Home
ಟೆಕ್ ನೌಕರಿ

Gruhalakshmi Scheme: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಲಿಸ್ಟ್‌ ಬಹಿರಂಗ.. ನಿಮ್ಮ ಹೆಸರಿದೆಯಾ ಚೆಕ್‌ ಮಾಡಿ!

ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಇದೇ ಆಗಸ್ಟ್‌ 30ರಂದು ಅಧಿಕೃತ ಚಾಲನೆ ಸಿಗಲಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಅಂದೇ ಹಣ ಜಮಾವಣೆ ಆಗಲಿದೆ. ಸದ್ಯ ಇದೀಗ ಯಾರೆಲ್ಲಾ ಗೃಹಲಕ್ಷ್ಮಿ ಯೋಜನೆ ಫಲಾನುಭವಿಯಾಗಿ ಆಯ್ಕೆಯಾಗಿದ್ದಾರೆ ಅನ್ನೊದು ಬಹಿರಂಗವಾಗಿದೆ.

ಹೌದು, ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದೀರಾ, ನಿಮ್ಮ ಹೆಸರು ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಲಿಸ್ಟ್‌ನಲ್ಲಿದೆಯಾ ಅನ್ನೋದನ್ನ ಇದೀಗ ಪರಿಶೀಲಿಸಬಹುದಾಗಿದೆ. ಇದಕ್ಕಾಗಿ ಸರ್ಕಾರ ನೀಡಿರುವ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ ನಿಮ್ಮ ಜಿಲ್ಲೆ, ತಾಲೂಕು ಮಾಹಿತಿಯನ್ನು ನಮೂದಿಸಬೇಕಾಗುತ್ತದೆ. ಹಾಗಾದ್ರೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಲಿಸ್ಟ್‌ನಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಲಿಸ್ಟ್‌ ಬಹಿರಂಗ..ನಿಮ್ಮ ಹೆಸರಿದೆಯಾ ಚೆಕ್‌ಮಾಡಿ

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿ ಬಹಿರಂಗವಾಗಿದೆ. ನಿಮ್ಮ ಹೆಸರು ಕೂಡ ಫಲಾನುಭವಿಗಳ ಲಿಸ್ಟ್‌ನಲ್ಲಿದೆಯಾ ಅನ್ನೊದನ್ನ ಪರಿಶೀಲಿಸಬಹುದಾಗಿದೆ. ಇದಕ್ಕಾಗಿ ನೀವು https://ahara.kar.nic.in/WebForms/Show_Village_List.aspx ಈ ವೆಬ್‌ಸೈಟ್‌ ಮೇಲೆ ಕ್ಲಿಕ್‌ ಮಾಡಬೇಕಾಗುತ್ತದೆ. ನಂತರ ಇದರಲ್ಲಿ ನಿಮ್ಮ ಜಿಲ್ಲ, ನಿಮ್ಮ ತಾಲೂಕು, ನಿಮ್ಮ ಗ್ರಾಮ ಪಂಚಾಯಿತಿ ಹಾಗೂ ಊರಿನ ಹೆಸರನ್ನು ನಮೂದಿಸಬೇಕಾಗುತ್ತದೆ. ಇದೀಗ ಫಲಾನುಭವಿಗಳ ಪಟ್ಟಿ ಬರಲಿದ್ದು, ಇದರಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಬಹುದು.

ಗೃಹಲಕ್ಷ್ಮಿ ಯೋಜನೆಗ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಕಾಣಿಸದಿದ್ದರೆ ಆತಂಕ ಪಡಬೇಕಾದ ಅನಿವಾರ್ಯತೆಯಿಲ್ಲ. ಏಕೆಂದರೆ ಆಗಸ್ಟ್‌ 30ರಂದು ಅಧಿಕೃತ ಚಾಲನೆ ಸಿಗುವುದರಿಂದ ಅಲ್ಲಿಯ ತನಕ ನಿಮ್ಮ ಹೆಸರು ಲಿಸ್ಟ್‌ನಲ್ಲಿ ಅಪ್ಡೇಟ್‌ ಆಗಲಿದೆ. ಇನ್ನು ಗೃಹಲಕ್ಷ್ಮಿ ಯೋಜನೆಯಲ್ಲಿ ಪ್ರತಿ ಮನೆಯ ಯಜಮಾನಿಯ ಬ್ಯಾಂಕ್‌ ಖಾತೆಗೆ ಪ್ರತಿ ತಿಂಗಳು 2000ರೂ.ಗಳು ಜಮಾವಣೆ ಆಗಲಿದೆ. ಇನ್ನು ಈ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆ ಯಾವುದೇ ಅಂತಿಮ ದಿನಾಂಕವಿಲ್ಲದೆ ಇರುವುದರಿಂದ ಯಾವಾಗ ಬೇಕಾದರೂ ಅರ್ಜಿ ಸಲ್ಲಿಸಬಹುದಾಗಿದೆ.

ಇನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಕಾಂಗ್ರೆಸ್‌ ರಾಷ್ಟ್ರೀಯ ನಾಯಕ ರಾಹುಲ್‌ ಗಾಂದಿ ಅವರಿಂದ ಚಾಲನೆ ನೀಡಿಸಲು ಮುಂದಾಗಿದೆ. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಮೈಸೂರಿನಲ್ಲಿ ಆಗಸ್ಟ್‌ 30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗಲಿದೆ. ಈ ಸಮಯದಲ್ಲಿ ಕರ್ನಾಟಕದ ಆರು ಸಾವಿರಕ್ಕೂ ಅಧಿಕ ಪಂಚಾಯಿತಿಗಳು, ಹಾಗೂ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆಗಳಲ್ಲೂ ಕೂಡ ಏಕಕಾಲಕ್ಕೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವುದಕ್ಕೆ ತಯಾರಿ ನಡೆದಿದೆ.

ಇನ್ನು ಈಗಾಗಲೇ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಸುಮಾರು 1.10 ಕೋಟಿ ಸಂಖ್ಯೆಯ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ. ಗೃಹಲಕ್ಷ್ಮಿ ಯೋಜನೆಯು ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಸರ್ಕಾರ ತೆಗೆದುಕೊಂಡಿರುವ ಮಹತ್ವದ ಕ್ರಮವಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು?
ಇನ್ನು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ನೋಂದಣಿ ಮತ್ತು ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ ಬ್ಯಾಂಕ್ ಖಾತೆಯ ಪಾಸ್ ಬುಕ್ ಮಾಹಿತಿ ಕಡ್ಡಾಯವಾಗಿ ಬೇಕಿದೆ.

ಯೋಜನೆಗೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?
ಗೃಹಲಕ್ಷ್ಮಿ ಯೋಜನೆಯಡಿ ಹೆಸರು ನೋಂದಣಿ ಮಾಡಿಕೊಳ್ಳಬೇಕಾದರೆ ಯಜಮಾನಿಯ ಹೆಸರು ಪಡಿತರ ಚೀಟಿಯಲ್ಲಿ ಇರಬೇಕು. ಆದರೆ ಮನೆಯ ಯಜಮಾನಿಯ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿ.ಎಸ್.ಟಿ. ಪಾವತಿದಾರರಾಗಿರಬಾರದು.

ಮನೆ ಬಾಗಿಲಿಗೆ ಬರಲಿದ್ದಾರೆ ಪ್ರಜಾಪ್ರತಿನಿಧಿಗಳು!
ಇದಲ್ಲದೇ ಸರ್ಕಾರದಿಂದ ಗುರುತಿಸಲ್ಪಡುವ ಪ್ರಜಾಪ್ರತಿನಿಧಿಗಳು ನಿಮ್ಮ ಮನೆಗೆ ಬೇಟಿ ನೀಡಿ ಗೃಹಲಕ್ಷ್ಮಿ ಯೋಜನೆಗೆ ನಿಮ್ಮ ಹೆಸರನ್ನು ನೋಂದಣಿ ಮಾಡಿಸುವುದಕ್ಕೆ ಅವಕಾಶ ನೀಡಲಾಗಿದೆ. ಆದರೆ ನೀವು ನಿಗದಿತ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿದರೆ ಮಂಜೂರಾತಿ ಪತ್ರವನ್ನು ಸ್ಥಳದಲ್ಲಿ ಪಡೆದುಕೊಳ್ಳಬಹುದು. ಆದರೆ ನೀವು ಪ್ರಜಾಪ್ರತಿನಿಧಿ ಮೂಲಕ ಹೆಸರು ನೋಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರವನ್ನು ಕೆಲ ದಿನಗಳ ನಂತರ ಮನೆಗೆ ತಲುಪಿಸಲಾಗುವುದು ಎನ್ನಲಾಗಿದೆ.

Best Mobiles in India

English summary
Gruhalakshmi Scheme beneficiaries list revealed.. How Check if your name is there!
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+