ನಿಮ್ಮ ಸಂಗಾತಿಗೆ ಈ ಗಿಫ್ಟ್ ಕೊಡಿ! ಭರ್ಜರಿ ಬೆಲೆ ಇಳಿಕೆ.. ಜೊತೆಗೆ 3000 ಡಿಸ್ಕೌಂಟ್.. ಯಾವ ಫೋನ್?
ರಿಯಲ್‌ಮಿ ತನ್ನ ಅಭಿಮಾನಿಗಳಿಗೆ ಎರಡು ಗುಡ್ ನ್ಯೂಸ್ ನೀಡಿದೆ. ಈ ಮೂಲಕ ಮತ್ತೆ ಭಾರತೀಯ ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡುತ್ತಿದೆ. ಹೌದು, ರಿಯಲ್‌ಮಿ P3 ಪ್ರೊ 5G (Realme P3 Pro 5G) ಮೊಬೈಲ್ ಭಾರತದಲ್ಲಿ ಬಿಡುಗಡೆಯಾಗಲಿದೆ. ಕಂಪನಿಯು ಈ ಫೋನ್ ಬಗ್ಗೆ ಮಾಹಿತಿ ನೀಡಿದೆ. ಮೊಬೈಲ್ ಪ್ರಿಯರು ಇದರ ಬಿಡುಗಡೆ ದಿನಾಂಕಕ್ಕಾಗಿ ಕಾಯುತ್ತಿದ್ದಾರೆ. ಇತ್ತ ರಿಯಲ್‌ಮಿ P3 ಪ್ರೊ ಬಿಡುಗಡೆಗೂ ಮೊದಲೇ, ರಿಯಲ್‌ಮಿ P1 5G (Realme P1 5G) ಫೋನಿಗೆ ಭಾರೀ ರಿಯಾಯಿತಿ ಘೋಷಿಸಲಾಗಿದೆ. ನಿಮ್ಮ ಸಂಗಾತಿ ಈ ಫೋನ್ ಉಡುಗೊರೆ ನೀಡಬಹುದು!
ರಿಯಲ್‌ಮಿ P1 5G ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 7050 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 6.67 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಇದು 50 ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಜೊತೆಗೆ 256GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 45W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಫೋನ್ ಎರಡು ಸ್ಟೋರೇಜ್ ರೂಪಾಂತರಗಳ ಮಾರಾಟವಾಗುತ್ತಿದೆ. ಕಂಪನಿಯು ಇದರ ಬೆಲೆ ಇಳಿಕೆ ಮಾಡಿದೆ. ಈ ಫೋನಿನ ಹೊಸ ಬೆಲೆ ಮತ್ತು ಆಫರ್‌ಗಳನ್ನು ತಿಳಿಯಲು ಮುಂದೆ ಓದಿ.

ರಿಯಲ್‌ಮಿ P1 5G ಹೊಸ ಬೆಲೆ ಮತ್ತು ಆಫರ್‌ಗಳು
ರಿಯಲ್‌ಮಿ P1 5G ಫೋನಿನ 6GB RAM + 128GB ಸ್ಟೋರೇಜ್ ರೂಪಾಂತರವನ್ನು 15,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. ಕಂಪನಿಯು ಈ ಫೋನಿನ ಖರೀದಿ ಮೇಲೆ 3,000 ರೂ.ಗಳ ರಿಯಾಯಿತಿ ನೀಡುತ್ತಿದೆ. ಅಂದರೆ, ನೀವು 2,000 ರೂ.ಗಳ ಫ್ಲಾಟ್ ರಿಯಾಯಿತಿ ಮತ್ತು 1,000 ರೂ.ಗಳ ಕೂಪನ್ ರಿಯಾಯಿತಿ ಪಡೆಯಬಹುದು. ಈ ಡಿಸ್ಕೌಂಟ್ ಬಳಿಕ ಈ ಫೋನನ್ನು 12,999 ರೂ.ಗೆ ಖರೀದಿಸಬಹುದು. ಈ ಆಫರ್ ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್ ಮತ್ತು ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ನೀವು ಫೀನಿಕ್ಸ್ ರೆಡ್ ಮತ್ತು ಪೀಕಾಕ್ ಗ್ರೀನ್ ಬಣ್ಣದಲ್ಲಿ ಈ ಫೋನನ್ನು ಖರೀದಿಸಬಹುದು.
ರಿಯಲ್‌ಮಿ P1 5G ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ರಿಯಲ್‌ಮಿ P1 5G ಮೊಬೈಲ್ 6.67 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 2412 X 1080 ಪಿಕ್ಸೆಲ್ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಹಾಗೆಯೇ 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು 120Hz ರಿಫ್ರೆಶ್ ದರದ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಹೊಂದಿದೆ.
ಮೀಡಿಯಾಟೆಕ್ ಪ್ರೊಸೆಸರ್
ರಿಯಲ್‌ಮಿ P1 5G ಫೋನ್ ಮೀಡಿಯಾಟೆಕ್‌ನ ಡೈಮೆನ್ಸಿಟಿ 7050 ಪ್ರೊಸೆಸರ್ ಆಕ್ಟಾಕೋರ್ ಹೊಂದಿದೆ. ಇದನ್ನು 6 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ ರಿಯಲ್‌ಮಿ ಯುಐ 5.0 ಓಎಸ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನ್ ಗ್ರಾಫಿಕ್ಸ್‌ಗಾಗಿ, ಮಾಲಿ G68 MC4 ಜಿಪಿಯು ಸಹ ಹೊಂದಿದೆ. ಈ ರಿಯಲ್‌ಮಿ ಸ್ಮಾರ್ಟ್‌ಫೋನ್ 6GB, 8GB RAM ಹೊಂದಿದೆ. ಹಾಗೆಯೇ 128GB, 256GB ಸ್ಟೋರೇಜ್ ಆಯ್ಕೆಗಳನ್ನು ಹೊಂದಿದೆ. ನೀವು ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು.

ಡ್ಯುಯಲ್ ಕ್ಯಾಮೆರಾ ಸೆಟಪ್
ರಿಯಲ್‌ಮಿ P1 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ ಎಲ್‌ಇಡಿ ಫ್ಲ್ಯಾಶ್‌ನೊಂದಿಗೆ 50 ಮೆಗಾಪಿಕ್ಸೆಲ್ ಸೋನಿ LYT600 ಪ್ರಾಥಮಿಕ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಅದ್ಭುತ ಬ್ಯಾಟರಿ ಬ್ಯಾಕಪ್
ರಿಯಲ್‌ಮಿ P1 5G ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಇದು 28 ನಿಮಿಷಗಳಲ್ಲಿ 0 ರಿಂದ ಶೇ.50 ರಷ್ಟು ಚಾರ್ಜ್ ಆಗುತ್ತದೆ. ಹಾಗೆಯೇ 65 ನಿಮಿಷಗಳಲ್ಲಿ ಶೇ.100 ರಷ್ಟು ಸಂಪೂರ್ಣವಾಗಿ ಚಾರ್ಜ್ ಆಗುತ್ತದೆ.
ಇತರೆ ವೈಶಿಷ್ಟ್ಯಗಳು
ರಿಯಲ್‌ಮಿ P1 5G ಫೋನ್ ಸ್ಪ್ಲಾಶ್ ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP54 ರೇಟಿಂಗ್ ಪಡೆದಿದೆ. ಜೊತೆಗೆ 3.5 ಎಂಎಂ ಆಡಿಯೊ ಜಾಕ್ ಮತ್ತು ಸ್ಟಿರಿಯೊ ಸ್ಪೀಕರ್‌ಗಳು ಲಭ್ಯವಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಹೈಬ್ರಿಡ್ ಡ್ಯುಯಲ್ ಸಿಮ್, ವೈ-ಫೈ 6, ಬ್ಲೂಟೂತ್ 5.2, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್ ಸಿ 2.0 ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.


Click it and Unblock the Notifications








