Home
ಮೊಬೈಲ್

ಬಜೆಟ್‌ ಬೆಲೆಗೆ ಅತ್ಯುತ್ತಮ ಕ್ಯಾಮೆರಾ ಫೋನ್‌ ಖರೀದಿಸುವ ಪ್ಲ್ಯಾನ್‌ ಇದೆಯಾ?

ಸದ್ಯ ಮೊಬೈಲ್‌ ಖರೀದಿಸುವಾಗ ಗಮನಿಸುವ ಪ್ರಮುಖ ಆಯ್ಕೆಗಳಲ್ಲಿ ಕ್ಯಾಮೆರಾ ಸಹ ಒಂದಾಗಿದೆ. ಈ ನಿಟ್ಟಿನಲ್ಲಿ ಇತ್ತೀಚಿಗೆ ಮೊಬೈಲ್‌ ಕಂಪನಿಗಳು ಅಧಿಕ ಮೆಗಾ ಪಿಕ್ಸಲ್‌ ಸೆನ್ಸಾರ್‌ ಆಯ್ಕೆಯನ್ನು ನೀಡುತ್ತಿವೆ. ಪ್ರಸ್ತುತ ಮೊಬೈಲ್‌ಗಳಲ್ಲಿ ಡ್ಯುಯಲ್‌ ಕ್ಯಾಮೆರಾ ಮರೆಯಾಗುತ್ತಿದ್ದು, ತ್ರಿವಳಿ ಮತ್ತು ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಸಾಮಾನ್ಯ ಆಗಿವೆ. ಅದರೊಂದಿಗೆ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸಲ್‌ ಸೆನ್ಸಾರ್ ಇಲ್ಲವೇ 64 ಮೆಗಾ ಪಿಕ್ಸಲ್‌ ಸೆನ್ಸಾರ್ ಸಾಮರ್ಥ್ಯದಲ್ಲಿರುತ್ತವೆ.

ಗ್ರಾಹಕರು

ಹೌದು, ಇತ್ತೀಚಿನ ಬಹುತೇಕ ಮೊಬೈಲ್‌ ಸಂಸ್ಥೆಗಳ ಸ್ಮಾರ್ಟ್‌ಫೋನ್‌ಗಳು ಅಧಿಕ ಸೆನ್ಸಾರ್ ಪಡೆದಿರುತ್ತವೆ. ಮುಖ್ಯವಾಗಿ 64 ಮೆಗಾ ಪಿಕ್ಸಲ್‌ ಸೆನ್ಸಾರ್ ಕ್ಯಾಮೆರಾಗಳು ಮಾರುಕಟ್ಟೆಯಲ್ಲಿ ಹೊಸ ಅಲೆಯನ್ನು ಹುಟ್ಟುಹಾಕಿವೆ. ಬಜೆಟ್‌ ಬೆಲೆಯಲ್ಲಿಯೇ ಅತ್ಯುತ್ತಮ ಕ್ಯಾಮೆರಾ ಲಭ್ಯವಾಗುತ್ತಿರುವ ಕಾರಣದಿಂದಾಗಿ ಸ್ಮಾರ್ಟ್‌ಫೋನ್ ಖರೀದಿಸುವ ಗ್ರಾಹಕರು ಹೆಚ್ಚಾಗಿ 64 ಮೆಗಾ ಪಿಕ್ಸಲ್‌ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳತ್ತ ಗಮನ ಹರಿಸುವಂತಾಗಿದೆ. ಹಾಗಾದರೇ ಸದ್ಯ ಬಜೆಟ್‌ ಬೆಲೆಯಲ್ಲಿ ಲಭ್ಯವಿರುವ 64 ಮೆಗಾ ಪಿಕ್ಸಲ್‌ ಸೆನ್ಸಾರ್ ಕ್ಯಾಮೆರಾ ಮೊಬೈಲ್‌ಗಳು ಯಾವುವು ಎಂಬುದನ್ನು ತಿಳಿಯಲು ಮುಂದೆ ಓದಿರಿ.

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64GB ಮತ್ತು 6GB + 128GB ಆಗಿವೆ.‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ 5,020 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ರಿಯಲ್‌ಮಿ 8 ಸ್ಮಾರ್ಟ್‌ಫೋನ್

ರಿಯಲ್‌ಮಿ 8 ಸ್ಮಾರ್ಟ್‌ಫೋನ್

ರಿಯಲ್‌ಮಿ 8 ಸ್ಮಾರ್ಟ್‌ಫೋನ್ 6.4 AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಹಾಗೆಯೇ ಡಿಸ್‌ಪ್ಲೇಯು HDR 10+ ಸಫೋರ್ಟ್‌ ಸಹ ಪಡೆದುಕೊಂಡಿದೆ. ಇದು ಮೀಡಿಯಾ ಟೆಕ್ ಹಿಲಿಯೋ G95 ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ ಅಡ್ರೆನೊ 618 GPU ಗ್ರಾಫಿಕ್ ಸಪೋರ್ಟ್‌ನ ಸೌಲಭ್ಯವನ್ನು ಪಡೆದಿದೆ. ಹಾಗೆಯೇ ಪ್ರೊಸೆಸರ್‌ ಇತ್ತೀಚಿನ ಆಂಡ್ರಾಯ್ಡ್‌ 11 ಓಎಸ್‌ ಬೆಂಬಲವನ್ನು ಪಡೆದುಕೊಂಡಿರಲಿದೆ. ಇನ್ನು ಈ ಫೋನ್‌ 4GB + 128 GB ಮತ್ತು 8GB + 128 GB ವೇರಿಯಂಟ್ ಮಾದರಿಗಳ ಆಯ್ಕೆ ಪಡೆದಿದೆ. ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದೆ. ಈ ಫೋನ್ 5,000 mAh ಬ್ಯಾಟರಿ ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, ಇದರೊಂದಿಗೆ 30W ಡಾರ್ಟ್‌ ಸಾಮರ್ಥ್ಯದ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿರಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್‌ 1,080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ ಈ ಆಕ್ಟಾ ಕೋರ್ exynos 9825 SoC ಪ್ರೊಸೆಸರ್‌ ಹೊಂದಿದ್ದು, ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇದರೊಂದಿಗೆ ಸೆಲ್ಫಿಗಾಗಿ 32ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 7,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 25W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ.

ಮೊಟೊ G30 ಸ್ಮಾರ್ಟ್‌ಫೋನ್‌

ಮೊಟೊ G30 ಸ್ಮಾರ್ಟ್‌ಫೋನ್‌

ಮೊಟೊ G30 ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸಲ್ ರೆಸಲ್ಯೂಶನ್ ಸಫೋರ್ಟ್‌ ಪಡೆದಿದ್ದು, 6.5 ಇಂಚಿನ ಪೂರ್ಣ ಹೆಚ್‌ಡಿ ಡಿಸ್‌ಪ್ಲೇ ಪಡೆದಿದೆ. ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ಅನುಪಾತವು 20:9 ಆಗಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 662 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಅಲ್ಲದೆ ಆಂಡ್ರಾಯ್ಡ್‌ 11 ಓಎಸ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾ 13ಎಂಪಿ ಸೆನ್ಸಾರ್‌ನಲ್ಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಹಾಗೆಯೇ 20W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ.

ವಿವೋ V20 ಸ್ಮಾರ್ಟ್‌ಫೋನ್‌

ವಿವೋ V20 ಸ್ಮಾರ್ಟ್‌ಫೋನ್‌

ವಿವೋ V20 ಸ್ಮಾರ್ಟ್‌ಫೋನ್‌ 2,400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ 6.44 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 730G ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಟ್ರಿಪಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಹೊಂದಿದೆ. ಇದಲ್ಲದೆ 4000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್‌ ಅಧಿಕ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದ್ದು, 6.46 ಇಂಚಿನ ಸೂಪರ್ AMOLED ಇನ್‌ಫೀನಿಟಿ O ಡಿಸ್‌ಪ್ಲೇಯನ್ನು ಪಡೆದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 720G ಪ್ರೊಸೆಸರ್‌ ಬಲದಲ್ಲಿ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ 6GB RAM + 128GB ಮತ್ತು 8GB RAM + 128GB ಆಯ್ಕೆಗಳಿವೆ. ಇದು ಕ್ವಾಡ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಸೆಲ್ಫಿ ಕ್ಯಾಮೆರಾ 32 ಮೆಗಾಪಿಕ್ಸೆಲ್ ಸೆನ್ಸಾರ್ ನಲ್ಲಿ ಇದೆ. ಹಾಗೆಯೇ 4,500mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಜೊತೆಗೆ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ.

Best Mobiles in India

English summary
6 Best 64MP Camera Phones at Budget Price Tag (2022).
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+