Home
ಟೆಕ್ ನೌಕರಿ

IPL 2025: ಇಂದು ಡಬಲ್ ಧಮಾಕಾ.. DC ವಿರುದ್ಧ ಸೇಡು ತೀರಿಸಿಕೊಳ್ಳುತ್ತಾ RCB.. ಗೆದ್ದವರೇ ನಂಬ‌ರ್ ಒನ್!

ಇಂದು ಡಬಲ್ ಧಮಾಕಾ..! ಆರ್‌ಸಿಬಿ ಮ್ಯಾಚ್ ಇದೆ ಮರೆಯಬೇಡಿ. ಹೌದು, ಇಂದು ಐಪಿಎಲ್‌ನಲ್ಲಿ ಎರಡು ಹೈವೋಲ್ಟೇಜ್ ಪಂದ್ಯಗಳು ನಡೆಯುತ್ತಿವೆ. ಮೊದಲ ಪಂದ್ಯ ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ಮುಂಬೈ ಇಂಡಿಯನ್ಸ್ (MI) ಸೆಣಸಲಿವೆ. ಈ ಮ್ಯಾಚ್ ಮಧ್ಯಾಹ್ನ 3.30 ಗಂಟೆಗೆ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಎರಡು ತಂಡಗಳು ಈವರೆಗೆ 7 ಬಾರಿ ಮುಖಾಮುಖಿಯಾಗಿದ್ದು, ಲಕ್ನೋ 6 ಮತ್ತು ಮುಂಬೈ 1 ಪಂದ್ಯ ಗೆದ್ದಿದೆ. ದೆಹಲಿಯಲ್ಲಿ ನಡೆಯಲಿರುವ ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ಮುಖಾಮಖಿಯಾಗಲಿವೆ. ಈ ಪಂದ್ಯ ಯಾವಾಗ? ನೇರಪ್ರಸಾರ ವೀಕ್ಷಣೆ ಹೇಗೆ? ಎನ್ನುವುದನ್ನು ತಿಳಿಯೋಣ ಬನ್ನಿ.

ಹೌದು, ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರುವುದು ಖಚಿತವಾಗಿದೆ. ಪ್ರಸ್ತುತ, ಅಂಕ ಪಟ್ಟಿಯಲ್ಲಿ ಡೆಲ್ಲಿ ತಂಡವು 12 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಆರ್‌ಸಿಬಿ ತಂಡ 12 ಅಂಕಗಳೊಂದಿಗೆ ತೃತೀಯ ಸ್ಥಾನದಲ್ಲಿದೆ. ಉಭಯ ತಂಡಗಳ ನಡುವಣ ಈ ಪಂದ್ಯದಲ್ಲಿ ಗೆಲ್ಲುವ ತಂಡ 14 ಅಂಕಗಳೊಂದಿಗೆ ಗುಜರಾತ್ ಟೈಟಾನ್ಸ್ (GT) ತಂಡವನ್ನು ಹಿಂದಿಕ್ಕಿ ಅಗ್ರಸ್ಥಾನ ಅಲಂಕರಿಸಲಿದೆ.

ಇಂದು ಡಬಲ್ ಧಮಾಕಾ: ಗೆದ್ದವರೇ ನಂಬ‌ರ್ ಒನ್..! DC ವಿರುದ್ಧ RCB ಗೆಲ್ಲುತ್ತಾ?

ಐಪಿಎಲ್‌ನಲ್ಲಿ RCB vs RR ಮುಖಾಮುಖಿ

ಒಟ್ಟು ಪಂದ್ಯಗಳು: 32
RCB ಗೆಲುವು: 19
DC ಗೆಲುವು: 12
ಡ್ರಾ: 1

RCBಗೆ ಕನ್ನಡಿಗ ಅಲ್ಲ, ಮಾಜಿ ಕ್ಯಾಪ್ಟನ್ ಭಯ!

ಕಳೆದ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಆರ್‌ಸಿಬಿಗೆ ಸೋಲಿನ ರುಚಿ ತೋರಿಸಿದ್ದರು. ಆದರೆ, ಇಂದಿನ ಪಂದ್ಯದಲ್ಲಿ ಆರ್‌ಸಿಬಿ ಮಾಜಿ ನಾಯಕ ಮುಳುವಾಗುವ ಸಾಧ್ಯತೆಯಿದೆ. ಹೌದು, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರ ಹಾಗೂ ಉಪನಾಯಕ ಫಾಫ್ ಡು ಪ್ಲೆಸಿಸ್ ಗಾಯದಿಂದ ಚೇತರಿಸಿಕೊಂಡಿದ್ದಾರೆ. ಇಂದು ದೆಹಲಿಯಲ್ಲಿ ನಡೆಯಲಿರುವ ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಅವರು ಲಭ್ಯರಿರುತ್ತಾರೆ. ಗಾಯದಿಂದಾಗಿ ಫಾಫ್ ಕಳೆದ ಕೆಲವು ಪಂದ್ಯಗಳನ್ನು ತಪ್ಪಿಸಿಕೊಂಡಿದ್ದಾರೆ. ಅವರ ಆಗಮನದೊಂದಿಗೆ, ಡೆಲ್ಲಿ ಬ್ಯಾಟಿಂಗ್ ವಿಭಾಗ ಬಲಗೊಳ್ಳುತ್ತದೆ. ಕಳೆದ ಸೀಸನ್‌ನಲ್ಲಿ ಆರ್‌ಸಿಬಿಯನ್ನು ಮುನ್ನಡೆಸಿದ್ದ ಡು ಪ್ಲೆಸಿಸ್ ಇಂದು ಆರ್‌ಸಿಬಿ ವಿರುದ್ಧ ಘರ್ಜಿಸಲು ಸಿದ್ಧರಾಗಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XII (ಸಂಭಾವ್ಯ)

ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿ.ಕೀ), ರೊಮಾರಿಯೊ ಶೆಫರ್ಡ್, ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯಶ್ ದಯಾಲ್, ಜೋಶ್ ಹೇಜಲ್‌ವುಡ್, ಸುಯಾಶ್ ಶರ್ಮಾ

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XII (ಸಂಭಾವ್ಯ)

ಅಭಿಷೇಕ್ ಪೊರೆಲ್, ಫಾಫ್ ಡು ಪ್ಲೆಸಿಸ್, ಕರುಣ್ ನಾಯರ್, ಕೆ.ಎಲ್ ರಾಹುಲ್ (ವಿ.ಕೀ), ಅಕ್ಷರ್ ಪಟೇಲ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಅಶುತೋಷ್ ಶರ್ಮಾ, ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ಕುಲದೀಪ್ ಯಾದವ್, ದುಷ್ಮಂತ ಚಮೀರಾ, ಮುಖೇಶ್ ಕುಮಾರ್

ಆರ್​ಸಿಬಿ vs ಡೆಲ್ಲಿ ಪಂದ್ಯದ ನೇರ ಪ್ರಸಾರದ ವಿವರಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯ ಯಾವಾಗ ನಡೆಯಲಿದೆ?

ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ ಐಪಿಎಲ್ ನಡುವಿನ ಪಂದ್ಯವು ಇಂದು (ಏಪ್ರಿಲ್ 27) ನಡೆಯಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯ ಎಲ್ಲಿ ನಡೆಯಲಿದೆ?

ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವು ಡೆಲ್ಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯ ಯಾವ ಸಮಯಕ್ಕೆ ಪ್ರಾರಂಭವಾಗುತ್ತದೆ?

ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವು ಭಾರತೀಯ ಕಾಲಮಾನ ಸಂಜೆ 7:30 ಗಂಟೆಗೆ ಪ್ರಾರಂಭವಾಗಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ಟಾಸ್ ಪ್ರಕ್ರಿಯೆ ಯಾವಾಗ ನಡೆಯುತ್ತದೆ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದ ಟಾಸ್ ಪ್ರಕ್ರಿಯೆ ಸಂಜೆ 7.00 ಗಂಟೆಗೆ ನಡೆಯಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯವನ್ನು ಯಾವ ಟಿವಿ ಚಾನೆಲ್ ಪ್ರಸಾರ ಮಾಡಲಾಗುತ್ತದೆ?

ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ (ವಿವಿಧ ಚಾನೆಲ್​ಗಳಲ್ಲಿ) ನೇರ ಪ್ರಸಾರ ಮಾಡಲಾಗುತ್ತದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ನೇರ ಪ್ರಸಾರವನ್ನು ಆನ್‌ಲೈನ್‌ನಲ್ಲಿ ಹೇಗೆ ವೀಕ್ಷಿಸಬಹುದು?

ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.

Best Mobiles in India

English summary
RCB vs DC IPL 2025: How to Watch Today’s Royal Challengers Bengaluru vs Delhi Capitals Match Live
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+