ಇಂದು RCB vs PBKS ಕಾಳಗ: PBKS ವಿರುದ್ಧ RCBನೇ ಕಿಂಗ್.. ಯಾವ ತಂಡ ಬಲಿಷ್ಠ? ಪಂದ್ಯಕ್ಕೆ ಮಳೆ ಭೀತಿ!
RCB vs PBKS IPL 2025: ಐಪಿಎಲ್‌ನಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಲಿವೆ. ಇದು ಐಪಿಎಲ್‌ನ 18ನೇ ಆವೃತ್ತಿಯ 34ನೇ ಪಂದ್ಯವಾಗಿದೆ. ಎರಡೂ ತಂಡಗಳು ಗೆಲುವಿನ ನಾಗಾಲೋಟ ಮುಂದುವರಿಸಲು ಮತ್ತು ಪಾಯಿಂಟ್ ಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಉದ್ದೇಶದಿಂದ ಇಂದು ಕಣಕ್ಕಿಳಿಯಲಿವೆ. ಇತ್ತ, ಈ ಪಂದ್ಯ ಆರಂಭಕ್ಕೂ ಮುನ್ನವೇ ಅಭಿಮಾನಿಗಳಲ್ಲಿ ಆತಂಕ ಮೂಡಿದೆ. ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಆರ್ಸಿಬಿ ಮತ್ತು ಪಂಜಾಬ್ (RCB vs PBKS) ಪಂದ್ಯ ರದ್ದಾಗುತ್ತಾ? ಎಂಬ ಪ್ರಶ್ನೆ ಉದ್ಭವಿಸಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಳೆದ ಪಂದ್ಯದ ಗೆಲುವಿನ ಜೋಶ್‌ನಲ್ಲಿದೆ. ಈ ಆವೃತ್ತಿಯಲ್ಲಿ ರಜತ್ ಪಟೀದಾರ್ ನಾಯಕತ್ವದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಉತ್ತಮ ಪ್ರದರ್ಶನ ನೀಡುತ್ತಿದೆ. ಈವರೆಗೆ ಆಡಿದ 6 ಪಂದ್ಯಗಳಲ್ಲಿ ಆರ್ಸಿಬಿ 4 ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಇನ್ನು 2 ಪಂದ್ಯಗಳಲ್ಲಿ ಸೋಲು ಕಂಡಿದೆ. ರಾಜಸ್ಥಾನ ರಾಯಲ್ಸ್ ವಿರುದ್ಧ ನಡೆದಿದ್ದ ಕಳೆದ ಪಂದ್ಯದಲ್ಲಿ ಆರ್ಸಿಬಿ 9 ವಿಕೆಟ್ಗಳಿಂದ ಗೆಲುವು ಸಾಧಿಸಿತ್ತು. ಪ್ರಸ್ತುತ ಅಂಕಪಟ್ಟಿಯಲ್ಲಿ ಆರ್ಸಿಬಿ 3ನೇ ಸ್ಥಾನದಲ್ಲಿದೆ. ಬನ್ನಿ, ಈ ಪಂದ್ಯ ಯಾವಾಗ? ಎಲ್ಲಿ ನಡೆಯಲಿದೆ? ಮತ್ತು ಉಚಿತವಾಗಿ ನೇರಪ್ರಸಾರ ವೀಕ್ಷಿಸುವುದು ಹೇಗೆ? ಎನ್ನುವುದನ್ನು ತಿಳಿಯೋಣ.

ಐಪಿಎಲ್‌ನಲ್ಲಿ RCB vs PBKS ಮುಖಾಮುಖಿ
ಒಟ್ಟು ಪಂದ್ಯಗಳು : 33
RCB ಗೆಲುವು : 16
PBKSಗೆಲುವು : 17
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ
ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಜೋಶ್ ಹೇಜಲ್‌ವುಡ್, ರಸಿಖ್ ದಾರ್, ಸುಯಶ್ ಶರ್ಮಾ, ಭುವನೇಶ್ವರ್ ಕುಮಾರ್, ಕೃನಾಲ್ ಪಾಂಡ್ಯ, ಯಶ್ ದಯಾಳ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ನುವಾನ್ ತುಷಾರ, ಜೇಕಬ್ ಬೆಥೆಲ್, ಮನೋಜ್ ಭಾಂಡಗೆ, ದೇವದತ್ತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರಾ, ಲುಂಗಿ ಎನ್‌ಗಿಡಿ, ಅಭಿನಂದನ್ ಸಿಂಗ್, ಮೋಹಿತ್ ರಾಠಿ.
ಪಂಜಾಬ್ ಕಿಂಗ್ಸ್ ತಂಡ
ಶ್ರೇಯಸ್ ಅಯ್ಯರ್ (ನಾಯಕ), ಶಶಾಂಕ್ ಸಿಂಗ್, ಪ್ರಭಾಸಿಮ್ರಾನ್ ಸಿಂಗ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ನೆಹಾಲ್ ವಧೇರಾ, ವಿಷ್ಣು ವಿನೋದ್, ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಯುಜ್ವೇಂದ್ರ ಚಹಾಲ್, ಹರ್‌ಪ್ರೀತ್ ಬ್ರಾರ್, ಅರ್ಷ್‌ದೀಪ್ ಸಿಂಗ್, ವಿಜಯ್‌ಕುಮಾರ್ ವೈಶಾಕ್, ಯಶ್ ಠಾಕೂರ್, ಮಾರ್ಕೊ ಯಾನ್ಸೆನ್, ಪ್ರಿಯಾಂಶ್ ಆರ್ಯ, ಅಜ್ಮತುಲ್ಲಾ ಒಮರ್ಜಾಯ್, ಆರನ್ ಹಾರ್ಡಿ, ಕ್ಸೇವಿಯರ್ ಬಾರ್ಟ್ಲೆಟ್, ಕುಲದೀಪ್ ಸೇನ್, ಸೂರ್ಯಾಂಶ್ ಶೆಡ್ಜ್, ಮುಶೀರ್ ಖಾನ್, ಹರ್ನೂರ್ ಪನ್ನು, ಪೈಲಾ ಅವಿನಾಶ್, ಪ್ರವೀಣ್ ದುಬೆ.
RCB vs PBKS ಪಂದ್ಯದ ನೇರ ಪ್ರಸಾರದ ವಿವರಗಳು
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ ಪಂದ್ಯ ಎಲ್ಲಿ ನಡೆಯಲಿದೆ?
ಐಪಿಎಲ್ 2025ರ (IPL 2025) ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ ಪಂದ್ಯ ಯಾವಾಗ ನಡೆಯಲಿದೆ?
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ ಐಪಿಎಲ್ ನಡುವಿನ ಪಂದ್ಯವು ಇಂದು (ಏಪ್ರಿಲ್ 18) ನಡೆಯಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ ಪಂದ್ಯ ಯಾವ ಸಮಯಕ್ಕೆ ಪ್ರಾರಂಭವಾಗುತ್ತದೆ?
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವು ಭಾರತೀಯ ಕಾಲಮಾನ ಸಂಜೆ 7:30 ಕ್ಕೆ ಪ್ರಾರಂಭವಾಗಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ ಪಂದ್ಯದ ಟಾಸ್ ಯಾವ ಸಮಯಕ್ಕೆ ನಡೆಯುತ್ತದೆ?
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದ ಟಾಸ್ ಪ್ರಕ್ರಿಯೆ ಸಂಜೆ 7.00 ಗಂಟೆಗೆ ನಡೆಯಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ ಪಂದ್ಯವನ್ನು ಯಾವ ಟಿವಿ ಚಾನೆಲ್ ಪ್ರಸಾರ ಮಾಡಲಾಗುತ್ತದೆ?
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ ಪಂದ್ಯದ ನೇರ ಪ್ರಸಾರವನ್ನು ಆನ್‌ಲೈನ್‌ನಲ್ಲಿ ಹೇಗೆ ವೀಕ್ಷಿಸಬಹುದು?
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವನ್ನು ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.


Click it and Unblock the Notifications








