Home
ಟೆಕ್ ನೌಕರಿ

RCB vs DC: ಆರ್‌ಸಿಬಿಗೆ 'ಕನ್ನಡಿಗ'ನ ಭಯ.. RCB ಪ್ಲೇಯಿಂಗ್ 11, ಪಂದ್ಯದ ಸಮಯ, ಸ್ಟ್ರೀಮಿಂಗ್.. ಇಲ್ಲಿದೆ ವಿವರ

Royal Challengers Bengaluru vs Delhi Capitals: ಐಪಿಎಲ್‌ನಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗಲಿವೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಜೆ 7.30ಕ್ಕೆ ಈ 24ನೇ ಪಂದ್ಯ ನಡೆಯಲಿದೆ. ಎರಡೂ ತಂಡಗಳು ಈ ಆವೃತ್ತಿಯಲ್ಲಿ ಉತ್ತಮ ಆರಂಭವನ್ನು ಕಂಡಿವೆ. ಡೆಲ್ಲಿ ಈಯವರೆಗೆ ಅಜೇಯ ದಾಖಲೆಯನ್ನು ಕಾಯ್ದುಕೊಂಡಿದ್ದು, ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಮತ್ತೊಂದೆಡೆ, ಆರ್‌ಸಿಬಿ ಕೂಡ ಅದ್ಭುತ ಲಯದಲ್ಲಿದ್ದು, ಇಲ್ಲಿಯವರೆಗೆ ಆಡಿರುವ ನಾಲ್ಕು ಕೇವಲ ಒಂದು ಪಂದ್ಯವನ್ನು ಮಾತ್ರ ಸೋತಿದೆ.

ಡೆಲ್ಲಿ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಈವರೆಗಿನ ಅತ್ಯಧಿಕ ಮೊತ್ತವಾದ 210 ರನ್‌ಗಳನ್ನು ಬೆನ್ನಟ್ಟಿಟ್ಟಿದೆ. ಬಳಿಕ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 7 ವಿಕೆಟ್‌ಗಳ ಗೆಲುವು ಸಾಧಿಸಿತು. ಇತ್ತೀಚೆಗೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 25 ರನ್‌ಗಳ ಭರ್ಜರಿ ಜಯ ಗಳಿಸಿದೆ. ಉತ್ತಮ ಫಾರ್ಮ್‌ನಲ್ಲಿರುವ ಆಟಗಾರರಿಂದ ತುಂಬಿರುವ ಡೆಲ್ಲಿ ತಂಡವು ತಮ್ಮ ಅಜೇಯ ಓಟವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತದೆ. ಫಾಫ್ ಡು ಪ್ಲೆಸಿಸ್ ತಂಡಕ್ಕೆ ಮರಳುತ್ತಿರುವುದು ಆತ್ಮವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸುತ್ತಿದೆ.

RCB vs DC: ಪ್ಲೇಯಿಂಗ್ 11, ಲೈವ್ ಟಾಸ್ ಮತ್ತು ಪಂದ್ಯದ ಸಮಯ, ಸ್ಟ್ರೀಮಿಂಗ್

ಮತ್ತೊಂದೆಡೆ, ಆರ್‌ಸಿಬಿ ತಂಡವು ಭರ್ಜರಿ ಪ್ರದರ್ಶನ ನೀಡುತ್ತಿದೆ. ಹಾಲಿ ಚಾಂಪಿಯನ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 7 ವಿಕೆಟ್‌ಗಳ ಗೆಲುವು ಸಾಧಿಸಿತು. ಬಳಿಕ ಚೆಪಾಕ್‌ನಲ್ಲಿ ಸಿಎಸ್‌ಕೆ ವಿರುದ್ಧ 50 ರನ್‌ಗಳ ಗೆಲುವು ಸಾಧಿಸಿದೆ. 2008ರ ಬಳಿಕ ಈ ಸ್ಥಳದಲ್ಲಿ ಸಿಎಸ್‌ಕೆ ವಿರುದ್ಧ ಆರ್‌ಸಿಬಿಯ ಮೊದಲ ಗೆಲುವು ಇದಾಗಿದೆ. ಇನ್ನು ಗುಜರಾತ್ ಟೈಟಾನ್ಸ್ ವಿರುದ್ಧ ತವರಿನಲ್ಲಿ ಸೋತ ನಂತರ, ವಾಂಖೆಡೆಯಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ಅನ್ನು ಸೋಲಿಸಿ ಚೇತರಿಸಿಕೊಂಡಿದೆ. ಹೀಗಾಗಿ, ಇಂದಿನ ಪಂದ್ಯವು ರೋಮಾಂಚಕವಾಗಿರಲಿದೆ.

ಎರಡೂ ತಂಡಗಳ ಹಲವಾರು ಸ್ಟಾರ್ ಆಟಗಾರರು ಇಂದು ಮೈದಾನಕ್ಕಿಳಿಯಲಿದ್ದಾರೆ. ಆರ್‌ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಜೋಶ್ ಹ್ಯಾಜಲ್‌ವುಡ್‌.. ಡೆಲ್ಲಿ ಪರ ಕನ್ನಡಿಗ ಕೆ.ಎಲ್ ರಾಹುಲ್, ಅಕ್ಷರ್ ಪಟೇಲ್, ಮಿಚೆಲ್ ಸ್ಟಾರ್ಕ್ ಅವರಂತಹ ಪ್ರಮುಖ ಆಟಗಾರರು ಪಂದ್ಯ ಫಲಿತಾಂಶವನ್ನು ಬದಲಿಸುವಲ್ಲಿ ದೊಡ್ಡ ಪಾತ್ರ ವಹಿಸಲಿದ್ದಾರೆ. ಈ ಎರಡು ತಂಡಗಳ ನಡುವೆ ರೋಮಾಂಚಕಾರಿ ಕಾಳಗವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯುತ್ತಿದ್ದಾರೆ.

RCB vs DC ಪ್ಲೇಯಿಂಗ್ 11

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ 11 (ಸಂಭಾವ್ಯ): ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿ.ಕೀ), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯಶ್ ದಯಾಲ್, ಜೋಶ್ ಹ್ಯಾಜಲ್‌ವುಡ್.

ಇಂಪ್ಯಾಕ್ಟ್ ಪ್ಲೇಯರ್: ಸುಯಶ್ ಶರ್ಮಾ.

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ 11 (ಸಂಭಾವ್ಯ): ಫಾಫ್ ಡು ಪ್ಲೆಸಿಸ್, ಜೇಕ್ ಫ್ರೇಸರ್ ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್, ಕೆ.ಎಲ್ ರಾಹುಲ್ (ವಿ.ಕೀ), ಅಕ್ಷರ್ ಪಟೇಲ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಅಶುತೋಷ್ ಶರ್ಮಾ, ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್.

ಇಂಪ್ಯಾಕ್ಟ್ ಪ್ಲೇಯರ್: ಮೋಹಿತ್ ಶರ್ಮಾ.

ಐಪಿಎಲ್‌ನಲ್ಲಿ RCB vs DC ಮುಖಾಮುಖಿ

ಒಟ್ಟು ಪಂದ್ಯಗಳು : 31
ಆರ್‌ಸಿಬಿ ಗೆಲುವು : 19
ಡಿಸಿ ಗೆಲುವು : 11
ಯಾವುದೇ ಫಲಿತಾಂಶವಿಲ್ಲ : 1

ಎರಡೂ ತಂಡಗಳ ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು : ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ, ಟಿಮ್ ಡೇವಿಡ್, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಳ್, ರಸಿಖ್ ದಾರ್ ಸಲಾಂ, ಸುಯಶ್ ಶರ್ಮಾ, ಮನೋಜ್ ಭಾಂಡಗೆ, ಅಬ್ಹಿನಿಯೋ ಶೆಮರ್ ಭಾಂಡಗೆ, ಜಾಕೋಬ್ ಸಿಂಗ್ ಬೆಥೆಲ್, ಜಾಕೋಬ್ ಸಿಂಗ್ ಬೆಥೆಲ್ ಲುಂಗಿ ಎನ್‌ಗಿಡಿ, ನುವಾನ್ ತುಷಾರ, ಮೋಹಿತ್ ರಥಿ, ಸ್ವಸ್ತಿಕ್ ಚಿಕಾರ

ದೆಹಲಿ ಕ್ಯಾಪಿಟಲ್ಸ್ : ಜೇಕ್ ಫ್ರೇಸರ್ ಮೆಕ್‌ಗುರ್ಕ್, ಫಾಫ್ ಡು ಪ್ಲೆಸಿಸ್, ಅಭಿಷೇಕ್ ಪೊರೆಲ್, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್ (ನಾಯಕ), ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ಕುಲದೀಪ್ ಯಾದವ್, ಮೋಹಿತ್ ಶರ್ಮಾ, ಮುಖೇಶ್ ಕುಮಾರ್, ಅಶುತೋಷ್ ಶರ್ಮಾ, ಕರುಣ್ ನಾಯರ್, ಸಮೀರ್ ರಿಜ್ವಿ, ಡೊನೊವಾನಾಲ್ ವಿಜಯ್, ಡೊನೊವಾನಾಲ್ ವಿಜಯ್ ದುಷ್ಮಂತ ಚಮೀರಾ, ಟಿ ನಟರಾಜನ್, ಅಜಯ್ ಜಾದವ್ ಮಂಡಲ್, ಮನ್ವಂತ್ ಕುಮಾರ್ ಎಲ್, ಮಾಧವ್ ತಿವಾರಿ

ಐಪಿಎಲ್‌ನಲ್ಲಿ ಇಂದು (ಏಪ್ರಿಲ್ 10) ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದ ಟಾಸ್ ಪ್ರಕ್ರಿಯೆ, ನೇರ ಪ್ರಸಾರದ ವಿವರಗಳು ಈ ಕೆಳಗಿನಂತಿವೆ.

ಐಪಿಎಲ್‌ 2025 ರ (IPL 2025) ಇಂದಿನ (ಏಪ್ರಿಲ್ 10, ಗುರುವಾರ) ಪಂದ್ಯದಲ್ಲಿ ಯಾವ ತಂಡಗಳು ಮುಖಾಮುಖಿಯಾಗಲಿವೆ?

ಐಪಿಎಲ್ 2025 ರ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ನಡೆಯುವ ಸ್ಥಳ ಯಾವುದು?

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ 2025 ಪಂದ್ಯವನ್ನು ನಡೆಯಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಯಾವಾಗ ನಡೆಯಲಿದೆ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ಇಂದು (ಏಪ್ರಿಲ್ 10, ಗುರುವಾರ) ಸಂಜೆ 7.30ಕ್ಕೆ ನಡೆಯಲಿದೆ. ಟಾಸ್ ಭಾರತೀಯ ಕಾಲಮಾನ ಸಂಜೆ 7.00 ಗಂಟೆಗೆ ಜರುಗಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಇಂದಿನ ಪಂದ್ಯವನ್ನು ಹೇಗೆ ವೀಕ್ಷಿಸುವುದು?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಮೂಲಕ ನೇರ ಪ್ರಸಾರವಾಗಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ಲೈವ್ ಸ್ಟ್ರೀಮಿಂಗ್ ವೀಕ್ಷಿಸುವುದು ಹೇಗೆ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಜಿಯೋಹಾಟ್‌ಸ್ಟಾರ್ ಮೂಲಕ ನೇರ ಪ್ರಸಾರ ಮಾಡಲಾಗುತ್ತದೆ.

ಮೊಬೈಲ್‌ನಲ್ಲಿ ಜಿಯೋ ಹಾಟ್‌ಸ್ಟಾರ್‌ ಮೂಲಕ ನೇರ ಪ್ರಸಾರ ವೀಕ್ಷಿಸುವುದು ಹೇಗೆ?

ಹಂತ 1: ನಿಮ್ಮ ಫೋನಿನಲ್ಲಿ ಗೂಗಲ್ ಪ್ಲೇ ಸ್ಟೋರ್ ಅಥವಾ ಆಪಲ್ ಆಪ್ ಸ್ಟೋರ್‌ನಿಂದ ಜಿಯೋ ಹಾಟ್‌ಸ್ಟಾರ್ ಆಪ್ ಡೌನ್‌ಲೋಡ್ ಮಾಡಬೇಕು.

ಹಂತ 2: ಬಳಿಕ ಅಪ್ಲಿಕೇಶನ್ ಓಪನ್ ಮಾಡಿ ಮತ್ತು ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು.

ಹಂತ 3: ಇದಾದ ಬಳಿಕ ಓಟಿಪಿ (OTP) ಮೂಲಕ ಲಾಗಿನ್ ಆಗಬೇಕು.

ಹಂತ 4: ನಂತರ ಮುಖಪುಟದಲ್ಲಿ IPL 2025 ಬ್ಯಾನರ್ ಮೇಲೆ ಕ್ಲಿಕ್ ಮಾಡಬೇಕು. ('ಕ್ರೀಡೆ' ಟ್ಯಾಬ್‌ಗೆ ಹೋಗಿ ಲೈವ್ ಮ್ಯಾಚ್ ಮೇಲೆ ಟ್ಯಾಪ್ ಮಾಡಬೇಕು).

ಹಂತ 5: ಇದಾದ ಬಳಿಕ ಮೊಬೈಲ್‌ನಲ್ಲಿ IPL 2025 ಆವೃತ್ತಿಯ ಎಲ್ಲಾ ಪಂದ್ಯಗಳನ್ನು ವೀಕ್ಷಿಸಬಹುದು.

Best Mobiles in India

English summary
IPL 2025: How to watch Royal Challengers Bengaluru vs Delhi Capitals match live on mobile: RCB vs DC Playing 11, match time and streaming
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+