ಜಸ್ಟ್ 8,999 ರೂ.! ಸೋನಿ ಕ್ಯಾಮೆರಾ.. 5000mAh ಬ್ಯಾಟರಿ.. ಅಗ್ಗದ ಬೆಲೆಗೆ Infinix ಫೋನ್ ಸೇಲ್
ಫ್ಲಿಪ್‌ಕಾರ್ಟ್ ತನ್ನ ಗ್ರಾಹಕರಿಗೆ ಒಳ್ಳೆಯ ಆಫರ್ ನೀಡುತ್ತಿದೆ. ಇನ್ಫಿನಿಕ್ಸ್ ಹಾಟ್ 50 5G (Infinix Hot 50 5G) ಫೋನ್ ಭರ್ಜರಿ ರಿಯಾಯಿತಿಯೊಂದಿಗೆ ಮಾರಾಟವಾಗುತ್ತಿದೆ. ಹೌದು, ಪ್ರಸ್ತುತ ಫ್ಲಿಪ್‌ಕಾರ್ಟ್ ಮಾನ್ಯುಮೆಂಟಲ್ ಸೇಲ್ (Flipkart Monumental Sale 2025) ನಡೆಯುತ್ತಿದೆ. ನೀವು ಈ ಸೇಲ್‌ನಲ್ಲಿ ಇನ್ಫಿನಿಕ್ಸ್ ಹಾಟ್ 50 5G ಫೋನನ್ನು ಶೇ.23 ರಷ್ಟು ಡಿಸ್ಕೌಂಟ್‌ನೊಂದಿಗೆ ಖರೀದಿಸಹುದು. ಬನ್ನಿ, ಈ ಫೋನಿನ ಹೊಸ ಬೆಲೆ, ಆಫರ್‌ಗಳು ಮತ್ತು ವಿಶೇಷತೆಗಳನ್ನು ತಿಳಿಯೋಣ.
ಇನ್ಫಿನಿಕ್ಸ್ ಹಾಟ್ 50 5G ಅಗ್ಗದೆ ಬೆಲೆಗೆ ಬಿಡುಗಡೆಯಾಗಿತ್ತು. ಈ ಫೋನ್ ಮೀಡಿಯಾಟೆಕ್ ಡೈಮೆನ್ಷನ್ 6300 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಇದು 6.7 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. ಈ ಫೋನಿನಲ್ಲಿ 48 ಮೆಗಾಪಿಕ್ಸೆಲ್ ಡುಯಲ್ ಕ್ಯಾಮೆರಾ ಸೆಟಪ್ ಲಭ್ಯವಿದೆ. ಜೊತೆಗೆ 5000mAh ಬ್ಯಾಟರಿ ಮತ್ತು 18W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಮಾರಾಟವಾಗುತ್ತಿದೆ. ಪ್ರಸ್ತುತ, ಈ ಮೊಬೈಲ್ ಕೇವಲ 8,999 ರೂ.ಗೆ ಲಭ್ಯವಿದೆ.

ಇನ್ಫಿನಿಕ್ಸ್ ಹಾಟ್ 50 5G ವೈಶಿಷ್ಟ್ಯಗಳು
ಡಿಸ್ಪ್ಲೇ ಮತ್ತು ಪ್ರೊಸೆಸರ್ ವಿವರ
ಇನ್ಫಿನಿಕ್ಸ್ ಹಾಟ್ 50 5G ಫೋನ್ 6.7 ಇಂಚಿನ ಎಚ್‌ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಇದು 1600 x 720 ಪಿಕ್ಸೆಲ್ ರೆಸಲ್ಯೂಶನ್ ಮತ್ತು 120Hz ರಿಫ್ರೆಶ್ ದರದ ಬೆಂಬಲ ಪಡೆದಿದೆ. ಈ ಫೋನ್ ಮೀಡಿಯಾಟೆಕ್ ಡೈಮೆನ್ಶನ್ 6300 ಪ್ರೊಸೆಸರ್‌ನೊಂದಿಗೆ ಬರುತ್ತದೆ. ಈ ಮೊಬೈಲ್ ಆಂಡ್ರಾಯ್ಡ್ 14 ಆಧಾರಿತ XOS 14.5 ಆಪರೇಟಿಂಗ್ ಸಿಸ್ಟಂನಲ್ಲಿ ಕೆಲಸ ಮಾಡುತ್ತದೆ.
ಕ್ಯಾಮೆರಾ ಮತ್ತು ಸ್ಟೋರೇಜ್
ಇನ್ಫಿನಿಕ್ಸ್ ಹಾಟ್ 50 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ ಎಲ್‌ಇಡಿ ಫ್ಲ್ಯಾಶ್ ಲೈಟ್‌ನೊಂದಿಗೆ 48 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ ಎಐ (AI) ಲೆನ್ಸ್ ಕೂಡ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ ಎಲ್ಇಡಿ ಫ್ಲ್ಯಾಷ್‌ನೊಂದಿಗೆ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ. ಇದು 4GB + 128GB ಮತ್ತು 8GB + 128GB ಸ್ಟೋರೇಜ್ ಆಯ್ಕೆಗಳನ್ನು ಒಳಗೊಂಡಿದೆ. ಇದು 8GB ವರೆಗೆ ವಿಸ್ತೃತ RAMಗೆ ಬೆಂಬಲವನ್ನು ಸಹ ಒಳಗೊಂಡಿದೆ. ಇದರ ಸಹಾಯದಿಂದ ಒಟ್ಟು 16GB ವರೆಗೆ ಬಳಸಬಹುದು.
ಬ್ಯಾಟರಿ ಬ್ಯಾಕಪ್
ಇನ್ಫಿನಿಕ್ಸ್ ಹಾಟ್ 50 5G ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದನ್ನು ವೇಗವಾಗಿ ಚಾರ್ಜ್ ಮಾಡಲು 18W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಇದು ಎಐ ಚಾರ್ಜ್ ರಕ್ಷಣೆ, ಪವರ್ ಮ್ಯಾರಥಾನ್, ಸ್ಮಾರ್ಟ್ ಮೋಡ್, ಅಲ್ಟ್ರಾ ಪವರ್ ಸೇವಿಂಗ್ ಮೋಡ್‌ನಂತಹ ವೈಶಿಷ್ಟ್ಯಗಳನ್ನು ಸಹ ಒಳಗೊಂಡಿದೆ. ಈ ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, ಫೇಸ್ ಅನ್‌ಲಾಕ್ ವೈಶಿಷ್ಟ್ಯ ಮತ್ತು ಹಲವು ಎಐ ತಂತ್ರಜ್ಞಾನ ವೈಶಿಷ್ಟ್ಯಗಳನ್ನು ಹೊಂದಿದೆ. ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಡ್ಯುಯಲ್ ಸಿಮ್, ವೈ-ಫೈ, ಬ್ಲೂಟೂತ್ ಲಭ್ಯವಿದೆ.
ಇನ್ಫಿನಿಕ್ಸ್ ಹಾಟ್ 50 5G ಫೋನಿನ ಬೆಲೆ
ಇನ್ಫಿನಿಕ್ಸ್ ಹಾಟ್ 50 5G ಫೋನನ್ನು ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ಫೋನಿನ 4GB RAM + 128GB ಸ್ಟೋರೇಜ್ ರೂಪಾಂತರವನ್ನು 9,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. 8GB RAM + 128 GB ಸ್ಟೋರೇಜ್ ರೂಪಾಂತರವನ್ನು 10,999 ರೂ.ಗೆ ಪರಿಚಯಿಸಲಾಗಿತ್ತು. ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ ಶೇ.23 ರಷ್ಟು ರಿಯಾಯಿತಿ ಲಭ್ಯವಿದೆ. ಆಯ್ದ ಬ್ಯಾಂಕ್ ಕಾರ್ಡ್‌ಗಳ ಮೇಲೆ 1000 ರೂ. ರಿಯಾಯಿತಿಯೂ ಲಭ್ಯವಿದೆ. ನೀವು ಕೇವಲ 8,999 ರೂ.ಗೆ ಈ ಫೋನನ್ನು ಖರೀದಿಸಬಹುದು. ಇದು ವೈಬ್ರೆಂಟ್ ಬ್ಲೂ, ಸ್ಲೀಕ್ ಬ್ಲಾಕ್, ಸೇಜ್ ಗ್ರೀನ್ ಮತ್ತು ಡ್ರೀಮಿ ಪರ್ಪಲ್ ಬಣ್ಣಗಳಲ್ಲಿ ಬರುತ್ತದೆ.


Click it and Unblock the Notifications








