ಕೇವಲ 10,749 ರೂ.! 50MP ಕ್ಯಾಮೆರಾ.. 5000mAh ಬ್ಯಾಟರಿ.. ಈ Realme ಫೋನಿಗೆ ಬರೋಬ್ಬರಿ 42% ಡಿಸ್ಕೌಂಟ್
ರಿಯಲ್‌ಮಿ ಪ್ರಿಯರಿಗೆ ಅಮೆಜಾನ್ ದೊಡ್ಡ ಆಫರ್ ನೀಡುತ್ತಿದೆ. ಹೊಸ ವರ್ಷದ ಪ್ರಯುಕ್ತ ಕೆಲವು ಆಫರ್ ಘೋಷಿಸಿದೆ. ಹೌದು, ಅಮೆಜಾನ್ ಪ್ರಸಿದ್ಧ ಕಂಪನಿಯ ಮೊಬೈಲ್‌ಗಳ ಬೆಲೆ ಭರ್ಜರಿ ಡಿಸ್ಕೌಂಟ್ ಘೋಷಿಸಿದೆ. ಅದರಂತೆ, ರಿಯಲ್‌ಮಿ ನಾರ್ಜೋ 70x 5G (Realme NARZO 70x 5G) ಫೋನಿನ ಖರೀದಿ ಮೇಲೆ ಶೇ.42 ರಷ್ಟು ರಿಯಾಯಿತಿ ಲಭ್ಯವಿದೆ. ಜೊತೆಗೆ ಬ್ಯಾಂಕ್ ಆಫರ್ ಸಹ ಸಿಗುತ್ತದೆ. ಬನ್ನಿ, ಈ ಫೋನಿನ ಹೊಸ ಬೆಲೆ, ಆಫರ್‌ಗಳು ಮತ್ತು ವಿಶೇಷತೆಗಳನ್ನು ತಿಳಿಯೋಣ.
ರಿಯಲ್‌ಮಿ ನಾರ್ಜೋ 70x 5G ಫೋನ್ 50 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 6.72 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 128GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 45W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಫೋನ್ ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ನೀವು ಪ್ರಸ್ತುತ, ಅಮೆಜಾನ್‌ನಲ್ಲಿ 11,000ಕ್ಕಿಂತ ಕಡಿಮೆ ಬೆಲೆಗೆ ಖರೀದಿಸಬಹುದು. ಈ ಫೋನಿನ ಬೆಲೆ ತಿಳಿಯಲು ಮುಂದೆ ಓದಿ.

ರಿಯಲ್‌ಮಿ ನಾರ್ಜೊ 70x 5G ಫೀಚರ್ಸ್
ಡಿಸ್ಪ್ಲೇ ಹೇಗಿದೆ
ರಿಯಲ್‌ಮಿ ನಾರ್ಜೊ 70x 5G ಸ್ಮಾರ್ಟ್‌ಫೋನ್ 6.72 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್ಪ್ಲೇಯನ್ನು ಹೊಂದಿದೆ. ಇದು 1080 x 2400 ಪಿಕ್ಸೆಲ್ ರೆಸಲ್ಯೂಶನ್, 120Hz ರಿಫ್ರೆಶ್ ದರ ಮತ್ತು 800 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಜೊತೆಗೆ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ.
ಪ್ರೊಸೆಸರ್ ಯಾವುದು?
ರಿಯಲ್‌ಮಿ ನಾರ್ಜೊ 70x 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100 ಪ್ಲಸ್ ಪ್ರೊಸೆಸರ್ ಹೊಂದಿದೆ. ಇದು ಗ್ರಾಫಿಕ್ಸ್‌ಗಾಗಿ, ಮಾಲಿ G57 ಜಿಪಿಯು ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ ರಿಯಲ್‌ಮಿ ಯುಐ 5.0 ನೊಂದಿಗೆ ಕೆಲಸ ಮಾಡುತ್ತದೆ
ಸ್ಟೋರೇಜ್ ಆಯ್ಕೆ
ರಿಯಲ್‌ಮಿ ನಾರ್ಜೊ 70x 5G ಫೋನ್ 8GB RAM + 128GB ಸ್ಟೋರೇಜ್ ಒಳಗೊಂಡಿದೆ. RAM ಅನ್ನು ಹೆಚ್ಚಿಸಲು ಡೈನಾಮಿಕ್ ಬೆಂಬಲವೂ ಇದೆ. ನೀವು ಹೆಚ್ಚುವರಿ RAM ಬಳಸಬಹುದು.
ಎರಡು ಬೊಂಬಾಟ್ ಕ್ಯಾಮೆರಾಗಳು
ರಿಯಲ್‌ಮಿ ನಾರ್ಜೊ 70x 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಇದೆ. ಹಾಗೆಯೇ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ.

ಪವರ್ ಫುಲ್ ಬ್ಯಾಟರಿ
ರಿಯಲ್‌ಮಿ ನಾರ್ಜೊ 70x 5G ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ನೀಡಲಾಗಿದೆ.
ಇತರೆ ವೈಶಿಷ್ಟ್ಯಗಳು
ರಿಯಲ್‌ಮಿ ನಾರ್ಜೊ 70x 5G ಮೊಬೈಲ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP54 ರೇಟಿಂಗ್ ಪಡೆದಿದೆ. ಹಾಗೆಯೇ ರೈನ್ ವಾಟರ್ ಟಚ್ ಫೀಚರ್, ಏರ್ ಗೆಸ್ಚರ್ ಫೀಚರ್, ಡ್ಯುಯಲ್ ಸ್ಟೀರಿಯೋ ಸ್ಪೀಕರ್ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಡ್ಯುಯಲ್ ಸಿಮ್ 5G, 4G, ವೈ ಫೈ, ಬ್ಲೂಟೂತ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.
ರಿಯಲ್‌ಮಿ ನಾರ್ಜೋ 70x 5G ಹೊಸ ಬೆಲೆ
ರಿಯಲ್‌ಮಿ ನಾರ್ಜೋ 70x 5G ಫೋನ್ ಮೂರು ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟವಾಗುತ್ತಿದೆ. ನೀವು 4GB RAM + 128GB ಸ್ಟೋರೇಜ್, 6GB RAM + 128GB ಸ್ಟೋರೇಜ್ ಮತ್ತು 8GB RAM + 128GB ಸ್ಟೋರೇಜ್ ಆಯ್ಕೆಯಲ್ಲಿ ಖರೀದಿಸಬಹುದು. 4GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 12,499 ರೂ. ಇದೆ. ಪ್ರಸ್ತುತ, ಅಮೆಜಾನ್‌ನಲ್ಲಿ ಶೇ.42 ರಷ್ಟು ಡಿಸ್ಕೌಂಟ್ ನೀಡಲಾಗುತ್ತಿದೆ.
ನೀವು ರಿಯಾಯಿಯೊಂದಿಗೆ ಕೇವಲ 10,749 ರೂ.ಗೆ ರಿಯಲ್‌ಮಿ ನಾರ್ಜೋ 70x 5G ಮೊಬೈಲ್ ಖರೀದಿಸಬಹುದು. ಜೊತೆಗೆ ಆರ್‌ಬಿಎಲ್ ಕಾರ್ಡ್‌ಗಳ ಮೂಲಕ ಹೆಚ್ಚುವರಿ ರಿಯಾಯಿತಿ ಸಹ ಲಭ್ಯವಿದೆ. ಈ ಸ್ಮಾರ್ಟ್‌ಫೋನ್ ಐಸ್ ಬ್ಲೂ ಮತ್ತು ಫಾರೆಸ್ಟ್ ಗ್ರೀನ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ಆನ್‌ಲೈನ್ ಶಾಪಿಂಗ್ ಪ್ಲಾಟ್‌ಫಾರ್ಮ್ ಅಮೆಜಾನ್‌ನಲ್ಲಿ ಈ ಎಲ್ಲಾ ಆಫರ್‌ಗಳ ಲಾಭ ಪಡೆಯಬಹುದು.


Click it and Unblock the Notifications








