Home
ಮೊಬೈಲ್

6GB RAM ಸಾಮರ್ಥ್ಯ ಅತ್ಯುತ್ತಮ ಫೋನ್‌ಗಳು!..ಬಜೆಟ್‌ ಬೆಲೆಯಲ್ಲಿ ಲಭ್ಯ!

ಸದ್ಯ ಪ್ರತಿಯೊಬ್ಬರಿಗೂ ಸ್ಮಾರ್ಟ್‌ಫೋನ್‌ ಅವಶ್ಯ ಹಾಗೂ ಅಗತ್ಯ ಡಿವೈಸ್ ಎನ್ನುವುದರಲ್ಲಿ ಎರಡು ಮಾತಿಲ್ಲ. ಪ್ರಸ್ತುತ ಜನರು ಬಹುತೇಕ ಕೆಲಸಗಳಿಗೆ ಮೊಬೈಲ್‌ ಮೇಲೆ ಹೆಚ್ಚಾಗಿ ಅವಲಂಬಿತರಾಗುತ್ತಾರೆ. ಆನ್‌ಲೈನ್‌ ಕೆಲಸಗಳು, ಡಿಜಿಟಲ್ ಪಾವತಿ ಸೇರಿದಂತೆ ಬೇರೆ ಬೇರೆ ಆಪ್ ಬಳಕೆ ಮಾಡಬೇಕಿರುವುದರಿಂದ ಫೋನ್ ವೇಗ ಪ್ರಮುಖ ಪಾತ್ರ ವಹಿಸುತ್ತದೆ.

ಫೋನಿನಲ್ಲಿ ಅಧಿಕ RAM ಇದ್ದರೆ, ಯಾವುದೇ ಅಡೆ ತಡೆ ಇಲ್ಲದೆ ಕೆಲಸ ಸಾಗುತ್ತವೆ. ಈ ನಿಟ್ಟಿನಲ್ಲಿ ಬಹುತೇಕ ಗ್ರಾಹಕರು ಅಧಿಕ RAM ಇರುವ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಲು ಬಯಸುತ್ತಾರೆ. ಮುಖ್ಯವಾಗಿ ಬಜೆಟ್‌ ಬೆಲೆಯಲ್ಲಿ ಲಭ್ಯವಾಗುವ 6GB RAM ಫೋನ್‌ಗಳ ಮೇಲೆ ಮನಸ್ಸು ಜಾಸ್ತಿ. ಅಂತಹ ಫೋನ್‌ಗಳ ಬಗ್ಗೆ ತಿಳಿಯಲು ಮುಂದೆ ಓದಿರಿ.

6GB RAM ಸಾಮರ್ಥ್ಯ ಅತ್ಯುತ್ತಮ ಫೋನ್‌ಗಳು!..ಬಜೆಟ್‌ ಬೆಲೆಯಲ್ಲಿ ಲಭ್ಯ!

ವಿವೋ Y100 5G ಸ್ಮಾರ್ಟ್‌ಫೋನ್‌

ವಿವೋ Y100 5G ಸ್ಮಾರ್ಟ್‌ಫೋನ್‌ 6.38 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದ್ದು, 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 13 ಓಎಸ್ ಪಡೆದಿದೆ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಹಾಗೆಯೇ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

6GB RAM ಸಾಮರ್ಥ್ಯ ಅತ್ಯುತ್ತಮ ಫೋನ್‌ಗಳು!..ಬಜೆಟ್‌ ಬೆಲೆಯಲ್ಲಿ ಲಭ್ಯ!

ಒನ್‌ಪ್ಲಸ್‌ 11 5G ಸ್ಮಾರ್ಟ್‌ಫೋನ್‌

ಒನ್‌ಪ್ಲಸ್‌ 11 5G ಸ್ಮಾರ್ಟ್‌ಫೋನ್‌ 6.7 ಇಂಚಿನ ಕ್ವಾಡ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ ಪಡೆದಿದೆ. ಹಾಗೆಯೇ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ನಲ್ಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಪೊಕೊ X5 ಪ್ರೊ 5G ಸ್ಮಾರ್ಟ್‌ಫೋನ್‌

ಪೊಕೊ X5 ಪ್ರೊ 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಎಕ್ಸ್‌ಫಿನಿಟಿ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ತ್ರಿವಳಿ ಕ್ಯಾಮೆರಾ ರಚನೆ ಇದ್ದು, ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಇದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

6GB RAM ಸಾಮರ್ಥ್ಯ ಅತ್ಯುತ್ತಮ ಫೋನ್‌ಗಳು!..ಬಜೆಟ್‌ ಬೆಲೆಯಲ್ಲಿ ಲಭ್ಯ!

ರೆಡ್ಮಿ ನೋಟ್‌ 12 5G ಸ್ಮಾರ್ಟ್‌ಫೋನ್‌

ರೆಡ್ಮಿ ನೋಟ್‌ 12 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ AMOLED ಡಿಸ್‌ಪ್ಲೇಯನ್ನು ಹೊಂದಿದ್ದು, 2,400 x 1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 4 Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರಿಯಲ್‌ಮಿ 10 ಪ್ರೊ 5G ಸ್ಮಾರ್ಟ್‌ಫೋನ್‌

ರಿಯಲ್‌ಮಿ 10 ಪ್ರೊ 5G ಸ್ಮಾರ್ಟ್‌ಫೋನ್‌ 6.72 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080x 2,400ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಅನ್ನು ಪಡೆದಿದೆ. ಈ ಫೋನ್‌ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಹಾಗೆಯೇ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ HM6 ಸೆನ್ಸಾರ್‌ ಅನ್ನು ಹೊಂದಿದೆ.

Best Mobiles in India

English summary
5 Best 6GB RAM Smartphones in India 2023; Check Specifications details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+