ಮೋದಿ ಸರ್ಕಾರದಿಂದ ಸಿಹಿಸುದ್ದಿ! 50,000 ಹೊಲಿಗೆ ಯಂತ್ರ ಉಚಿತ; ಅರ್ಜಿ ಸಲ್ಲಿಸುವುದು ಹೇಗೆ?
ಪ್ರಧಾನಿ ನರೇಂದ್ರ ಮೋದಿ (PM Modi) ಮಹಿಳೆಯರಿಗೆ ದೊಡ್ಡ ಸಿಹಿಸುದ್ದಿ ನೀಡಿದ್ದಾರೆ. 50 ಸಾವಿರ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ (Free Shilai Machine Yojana 2024) ವಿತರಿಸುವುದಾಗಿ ಘೋಷಣೆ ಮಾಡಿದ್ದಾರೆ. ಹೌದು, ಕರ್ನಾಟಕ ಸೇರಿದಂತೆ ಗುಜರಾತ್, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ ರಾಜ್ಯಗಳ ಮಹಿಳೆಯರು ಈ ಯೋಜನೆಯ ಲಾಭ ಪಡೆಯಬಹುದು. ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ. ಬನ್ನಿ, ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಬೇಕಿರುವ ದಾಖಲೆಗಳು ಮತ್ತು ಅರ್ಹತೆಗಳೇನು? ಎನ್ನುವುದನ್ನು ತಿಳಿಯೋಣ.
ಕೇಂದ್ರ ಸರ್ಕಾರ ದೇಶದ ಬಡ ಕುಟುಂಬಗಳ ಮಹಿಳೆಯರಿಗಾಗಿ ಈ ಯೋಜನೆ ಪ್ರಾರಂಭಿಸಿದೆ. ಸರ್ಕಾರವು ಬಡ ಮತ್ತು ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಆರ್ಥಿಕ ನೆರವು ನೀಡುತ್ತದೆ. ಈ ಮೂಲಕ ಮಹಿಳೆಯರ ಸ್ವಾವಲಂಬಿ ಬದುಕಿಗೆ ಸಹಾಯ ಮಾಡುವ ಉದ್ದೇಶ ಹೊಂದಿದೆ. ಪ್ರಸ್ತುತ, ಈ ಯೋಜನೆಯಡಿ 50 ಸಾವಿರ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಿಸಲಾಗುತ್ತದೆ. ಮಹಿಳೆಯರು ಟೈಲರಿಂಗ್ ಕೆಲಸದ ಮೂಲಕ ಮನೆಯಿಂದಲೇ ಹಣ ಗಳಿಸಬಹುದು. ನೀವು, ಸ್ವ ಉದ್ಯೋಗದ ಜೊತೆಗೆ ಆರ್ಥಿಕವಾಗಿ ಸಬಲರಾಗಬಹುದು.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಿರುವ ಅರ್ಹತೆಗಳು
- ಭಾರತೀಯ ಪೌರತ್ವ: ಭಾರತದ ಪೌರತ್ವ ಹೊಂದಿರುವ ಮಹಿಳೆಯರು ಮಾತ್ರ ಈ ಯೋಜನೆ ಲಾಭ ಪಡೆಯಬಹುದು.
- ವಯೋಮಿತಿ: 18 ರಿಂದ 45 ವರ್ಷ ವಯಸ್ಸಿನ ಮಹಿಳೆಯರು ಅರ್ಜಿ ಸಲ್ಲಿಸಬಹುದು.
- ಆದಾಯ ಮಿತಿ: ಅರ್ಜಿದಾರರ (ಮಹಿಳೆಯ) ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಸರ್ಕಾರಿ ನೌಕರಿ: ಅರ್ಜಿದಾರರ ಕುಟುಂಬದ ಸದಸ್ಯರು ಸರ್ಕಾರಿ ಉದ್ಯೋಗದಲ್ಲಿದ್ದರೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ.
ಅರ್ಜಿ ಸಲ್ಲಿಸಲು ಯಾವೆಲ್ಲಾ ದಾಖಲೆ ಬೇಕು?
ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವು ಅಗತ್ಯ ದಾಖಲೆಗಳು ಬೇಕಿದೆ. ಅವುಗಳು ಈ ಕೆಳಗಿನಂತಿವೆ.
- ಆಧಾರ್ ಕಾರ್ಡ್
- ಜನನ ಪ್ರಮಾಣಪತ್ರ, ಆಧಾರ್ ಕಾರ್ಡ್
- ನಿವಾಸಿ (ವಾಸ ಸ್ಥಳ) ದೃಢೀಕರಣ ಪತ್ರ
- ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ (ಫೋಟೋ)
- ಆದಾಯ ಪ್ರಮಾಣಪತ್ರ
ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
ನೀವು ಉಚಿತ ಹೊಲಿಗೆ ಮೆಷಿನ್ ಯೋಜನೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅದು ಹೇಗೆ ಅಂತ ತಿಳಿಯಲು ಮುಂದೆ ಓದಿ.
* ನೀವು ಮೊದಲಿಗೆ ಈ ಯೋಜನೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.
* ವೆಬ್‌ಸೈಟ್‌ನಲ್ಲಿ ಉಚಿತ ಹೊಲಿಗೆ ಮೆಷಿನ್ ಯೋಜನೆ 2024 ಅರ್ಜಿ ಡೌನ್‌ಲೋಡ್ ಮಾಡಿಕೊಳ್ಳಿ.
* ಬಳಿಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಭರ್ತಿ ಮಾಡಿ
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದ ಮಹಿಳೆಯರು ಮಹಿಳಾ ಸಬಲೀಕರಣ ಕೇಂದ್ರ ಅಥವಾ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು.
ಈ ಯೋಜನೆ ಯಾವ ರಾಜ್ಯಗಳಲ್ಲಿ ಅನ್ವಯಿಸುತ್ತದೆ?
ಪ್ರಸ್ತುತ, ಈ ಯೋಜನೆಯನ್ನು ಆಯ್ದ ಕೆಲವು ರಾಜ್ಯಗಳಲ್ಲಿ ಪ್ರಾರಂಭಿಸಲಾಗಿದೆ. ಬಳಿಕ ದೇಶದಾದ್ಯಂತ ವಿಸ್ತರಣೆ ಮಾಡಲಾಗುವುದು. ಯೋಜನೆಯು ಈ ಕೆಳಗಿನ ರಾಜ್ಯಗಳಲ್ಲಿ ಚಾಲನೆಯಲ್ಲಿದೆ.
- ಕರ್ನಾಟಕ
- ರಾಜಸ್ಥಾನ
- ಗುಜರಾತ್
- ಮಹಾರಾಷ್ಟ್ರ
- ಮಧ್ಯಪ್ರದೇಶ
- ಉತ್ತರ ಪ್ರದೇಶ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮತ್ತು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ. ಈ ಯೋಜನೆಗಳಲ್ಲಿ ಉಚಿತ ಹೊಲಿಗೆ ಯಂತ್ರ ಯೋಜನೆಯು ಒಂದಾಗಿದೆ. ರಾಜ್ಯದ ಮಹಿಳೆಯರು ಈ ಯೋಜನೆಯ ಪ್ರಯೋಜನ ಪಡೆಯಬಹುದು. ಮೊದಲೇ ಹೇಳಿದಂತೆ ಸುಮಾರು 50 ಸಾವಿರ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಸಿಗಲಿದೆ.


Click it and Unblock the Notifications








