ಬಜೆಟ್ ದರದಲ್ಲಿ ಲಭ್ಯ ಇರುವ 6000mAh ಬ್ಯಾಟರಿ ಸ್ಮಾರ್ಟ್‌ಫೋನ್‌ಗಳಿವು!
ಇತ್ತೀಚಿನ ಹೊಸ ಸ್ಮಾರ್ಟ್‌ಫೋನ್‌ಗಳು ಆಕರ್ಷಕ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ. ಅವುಗಳಲ್ಲಿ ಅಧಿಕ ಬ್ಯಾಟರಿ ಬ್ಯಾಕ್‌ಅಪ್ ಆಯ್ಕೆಯು ಒಂದಾಗಿದೆ. ಮೊಬೈಲ್ ಖರೀದಿಸುವ ಬಹುತೇಕ ಗ್ರಾಹಕರು ಬಿಗ್ ಬ್ಯಾಟರಿ ಫೀಚರ್ ಇರುವ ಫೋನ್‌ಗಳತ್ತ ಮುಖ ಮಾಡುತ್ತಾರೆ. ಹೀಗಾಗಿ ಬಜೆಟ್ ದರದ ಫೋನ್‌ಗಳಲ್ಲಿಯೂ ಅತ್ಯುತ್ತಮ ಬ್ಯಾಟರಿ ಕಾಣಬಹುದಾಗಿದೆ.
ಹೌದು, ಮಲ್ಟಿಟಾಸ್ಕ್ ಕೆಲಸ ಸುಲಲಿತವಾಗಿ ನಿರ್ವಹಿಸಲು ಹಾಗೀ ದೀರ್ಘ ಅವಧಿ ವರೆಗೆ ಬ್ಯಾಟರಿ ಬ್ಯಾಕ್‌ಅಪ್ ಉಳಿಕೆಗಾಗಿ ಫೋನ್‌ಗಳಲ್ಲಿ ಅತ್ಯುತ್ತಮ ಬ್ಯಾಟರಿ ಅಗತ್ಯ ಇದೆ. ಈ ನಿಟ್ಟಿನಲ್ಲಿ 5,000mAh ಮತ್ತು 6,000 mAh ಸಾಮರ್ಥ್ಯದ ಮೊಬೈಲ್‌ಗಳು ಹೆಚ್ಚು ಆಕರ್ಷಕ ಎನಿಸಿಕೊಂಡಿವೆ. ಹಾಗಾದರೇ ಸುಮಾರು 15,000ರೂ. ಗಳ ಆಸುಪಾಸಿನಲ್ಲಿ 6000mAh ಬ್ಯಾಟರಿ ಸೌಲಭ್ಯದ ಕೆಲವು ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ನೋಡೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಮೊಬೈಲ್
ಸ್ಯಾಮ್‌ಸಂಗ್‌ನ ಈ ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ V ಸೂಪರ್ AMOLED ಡಿಸ್‌ಪ್ಲೇ ಅನ್ನು ಪಡೆದಿದ್ದು, ಹಾಗೆಯೇ ಈ ಡಿಸ್‌ಪ್ಲೇ 1080 x 2340 ಪಿಕ್ಸೆಲ್ ಸ್ಕ್ರಿನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಇದರ ಜೊತೆಗೆ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಹೊಂದಿದ್ದು, 90 Hz ರಿಫ್ರೆಶ್ ರೇಟ್ ಸಪೋರ್ಟ್ ಕೂಡಾ ಒಳಗೊಂಡಿದೆ.
ಅಲ್ಲದೇ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್ ಪವರ್ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಕೆಲಸ ನಿರ್ವಹಿಸಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದ್ದು, ಇದು 25W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.

ಮೊಟೊರೊಲಾ G54 5G ಫೋನ್
ಮೊಟೊ ಈ ಫೋನ್ 6.5 ಇಂಚಿನ ಫುಲ್ ಹೆಚ್‌ಡಿ+ LED ಡಿಸ್‌ಪ್ಲೇ ಅನ್ನು ಹೊಂದಿದ್ದು, ಹಾಗೆಯೇ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಒಳಗೊಂಡಿದೆ. ಅಲ್ಲದೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7020 ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಅಪ್‌ಡೇಟ್‌ಗೂ ಬೆಂಬಲ ಲಭ್ಯ.
ಇದರೊಂದಿಗೆ ಈ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿ ಇದೆ. ಈ ಫೋನ್ 33W ಚಾರ್ಜಿಂಗ್ ಸಪೋರ್ಟ್ ನೊಂದಿಗೆ 6000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಸಹ ಇದೆ.
ಮೊಟೊ G24 ಪವರ್ ಫೋನ್
ಈ ಸ್ಮಾರ್ಟ್‌ಫೋನ್ 6.6 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಫೋನ್ 90Hz ರಿಫ್ರೆಶ್ ರೇಟ್ ಆಯ್ಕೆಯೊಂದಿಗೆ , ಸ್ಟಿರಿಯೊ ಸ್ಪೀಕರ್‌ಗಳು ಮತ್ತು ಡಾಲ್ಬಿ ಅಟ್ಮಾಸ್ ಸೌಲಭ್ಯ ಪಡೆದಿದೆ. ಅಲ್ಲದೆ ಈ ಫೋನ್ 537 ನಿಟ್ಸ್ ಬ್ರೈಟ್‌ನೆಸ್ ಆಯ್ಕೆ ಪಡೆದುಕೊಂಡಿದೆ. ಹಾಗೆಯೇ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G85 12nm ಪ್ರೊಸೆಸರ್ ಮೂಲಕ ಕಾರ್ಯ ನಿರ್ವಹಿಸಲಿದ್ದು, ಆಂಡ್ರಾಯ್ಡ್ 14 ಅನ್ನು ಸಪೋರ್ಟ್ ಪಡೆದಿದೆ.
ಇನ್ನು ಮೊಟೊ ಸಂಸ್ಥೆಯ ಈ ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಇದರೊಂದಿಗೆ ಈ ಫೋನಿನ ಪ್ಲಾಸ್ ಪಾಯಿಂಟ್ ಎಂದರೆ ಅದು 6,000mAh ಸಾಮರ್ಥ್ಯದ ಬ್ಯಾಟರಿ ಜೊತೆಗೆ 33W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ.


Click it and Unblock the Notifications








