Infinix: ಇನ್ಫಿನಿಕ್ಸ್‌ನ ಈ ಫೋನ್‌ಗೆ ಭರ್ಜರಿ ಆಫರ್; 64 GB ಸ್ಟೋರೇಜ್... ದೊಡ್ಡ ಡಿಸ್‌ಪ್ಲೇ
ಇನ್ಫಿನಿಕ್ಸ್ ಸ್ಮಾರ್ಟ್ ಫೋನ್‌ಗಳು (Infinix Smart Phone) ಅಗ್ಗದ ದರದಲ್ಲಿ ಅತ್ಯುತ್ತಮ ಫೀಚರ್ಸ್ ನೀಡಲು ಹೆಸರಾಗಿವೆ. ಈ ಫೋನ್‌ಗಳಿಗೆ ಭಾರತದಲ್ಲಿ ಹೆಚ್ಚಿನ ಬೇಡಿಕೆ ಇದ್ದು, ಇದೀಗ ಇನ್ಫಿನಿಕ್ಸ್ ನ ಬಜೆಟ್ ಬೆಲೆಯ ಫೋನ್‌ಗೆ ಆಫರ್ ಘೋಷಣೆ ಮಾಡಲಾಗಿದೆ. ಈ ಮೂಲಕ ಗ್ರಾಹಕರು ಭಾರೀ ಹಣ ಉಳಿಸಬಹುದಾಗಿದೆ.
ಹೌದು, ಇನ್ಫಿನಿಕ್ಸ್ ಹಾಟ್ 20 ಪ್ಲೇ att ಸ್ಮಾರ್ಟ್‌ಫೋನ್‌ಗೆ (Infinix Hot 20 Play att Smartphone) ಇದೀಗ ಭಾರೀ ಆಫರ್ ನೀಡಲಾಗಿದೆ. ಈ ಸ್ಮಾರ್ಟ್‌ಫೋನ್ 6000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದುಕೊಂಡಿದ್ದು, ಮೀಡಿಯಾ ಟೆಕ್ G37 ಪ್ರೊಸೆಸರ್ ಬಲದೊಂದಿಗೆ ಕಾಣಿಸಿಕೊಂಡಿದೆ. ಹಾಗಿದ್ರೆ, ಈ ಫೋನ್ ಪ್ರಮುಖ ಫೀಚರ್ಸ್ ಹಾಗೂ ಆಫರ್ ಬೆಲೆ ವಿವರ ಹಾಗೂ ಬ್ಯಾಂಕ್ ಆಫರ್ ವಿವರ ಏನು ಅನ್ನೋದನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

ಇನ್ಫಿನಿಕ್ಸ್ ಹಾಟ್ 20 ಪ್ಲೇ att ಸ್ಮಾರ್ಟ್‌ಫೋನ್ ಆಫರ್ ವಿವರ: ಈ ಸ್ಮಾರ್ಟ್‌ಫೋನ್ 11,999 ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, ನೀವೀಗ ಇದನ್ನು 9,400 ರೂ.ಗಳ ಬೆಲೆಗೆ ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಫ್ಲಿಪ್‌ಕಾರ್ಟ್‌ನಲ್ಲಿ (Flipkart) ಈ ಫೋನ್‌ಗೆ 22% ಆಫರ್ ಘೋಷಣೆ ಮಾಡಲಾಗಿದೆ. ಅದಾಗ್ಯೂ ನೀವು ಬ್ಯಾಂಕ್ ಆಫರ್ ಬಳಕೆ ಮಾಡುವ ಮೂಲಕ ಇನ್ನೂ ಕಡಿಮೆ ಬೆಲೆಗೆ ಈ ಫೋನ್ ಖರೀದಿ ಮಾಡಬಹುದಾಗಿದೆ.
ಈ ಫೋನ್ ಅನ್ನು ತಿಂಗಳಿಗೆ 456 ರೂ.ಗಳ ಇಎಂಐ ಪಾವತಿ ಮಾಡುವ ಮೂಲಕ ಖರೀದಿ ಮಾಡಬಹುದಾಗಿದೆ. ಇದರೊಂದಿಗೆ ಈ ಫೋನ್ ಖರೀದಿ ವೇಳೆ ಕೊಟಕ್ ಬ್ಯಾಂಕ್ ಡೆಬಿಟ್ ಕಾರ್ಡ್ ಎಎಮ್‌ಐ ವ್ಯವಹಾರದ ಮೇಲೆ 1000 ರೂ. ವರೆಗೆ, ಸಿಟಿಬ್ಯಾಂಕ್ ಕಾರ್ಡ್ ಇಎಂಐ ಅಲ್ಲದ ವ್ಯವಹಾರದ ಮೇಲೆ 750 ರೂ. ವರೆಗೆ, ಕೊಟಕ್ ಬ್ಯಾಂಕ್ ಡೆಬಿಟ್ ಕಾರ್ಡ್ ಇಎಂಐ ಅಲ್ಲದ ವ್ಯವಹಾರದ ಮೇಲೆ 750 ರೂ.ಗಳ ವರೆಗೆ ರಿಯಾಯಿತಿ ಪಡೆಯಬಹುದಾಗಿದೆ. ಇಷ್ಟೇ ಅಲ್ಲದೆ ಇನ್ನೂ ಅನೇಕ ಬ್ಯಾಂಕ್ ಆಫರ್ ಸಹ ಇವೆ.

ಇನ್ಫಿನಿಕ್ಸ್ ಹಾಟ್ 20 ಪ್ಲೇ att ಸ್ಮಾರ್ಟ್‌ಫೋನ್ ಡಿಸ್‌ಪ್ಲೆ ವಿವರ: ಕಳೆದ ವರ್ಷ ಅನಾವರಣ ಮಾಡಲಾಗಿದ್ದ ಈ ಫೋನ್ 6.82 ಇಂಚಿನ IPS LCD ಡಿಸ್‌ಪ್ಲೇ ಆಯ್ಕೆ ಪಡೆದುಕೊಂಡಿದೆ. ಇದರೊಂದಿಗೆ 90Hz ರಿಫ್ರೆಶ್ ರೇಟ್ ಆಯ್ಕೆ ಹಾಗೂ 500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಆಯ್ಕೆ ಪಡೆದುಕೊಂಡಿದ್ದು, 720 x 1640 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದೆ.
ಇನ್ಫಿನಿಕ್ಸ್ ಹಾಟ್ 20 ಪ್ಲೇ att ಸ್ಮಾರ್ಟ್‌ಫೋನ್ ಪ್ರೊಸೆಸರ್ ಮಾಹಿತಿ: ಈ ಫೋನ್ ಮೀಡಿಯಾಟೆಕ್ MT6765 ಹಿಲಿಯೋ G37 (12 nm) ಪ್ರೊಸೆಸರ್ ಬಲ ಪಡೆದಿದ್ದು, ಆಂಡ್ರಾಯ್ಡ್ 12, XOS 10.6 ಅನ್ನು ರನ್ ಮಾಡಲಿದೆ. ಜೊತೆಗೆ ಪವರ್ ವಿಆರ್ GE8320 ಜಿಪಿಯು ಶಕ್ತಿಯೊಂದಿಗೆ ಫೋನ್ ಅತ್ಯುತ್ತಮವಾಗಿ ಕೆಲಸ ಮಾಡಲಿದೆ. ಇನ್ನು 64GB ಇಂಟರ್ ಸ್ಟೋರೇಜ್ ಆಯ್ಕೆ ಹಾಗೂ 4GB RAM ಆಯ್ಕೆ ಪಡದುಕೊಂಡಿದೆ. ನಿಮಗೆ ಇನ್ನೂ ಹೆಚ್ಚಿನ ಸ್ಟೋರೇಜ್ ಆಯ್ಕೆ ಬೇಕು ಎಂದರೆ ಎಸ್‌ಡಿ ಕಾರ್ಡ್ ಬಳಕೆ ಮಾಡಿಕೊಳ್ಳಬಹುದು.
ಇನ್ಫಿನಿಕ್ಸ್ ಹಾಟ್ 20 ಪ್ಲೇ att ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ: 13 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದ್ದು, ಇದು ಕ್ವಾಡ್-ಎಲ್ಇಡಿ ಫ್ಲ್ಯಾಶ್ ಸೌಲಭ್ಯ ಪಡೆದುಕೊಂಡಿದೆ. ಇದರೊಂದಿಗೆ ಈ ಸೆನ್ಸರ್ ಬಳಕೆ ಮಾಡಿಕೊಂಡು 1080p@30fps ನ ವಿಡಿಯೋ ರೆಕಾರ್ಡ್ ಮಾಡಬಹುದಾಗಿದೆ. ಜೊತೆಗೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದಿದ್ದು, ಇದು ಡ್ಯುಯಲ್-ಎಲ್ಇಡಿ ಫ್ಲ್ಯಾಶ್ ಫೀಚರ್ಸ್ ಪಡೆದಿದೆ.

ಇನ್ಫಿನಿಕ್ಸ್ ಹಾಟ್ 20 ಪ್ಲೇ att ಸ್ಮಾರ್ಟ್‌ಫೋನ್ ಬ್ಯಾಟರಿ ಹಾಗೂ ಇತರೆ: ಈ ಸ್ಮಾರ್ಟ್‌ಫೋನ್ 6000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದುಕೊಂಡಿದ್ದು, 18W ವೈರ್ಡ್ ಚಾರ್ಜಿಂಗ್ ಹಾಗೂ 5W ರಿವರ್ಸ್ ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದುಕೊಂಡಿದೆ. ಇದರೊಂದಿಗೆ ವೈ-ಫೈ 802.11 a/b/g/n/ac, ಡ್ಯುಯಲ್ ಬ್ಯಾಂಡ್, ಎಫ್‌ಎಮ್ ರೇಡಿಯೋ, ಯುಎಸ್‌ಬಿ ಟೈಪ್-ಸಿ 2.0, ಫಿಂಗರ್‌ಪ್ರಿಂಟ್ ಸೆನ್ಸರ್ ಸೇರಿದಂತೆ ಅನೇಕ ಆಕರ್ಷಕ ಸೌಲಭ್ಯ ಪಡೆದುಕೊಂಡಿದೆ.


Click it and Unblock the Notifications








