ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ನಿಮ್ಮ ಮೊಬೈಲ್‌ಗೆ ಸಂದೇಶ ಬರಲೇಬೇಕು?
ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 19 ರಿಂದ ಚಾಲನೆ ಸಿಗಲಿದೆ. ಇದಕ್ಕಾಗಿ ಸರ್ಕಾರ ಸರ್ವ ರೀತಿಯಲ್ಲು ಸಿದ್ಧತೆ ನಡೆಸಿದ್ದು, ಈ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬಾಳ್ಕರ್ ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲ ಅರ್ಜಿ ಸಲ್ಲಿಕೆಗೆ ಕೆಲವು ಮಾನದಂಡಗಳನ್ನು ನಿಗದಿಪಡಿಸಿದ್ದಾರೆ.
ಹೌದು, ಗೃಹಜ್ಯೋತಿಗೆ ಅಪ್ಲಿಕೇಶನ್ ಹಾಕಿದ ರೀತಿಯಲ್ಲಿ ನೀವು ಮನೆಯಲ್ಲಿಯೇ ಕುಳಿತು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ. ಸರ್ಕಾರ ನಿಗದಿಪಡಿಸಿದ ಕೆಲವೇ ಕೆಲ ಸೇವಾ ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬೇಕಾದ ಅನಿವಾರ್ಯತೆಯಿದೆ. ಅಷ್ಟೇ ಅಲ್ಲ ಎಸ್‌ಎಂಎಸ್ ಮೂಲಕವೂ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಹಾಗಾದ್ರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವ ದಾಖಲೆಗಳು ಬೇಕು? ಯಾರೆಲ್ಲಾ ಅರ್ಹರು? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರವನ್ನು ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ ಯಾವಾಗ?
ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಇದೇ ಜುಲೈ 19 ರಂದು ಚಾಲನೆ ನೀಡಲು ತಯಾರ ನಡೆಸಿದೆ. ವಿದಾನಸೌದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಜುಲೈ 19ರ ಸಂಜೆ 5:30ಕ್ಕೆ ಸಿ.ಎಂ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರದ ಕನಸಿನ ಕೂಸದ ಬಡಕಡುಟುಂಬದ ಮನೆ ಯಜಮಾನಿಗೆ ಮಾಸಿಕ ಎರಡು ಸಾವಿರ ರೂ. ನೀಡುವ ಯೋಜನೆ ಅಧಿಕೃತವಾಗಿ ಪ್ರಾರಂಭವಾಗಲಿದೆ.
ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂ.ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ?
ಗೃಹಜ್ಯೋತಿ ಯೋಜನೆಗೆ ಮನೆಯಲ್ಲಿಯೆ ಕುಳಿತು ಅರ್ಜಿ ಸಲ್ಲಿಸಿದಂತೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಸಾದ್ಯವಿಲ್ಲ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಸರ್ಕಾರ ನಿಗದಿಪಡಿಸಿದ ಗ್ರಾಮ ಒನ್, ಕರ್ನಾಟಕ ಒನ್ ಬೆಂಗಳೂರು ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಅರ್ಜಿ ಸಲ್ಲಿಸಬಹುದು. ಇದಿಷ್ಟೇ ಅಲ್ಲ ನೀವು ಯಾವಾಗ ಬೇಕಂದ್ರೆ ಆವಾಗ ಹೋಗಿ ಅರ್ಜಿ ಸಲ್ಲಿಸುವುದಕ್ಕೆ ಸಾದ್ಯವಿಲ್ಲ. ರೇಷನ್ ಕಾರ್ಡ್‌ನಲ್ಲಿ ಗುರುತಿಸಲಾದ ಪ್ರತಿಯೊಬ್ಬ ಯಜಮಾನಿ ಮಹಿಳೆಗೆ ಅರ್ಜಿ ಸಲ್ಲಿಸುವುದಕ್ಕೆ ದಿನಾಂಕ, ಸಮಯ, ಹಾಗೂ ನೋಂದಣಿ ಮಾಡಿಸುವ ಸ್ಥಳದ ವಿವರಗಳನ್ನು ಸಂದೇಶದ ಮೂಲಕ ಕಳುಹಿಸಲಾಗುತ್ತದೆ. ಆ ವಿವರಗಳು ಲಬಿಸಿದ ನಂತರವೇ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹಳ್ಳಿಗಳಲ್ಲಿ ವಾಸಿಸುವ ಮಹಿಳೆಯರು ತಮ್ಮ ಸಮೀಪದ ಗ್ರಾಮಒನ್ ಇಲ್ಲವೇ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಹೋಗಿ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಹೀಗೆ ಪ್ರತಿದಿನ ಬೆಳಿಗ್ಗೆ ಹಾಗೂ ಮಧ್ಯಾಹ್ನ ತಲಾ 30 ಫಲಾನುಭವಿಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳು ಸಾಧ್ಯವಾಗಲಿದೆ. ಇದರಿಂದ ರಾಜ್ಯದ್ಯಂತ ಪ್ರತಿನಿತ್ಯ 6.50 ಲಕ್ಷ್ ಮಂದಿ ಹೆಸರು ನೋಂದಾಯಿಸಿಕೊಳ್ಳಲು ಸಾದ್ಯವಾಗಲಿದೆ. ಒಂದು ವೇಳೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಹೋಗಲು ಸಾಧ್ಯವಾಗದೇ ಇದ್ದಲ್ಲಿ ಅದೇ ಸೇವಾ ಕೇಂದ್ರಗಳಿಗೆ ಮುಂದಿನ ದಿನಗಳಲ್ಲಿ ಸಂಜೆ 5 ರಿಂದ 7 ರವರೆಗೆ ಮಾತ್ರ ನೋಂದಾಯಿಸಲು ಅವಕಾಶ ನೀಡಲಾಗುತ್ತದೆ ಎಂದು ಹೇಳಲಾಗಿದೆ.

ಮನೆ ಬಾಗಿಲಿಗೆ ಬರಲಿದ್ದಾರೆ ಪ್ರಜಾಪ್ರತಿನಿಧಿಗಳು!
ಇಲ್ಲದೇ ಸರ್ಕಾರದಿಂದ ಗುರುತಿಸಲ್ಪಡುವ ಪ್ರಜಾಪ್ರತಿನಿಧಿಗಳು ನಿಮ್ಮ ಮನೆಗೆ ಬೇಟಿ ನೀಡಿ ಗೃಹಲಕ್ಷ್ಮಿ ಯೋಜನೆಗೆ ನಿಮ್ಮ ಹೆಸರನ್ನು ನೋಂದಣಿ ಮಾಡಿಸುವುದಕ್ಕೆ ಅವಕಾಶ ನೀಡಲಾಗಿದೆ. ಆದರೆ ನೀವು ನಿಗದಿತ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿದರೆ ಮಂಜೂರಾತಿ ಪತ್ರವನ್ನು ಸ್ಥಳದಲ್ಲಿ ಪಡೆದುಕೊಳ್ಳಬಹುದು. ಆದರೆ ನೀವು ಪ್ರಜಾಪ್ರತಿನಿಧಿ ಮೂಲಕ ಹೆಸರು ನೋಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರವನ್ನು ಕೆಲ ದಿನಗಳ ನಂತರ ಮನೆಗೆ ತಲುಪಿಸಲಾಗುವುದು ಎನ್ನಲಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು?
ಇನ್ನು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ನೋಂದಣಿ ಮತ್ತು ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ ಬ್ಯಾಂಕ್ ಖಾತೆಯ ಪಾಸ್ ಬುಕ್ ಮಾಹಿತಿ ಕಡ್ಡಾಯವಾಗಿ ಬೇಕಿದೆ.
ಯೋಜನೆಗೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?
ಗೃಹಲಕ್ಷ್ಮಿ ಯೋಜನೆಯಡಿ ಹೆಸರು ನೋಂದಣಿ ಮಾಡಿಕೊಳ್ಳಬೇಕಾದರೆ ಯಜಮಾನಿಯ ಹೆಸರು ಪಡಿತರ ಚೀಟಿಯಲ್ಲಿ ಇರಬೇಕು. ಆದರೆ ಮನೆಯ ಯಜಮಾನಿಯ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿ.ಎಸ್.ಟಿ. ಪಾವತಿದಾರರಾಗಿರಬಾರದು.
ಗೃಹಲಕ್ಷ್ಮಿ ಯೋಜನೆಗೆ ಬರಲಿದೆ ಸಹಾಯವಾಣಿ
ಇದಲ್ಲದೆ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಹೆಸರು ನೊಂದಣಿ, ನಿಗದಿಪಡಿಸಿರುವ ದಿನಾಂಕ, ಸಮಯ ಮತ್ತು ಸ್ಥಳಕ್ಕೆ ಸಂಬಂಧಪಟ್ಟಂತೆ ನಿಮ್ಮ ಸಂದೇಹಗಳನ್ನು ಪರಿಹರಿಸಿಕೊಳ್ಳುವುದಕ್ಕಾಗಿ ಸಹಾಯವಾಣಿ ಸಂಖ್ಯೆ 1902 ಶುರುಮಾಡಿದೆ. ಈ ಸಂಖ್ಯೆಗೆ ಕರೆ ಮಾಡುವ ಮೂಲಕ ನಿಮ್ಮ ಗೊಂದಲಗಳನ್ನು ಬಗೆಹರಿಸಿಕೊಳ್ಳಬಹುದು. ಇಲ್ಲದಿದ್ದರೆ 8147500500 ಗೆ ಎಸ್‌ಎಂಎಸ್ ಅಥವಾ ವಾಟ್ಸ್ ಆಪ್ ಮೂಲಕ ಸಂದೇಶ ಕಳುಹಿಸಿ ವಿವರ ಪಡೆದುಕೊಳ್ಳಬಹುದಾಗಿದೆ.


Click it and Unblock the Notifications








