ಯಾಕ್ ಕಲರ್‌ ಆಯ್ಕೆಗಳನ್ನು ಪಡೆದಿದ್ದು, A16 Bionic ಚಿಪ್‌ಸೆಟ್‌ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದೆ. ಹಾಗಾದರೇ ಆಪಲ್‌ ಐಫೋನ್‌ 15 ಮೊಬೈಲ್‌ ನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಐಫೋನ್‌ 15 - ಫೀಚರ್ಸ್‌

ಐಫೋನ್‌ 15 (Apple iPhone 15) ಫೋನ್‌ 6.1 ಇಂಚಿನ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, 1600 nits ಬ್ರೈಟ್ನಸ್‌ ಸಪೋರ್ಟ್‌ ಸಹ ಪಡೆದುಕೊಂಡಿದೆ. ಹಾಗೆಯೇ ಇದು ಮಾತ್ರೆ ಮಾದರಿಯ ( ಪಿಲ್‌ ಶೇಪ್‌ ಮಾದರಿ ) ಪಂಚ್‌ ಹೋಲ್‌ ರಚನೆ ಹೊಂದಿದ್ದು, ಫೇಸ್‌ಟೈಮ್ ಕ್ಯಾಮೆರಾ ಮತ್ತು ಫೇಸ್‌ ಐಡಿ ಒಳಗೊಂಡಿದೆ.

ಐಫೋನ್‌ 15 ಫೋನ್‌ (Apple iPhone 15) A16 ಬಯೋನಿಕ್ ಚಿಪ್ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ಮಾಡುತ್ತದೆ. ಇದಕ್ಕೆ ಪೂರಕವಾಗಿ ಈ ಐಫೋನ್‌ ios 16 ಓಎಸ್‌ ಸಪೋರ್ಟ್ ಕೂಡಾ ಪಡೆದುಕೊಂಡಿದೆ. ಅಲ್ಲದೇ ಐಫೋನ್‌ 15 ಫೋನ್‌ 128 GB, 256 GB, 512 GB ಆಂತರೀಕ ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ.

ಐಫೋನ್‌ 15 ಫೋನ್‌ ಹಿಂಬದಿಯಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಅವುಗಳಲ್ಲಿ ಮೊದಲ ಕ್ಯಾಮೆರಾವು 48 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇದು ಮಂದ ಬೆಳಕಿನಲ್ಲಿಯೂ ಉತ್ತಮ ಫೋಟೋ ಸೆರೆಹಿಡಿಯಲು ಕೆಲಸ ಮಾಡುತ್ತದೆ. ಹಾಗೆಯೇ ದ್ವಿತೀಯ ಕ್ಯಾಮೆರಾವು 12 ಮೆಗಾ ಪಿಕ್ಸಲ್‌ನ ಅಲ್ಟ್ರಾ ವೈಲ್ಡ್‌ ಆಂಗಲ್‌ ಲೆನ್ಸ್‌ ಅನ್ನು ಪಡೆದಿದೆ. ಇನ್ನು 12 ಮೆಗಾ ಪಿಕ್ಸಲ್‌ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.

ಐಫೋನ್‌ 15 ಸ್ಮಾರ್ಟ್‌ ಫೋನ್‌ ತನ್ನ ಈ ಹಿಂದಿನ ಸರಣಿಗಿಂತ ಉತ್ತಮ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಐಫೋನ್‌ 15 ಫೋನ್‌ ನ ಪ್ಲಸ್‌ ಪಾಯಿಂಟ್‌ ಅಂಶಗಳಲ್ಲಿ ಒಂದಾಗಿದೆ. ಹಾಗೆಯೇ ಇದು ಡೈನಾಮಿಕ್ ಐಲ್ಯಾಂಡ್‌ ( Dynamic Island ) ಸೌಲಭ್ಯ ಕೂಡಾ ಹೊಂದಿದೆ. ಅಲ್ಲದೇ ವಾಯರ್‌ಲೆಸ್‌ ಕನೆಕ್ಟಿವಿಟಿ ಸೌಲಭ್ಯ ಕೂಡಾ ಪಡೆದಿದೆ. ಈ ಫೋನ್‌ ರೋಡ್‌ ಸೈಡ್‌ ಅಸಿಸ್ಟಂಟ್‌ ವೈಯಾ ಸೆಟಲೈಟ್‌ ಗಳಂತಹ ಆಯ್ಕೆಗಳನ್ನು ಕಾಣಬಹುದಾಗಿದೆ.

Best Mobiles in India

English summary
You can get the iPhone 15 at big Discount in flipkart; Know the offer price. check out offer price and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+