5 ಬೆಸ್ಟ್‌ ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್‌ಗಳ ಲಿಸ್ಟ್‌ ಇಲ್ಲಿದೆ ನೋಡಿ!

|

ಮಾರುಕಟ್ಟೆಯಲ್ಲಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಆಯ್ಕೆ ಇದೆ. ಗ್ರಾಹಕರು ಅವರ ಅಗತ್ಯ ಹಾಗೂ ಬಳಕೆಗೆ ಅನುಗುಣವಾಗಿ ಫೋನ್‌ ಖರೀದಿಗೆ ಮುಂದಾಗುತ್ತಾರೆ. ಆದರೆ ಬಹುತೇಕ ಜನರು ಬಜೆಟ್‌ ದರದಲ್ಲಿ ಲಭ್ಯವಾಗುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ ಖರೀದಿಸಲು ಇಷ್ಟಪಡುತ್ತಾರೆ. ಇನ್ನು ಹೆಚ್ಚಿನ ಸ್ಮಾರ್ಟ್‌ಫೋನ್‌ ಬಳಕೆ ಇಲ್ಲದ ಗ್ರಾಹಕರು ಒಂದು ಅತ್ಯುತ್ತಮ ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್‌ ಸಾಕು ಎನ್ನುತ್ತಾರೆ.

ಕಂಪನಿಗಳು

ಹೊಸ ಫೋನ್‌ ಖರೀದಿಸುವಾಗ ಮೊಬೈಲ್‌ ಬ್ರ್ಯಾಂಡ್‌ ಬಗ್ಗೆಯು ಗ್ರಾಹಕರು ಗಮನಿಸುತ್ತಾರೆ. ಜನಪ್ರಿಯ ಕಂಪನಿಗಳು ಫೋನ್‌ಗಳಿಗೆ ಹೆಚ್ಚಿನ ಬೇಡಿಕೆ ಇರುತ್ತದೆ. ಜೊತೆಗೆ ಪ್ರೊಸೆಸರ್‌, ಬ್ಯಾಟರಿ ಬ್ಯಾಕ್‌ಅಪ್‌ ಹಾಗೂ ಕ್ಯಾಮೆರಾ ಅಂಶಗಳ ಬಗ್ಗೆಯು ಖರೀದಿದಾದರರು ಗಮನ ನೀಡುತ್ತಾರೆ. ಹಾಗಾದ್ರೆ ಈ ಲೇಖನದಲ್ಲಿ ಕೆಲವು ಎಂಟ್ರಿ ಲೆವೆಲ್ ಫೋನ್‌ಗಳ ಬಗ್ಗೆ ತಿಳಿಸಲಾಗಿದೆ ಮುಂದೆ ಓದಿರಿ.

ಶಿಯೋಮಿ ರೆಡ್ಮಿ 10A

ಶಿಯೋಮಿ ರೆಡ್ಮಿ 10A

ಶಿಯೋಮಿ ರೆಡ್ಮಿ 10A ಸ್ಮಾರ್ಟ್‌ಫೋನ್‌ 6.52 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್‌ ಹಿಲಿಯೋ G35 ಪ್ರೊಸೆಸರ್‌ ಅನ್ನು ಹೊಂದಿದೆ. ಈ ಫೋನ್‌ 3GB RAM ಮತ್ತು 32GB ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಇನ್ನು ರೆಡ್ಮಿ 10A ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಎಂಪಿ ಹೊಂದಿದೆ. ಇನ್ನು ಸೆಲ್ಫಿ ಕ್ಯಾಮೆರಾ 2ಎಂಪಿ ಒಳಗೊಂಡಿದೆ. ಜೊತೆಗೆ 5,100mAh ಸಾಮರ್ಥ್ಯದ ಬ್ಯಾಟರಿಯನ್ನು ಬೆಂಬಲಿಸಲಿದೆ. ಈ ಫೋನ್‌ ಚಾರ್ಕೋಲ್ ಬ್ಲ್ಯಾಕ್, ಸೀ ಬ್ಲೂ ಮತ್ತು ಸ್ಲೇಟ್ ಗ್ರೇ ಕಲರ್‌ ಆಯ್ಕೆಗಳಲ್ಲಿ ದೊರೆಯಲಿದೆ.

ರಿಯಲ್‌ಮಿ ನಾರ್ಜೊ 50A ಪ್ರೈಮ್

ರಿಯಲ್‌ಮಿ ನಾರ್ಜೊ 50A ಪ್ರೈಮ್

ರಿಯಲ್‌ಮಿ ನಾರ್ಜೊ 50A ಪ್ರೈಮ್‌ ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಯುನಿಸೊಕ್ T612 ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಎಐ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಫೋನ್‌ ಫ್ಲ್ಯಾಶ್ ಬ್ಲೂ ಮತ್ತು ಫ್ಲ್ಯಾಶ್ ಬ್ಲ್ಯಾಕ್ ಕಲರ್‌ ಆಯ್ಕೆಗಳಲ್ಲಿ ಬರಲಿದೆ.

ಇನ್ಫಿನಿಕ್ಸ್ ಸ್ಮಾರ್ಟ್ 6

ಇನ್ಫಿನಿಕ್ಸ್ ಸ್ಮಾರ್ಟ್ 6

ಇನ್ಫಿನಿಕ್ಸ್ ಸ್ಮಾರ್ಟ್ 6 ಫೋನ್ 6.6 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್‌ ಹಿಲಿಯೋ A22 ಕ್ವಾಡ್-ಕೋರ್ SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ಫ್ಲ್ಯಾಷ್ ಜೊತೆಗೆ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8MP ಸೆನ್ಸಾರ್‌ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಹಾರ್ಟ್ ಆಫ್ ಓಷನ್, ಲೈಟ್ ಸೀ ಗ್ರೀನ್, ಪೋಲಾರ್ ಬ್ಲಾಕ್ ಮತ್ತು ಸ್ಟಾರಿ ಪರ್ಪಲ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಿದೆ.

ರಿಯಲ್‌ಮಿ C30

ರಿಯಲ್‌ಮಿ C30

ರಿಯಲ್‌ಮಿ C30 ಸ್ಮಾರ್ಟ್‌ಫೋನ್‌ ನಿಮಗೆ ಬಜೆಟ್‌ ಬೆಲೆಯಲ್ಲಿ ಲಭ್ಯವಾಗುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನಿನ 2GB RAM + 32GB ಸ್ಟೋರೇಜ್‌ ಹಾಗೂ 3GB RAM + 32GB ಆಯ್ಕೆಯಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಯುನಿಸೋಕ್‌ T612 ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಫ್ರಂಟ್‌ ಹಾಗೂ ಹಿಂಭಾಗದಲ್ಲಿ ಸಿಂಗಲ್‌ ಕ್ಯಾಮೆರಾವನ್ನು ಹೊಂದಿದೆ. ಇದರಲ್ಲಿ ಹಿಂಭಾಗದ ಕ್ಯಾಮೆರಾ 8 ಮೆಗಾಪಿಕ್ಸೆಲ್ AI ಕ್ಯಾಮೆರಾ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇನ್ನು ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 5 ಮೆಗಾಪಿಕ್ಸೆಲ್ AI ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಪೊಕೊ C3

ಪೊಕೊ C3

ಪೊಕೊ C3 ಸ್ಮಾರ್ಟ್‌ಫೋನ್‌ 6.53 ಇಂಚಿನ ಎಲ್‌ಸಿಡಿ ಡಾಟ್ ಡ್ರಾಪ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್ ಹೊಂದಿದೆ. ಇನ್ನು ಈ ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಆಗಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

Best Mobiles in India

English summary
5 Best Entry Level Smartphones in india 2022.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X