Just In
- 13 hrs ago
ಬೇರೆಯವರು ನಿಮ್ಮ ನೆಟ್ಫ್ಲಿಕ್ಸ್ ಖಾತೆ ಬಳಸುತ್ತಿದ್ದರೆ ತಿಳಿಯಲು ಹೀಗೆ ಮಾಡಿ?
- 18 hrs ago
ಈ ಯೋಜನೆಗಳನ್ನು ರೀಚಾರ್ಜ್ ಮಾಡಿದ್ರೆ, ನಿಮಗೆ ವ್ಯಾಲಿಡಿಟಿ ಬಗ್ಗೆ ಟೆನ್ಷನ್ ಇರಲ್ಲ!
- 22 hrs ago
LED ಡಿಸ್ಪ್ಲೇ ಹೊಂದಿರುವ ಅತ್ಯುತ್ತಮ ಪವರ್ಬ್ಯಾಂಕ್ಗಳ ಲಿಸ್ಟ್ ಇಲ್ಲಿದೆ!
- 1 day ago
ಇನ್ಸ್ಟಾಗ್ರಾಮ್ನಲ್ಲಿ ಬೇರೆಯವರ ಲಾಸ್ಟ್ ಸೀನ್ ನೋಡುವುದು ಹೇಗೆ?
Don't Miss
- News
ಹುಬ್ಬಳ್ಳಿ- ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಗೆ ಸಿಎಂ ಡೆಡ್ಲೈನ್
- Lifestyle
Today Rashi Bhavishya: ಸೋಮವಾರದ ದಿನ ಭವಿಷ್ಯ: ಮೇಷ, ಕರ್ಕ, ಕನ್ಯಾ, ಧನು ರಾಶಿಯವರು ಆರೋಗ್ಯದ ಬಗ್ಗೆ ಕಾಳಜಿವಹಿಸಿ
- Sports
ಭಾರತ vs ಐರ್ಲೆಂಡ್: ಮೊದಲ ಪಂದ್ಯದಲ್ಲಿ ಭಾರತಕ್ಕೆ 7 ವಿಕೆಟ್ಗಳ ಭರ್ಜರಿ ಜಯ
- Movies
ರಾಘವೇಂದ್ರ ರಾಜ್ಕುಮಾರ್ ನಿರ್ಮಾಣದಲ್ಲಿ 'ವಿಜಯದಶಮಿ' ಧಾರಾವಾಹಿ: ಯಾವ ಸಿನಿಮಾಗೂ ಕಮ್ಮಿಯಿಲ್ಲ!
- Finance
Gold Rate Today: ನಿಮ್ಮ ನಗರದಲ್ಲಿ ಜೂ.26ರಂದು ಚಿನ್ನದ ಬೆಲೆ ಎಷ್ಟಿದೆ ನೋಡಿ
- Education
PGCIL Recruitment 2022 : 32 ಡೆಪ್ಯುಟಿ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳು...
- Travel
ಕರ್ನಾಟಕದಲ್ಲಿರುವ ಈ 5 ಹೆಸರಾಂತ ವಿಷ್ಣುದೇವರ ದೇವಾಲಯಗಳಿಗೆ ಭೇಟಿ ಕೊಟ್ಟು ಧನ್ಯರಾಗಿ!
ನಿಮ್ಮ ಹೆಸರಿನಲ್ಲಿ ಎರಡನೇ ಇನ್ಸ್ಟಾಗ್ರಾಮ್ ಖಾತೆ ತೆರೆಯಲು ಹೀಗೆ ಮಾಡಿರಿ!
ಜನಪ್ರಿಯ ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಇನ್ಸ್ಟಾಗ್ರಾಮ್ ಅಧಿಕ ಬಳಕೆದಾರರನ್ನು ಆಕರ್ಷಿಸಿದೆ. ಇನ್ಸ್ಟಾಗ್ರಾಮ್ನ ಕಿರು ವಿಡಿಯೋ ಫೀಚರ್ ರೀಲ್ ಸಹ ಈಗಾಗಲೇ ಸಾಕಷ್ಟು ಜನಪ್ರಿಯತೆ ಪಡೆದಿದೆ. ಅದರೊಂದಿಗೆ ಇನ್ಸ್ಟಾಗ್ರಾಮ್ನ ಕೆಲವೊಂದು ಫೀಚರ್ಸ್ಗಳು ಬಳಕೆದಾರರಿಗೆ ಬಹು ಉಪಯುಕ್ತ ಎನಿಸಿವೆ. ಹಾಗೆಯೇ ಒಂದೇ ಅಪ್ಲಿಕೇಶನ್ನೊಂದಿಗೆ ಎರಡು ಖಾತೆಗಳನ್ನು (Second Instagram Account) ತೆರೆಯಲು ಅವಕಾಶ ಇದ್ದು, ಈ ಆಯ್ಕೆಯು ಸಹ ಬಳಕೆದಾರರನ್ನು ಆಕರ್ಷಿಸಿದೆ.

ಹೌದು, ಇನ್ಸ್ಟಾಗ್ರಾಮ್ ಅಪ್ಲಿಕೇಶನ್ನಲ್ಲಿ ಬಳಕೆದಾರರು ಒಂದೇ ವೇಳೆಗೆ ಬಹು ಖಾತೆಗಳನ್ನು ತೆರೆಯಲು ಅವಕಾಶ ಇದೆ. ಮೊದಲು, ಒಬ್ಬ ಬಳಕೆದಾರ ಕೇವಲ ಒಂದು ಇನ್ಸ್ಟಾಗ್ರಾಮ್ (Instagram) ಖಾತೆಯನ್ನು ನಿರ್ವಹಿಸಬಹುದಾಗಿತ್ತು. ಆದರೆ ಈಗ ಬಹು ಖಾತೆ ನಿರ್ವಹಿಸಲು ಅವಕಾಶ ಇದೆ. ಇನ್ಸ್ಟಾಗ್ರಾಮ್ ಒಂದೇ ಫೋನ್ನಲ್ಲಿ ಒಟ್ಟು ಐದು ಖಾತೆಗಳನ್ನು ಅನುಮತಿಸಿದೆ. ಅವುಗಳಲ್ಲಿ ಒಂದು ವೈಯಕ್ತಿಕ, ಒಂದು ಅಧಿಕೃತ ಹಾಗೂ ಮೂರು ಇತರೆ ಖಾತೆಗಳಿಗೆ ಅವಕಾಶ ಇದೆ.
ಇನ್ಸ್ಟಾಗ್ರಾಮ್ ಆಪ್ನ ಈ ಆಯ್ಕೆಯು ಆಂಡ್ರಾಯ್ಡ್ (Android) ಮತ್ತು ಐಓಎಸ್ (iOS) ಪ್ಲಾಟ್ಫಾರ್ಮ್ಗಳಿಗೆ ಲಭ್ಯವಿದೆ. ಈ ಆಯ್ಕೆಯಿಂದಾಗಿ ಬಳಕೆದಾರರು ಒಂದೇ ಮೊಬೈಲ್ನಲ್ಲಿ ವೈಯಕ್ತಿಕ ಮತ್ತು ವೃತ್ತಿಪರ ಇನ್ಸ್ಟಾಗ್ರಾಮ್ ಖಾತೆಗಳನ್ನು ಸುಲಭವಾಗಿ ನಿರ್ವಹಿಸಬಹುದಾಗಿದೆ. ಹಾಗಾದರೇ ಒಂದೇ ಮೊಬೈಲ್ನಲ್ಲಿ ಬಹು ಇನ್ಸ್ಟಾಗ್ರಾಮ್ ಖಾತೆಗಳನ್ನು ತೆರೆಯುವುದು ಹೇಗೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಈ ಹಂತಗಳನ್ನು ಅನುಸರಿಸಿ:
ಹಂತ 1: ನಿಮ್ಮ ಸ್ಮಾರ್ಟ್ಫೋನ್ನಿಂದ ಇನ್ಸ್ಟಾಗ್ರಾಮ್ ಅಪ್ಲಿಕೇಶನ್ ಅನ್ನು ತೆರೆಯಿರಿ
ಹಂತ 2: ಈಗ ಕೆಳಗಿನ ಬಲ ಮೂಲೆಯಲ್ಲಿರುವ ಡಿಪಿ ಅನ್ನು ಕ್ಲಿಕ್ ಮಾಡುವ ಮೂಲಕ ಪ್ರೊಫೈಲ್ಗೆ ಹೋಗಿ.
ಹಂತ 3: ಗೇರ್ ಆಯ್ಕೆಮಾಡಿ ಅಥವಾ ಪರದೆಯ ಮೇಲಿನ ಬಲ ಭಾಗದ ಮೂಲೆಯಲ್ಲಿರುವ ಮೂರು ಚುಕ್ಕೆಗಳನ್ನು ಆಯ್ಕೆಮಾಡಿ.
ಹಂತ 4: ಮುಂದೆ, ಕೆಳಗೆ ಸ್ಕ್ರಾಲ್ ಮಾಡಿ ಮತ್ತು ಖಾತೆಯನ್ನು ಸೇರಿಸಿ ಆಯ್ಕೆಮಾಡಿ.
ಹಂತ 5: ನಿಮ್ಮ ಬಳಕೆದಾರ ಹೆಸರು ಮತ್ತು ಪಾಸ್ವರ್ಡ್ ಅನ್ನು ನಮೂದಿಸಿ ಅಥವಾ ನಿಮ್ಮ ಫೇಸ್ಬುಕ್ ಖಾತೆಯೊಂದಿಗೆ ಲಾಗ್ ಇನ್ ಮಾಡಿ

ಒಂದು ಖಾತೆಯಿಂದ ಇನ್ನೊಂದಕ್ಕೆ ಬದಲಾಯಿಸಲು ಹೀಗೆ ಮಾಡಿ:
ಹಂತ 1: ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದ ನಂತರ, ಪ್ರೊಫೈಲ್ ಪುಟಕ್ಕೆ ಹೋಗಿ ಮತ್ತು ನಿಮ್ಮ ಬಳಕೆದಾರ ಹೆಸರನ್ನು ಟ್ಯಾಪ್ ಮಾಡಿ, ಅದನ್ನು ಮೇಲಿನ ಎಡ ಮೂಲೆಯಲ್ಲಿ ನೀಡಲಾಗಿದೆ.
ಹಂತ 2: ಈಗ ನೀವು ಕಾರ್ಯನಿರ್ವಹಿಸಲು ಬಯಸುವ ಖಾತೆಯನ್ನು ಆಯ್ಕೆಮಾಡಿ ಮತ್ತು ನಿರ್ವಹಿಸಿ.
ಇನ್ಸ್ಟಾಗ್ರಾಮ್ ಖಾತೆಯನ್ನು ಡಿಲೀಟ್ ಮಾಡುವುದು ಹೇಗೆ?
ಹಂತ 1: ಪ್ರೊಫೈಲ್ ಪುಟಕ್ಕೆ ಹೋಗಿ ಮತ್ತು ಗೇರ್ ಐಕಾನ್ ಆಯ್ಕೆಮಾಡಿ.
ಹಂತ 2: ಕೆಳಕ್ಕೆ ಸ್ಕ್ರಾಲ್ ಮಾಡಿ ಮತ್ತು ಲಾಗ್ಔಟ್ ಆಯ್ಕೆಗೆ ಹೋಗಿ, ಆಡ್ ಖಾತೆಯ ಬಳಿಯೇ ನೀಡಲಾಗಿದೆ.
ಹಂತ 3: ಡಿಲೀಟ್ ಮಾಡ ಬಯಸುವ ಯಾವುದೇ ಖಾತೆಯಿಂದ ಲಾಗ್ ಔಟ್ ಮಾಡಿ ಅಥವಾ ನೀವು ಎಲ್ಲಾ ಖಾತೆಗಳಿಂದ ಲಾಗ್ ಔಟ್ ಮಾಡಬಹುದು. ಇದು ಎಲ್ಲಾ ಖಾತೆಗಳನ್ನು ತೆಗೆದುಹಾಕುತ್ತದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999