ಬಜೆಟ್‌ ಬೆಲೆಯಲ್ಲಿ ಲಭ್ಯವಿರುವ ಅಧಿಕ ವೇಗದ ಸ್ಮಾರ್ಟ್‌ಫೋನ್‌ಗಳ ಲಿಸ್ಟ್‌ ಇಲ್ಲಿದೆ!

|

ಸದ್ಯ ಸ್ಮಾರ್ಟ್‌ಫೋನ್‌ಗಳು ಎಲ್ಲರಿಗೂ ಅಗತ್ಯ ಮತ್ತು ಅವಶ್ಯ ಸಾಧನವಾಗಿದೆ. ಇಂದಿನ ಬಹುತೇಕ ಕೆಲಸಗಳು ಸ್ಮಾರ್ಟ್‌ಫೋನ್ ಮೂಲಕವೇ ನಡೆಯುತ್ತವೆ. ಹೀಗಾಗಿ ಬಹುತೇಕ ಗ್ರಾಹಕರು ಹೆಚ್ಚಿನ RAM ಫೀಚರ್ ಇರುವ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಲು ಬಯಸುತ್ತಾರೆ. RAM ಸಾಮರ್ಥ್ಯ ಹೆಚ್ಚಿರುವ ಫೋನ್‌ಗಳು ವೇಗವಾಗಿ ಕಾರ್ಯನಿರ್ವಹಿಸಲು ಪೂರಕವಾಗಿರುತ್ತವೆ. ಅಲ್ಲದೇ ಮಲ್ಟಿ ಟಾಸ್ಕ್ ಕೆಲಸ ಮಾಡುವಾಗ ಮತ್ತು ಅಪ್ಲಿಕೇಶನ್ ಇನ್‌ಸ್ಟಾಲ್‌ ಮಾಡುವಾಗ ಕಾರ್ಯವೈಖರಿ ಯಾವುದೇ ಅಡೆ ತಡೆ ಆಗುವುದು ಕಡಿಮೆ.

ಸ್ಮಾರ್ಟ್‌ಫೋನ್‌ಗಳ

ಹೌದು, ಹೊಸ ಫೋನ್ ಖರೀದಿಸುವ ಗ್ರಾಹಕರು ಹೈ ಎಂಡ್ RAM ಆಯ್ಕೆ ಮಾಡುತ್ತಾರೆ. ಅಧಿಕ RAM ಆಯ್ಕೆಯಲ್ಲಿ ಸ್ಟೋರೇಜ್ ಸಹ ಹೆಚ್ಚಿರುತ್ತದೆ. ಸದ್ಯ ಗ್ರಾಹಕರು ಕನಿಷ್ಠ 6GB RAM ಗಿಂತ ಕಡಿಮೆ ಆಯ್ಕೆ ಮಾಡುವುದಿಲದಲ. 8GB ಮತ್ತು 12GB RAM ಹೊಂದಿರುವ ಸ್ಮಾರ್ಟ್‌ಫೋನ್‌ಗಳ ಕಾರ್ಯವೈಖರಿ ಅತ್ಯುತ್ತಮ ಆಗಿರುತ್ತದೆ. ಹಾಗಾದರೇ ಬಜೆಟ್‌ ದರದಲ್ಲಿ 8GB RAM ಸಾಮರ್ಥ್ಯದ ಕೆಲವು ಅತ್ಯುತ್ತಮ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿವೋ Y33s ಸ್ಮಾರ್ಟ್‌ಫೋನ್

ವಿವೋ Y33s ಸ್ಮಾರ್ಟ್‌ಫೋನ್

ವಿವೋ Y33s ಸ್ಮಾರ್ಟ್‌ಫೋನ್ 2,408 x 1,080 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿರಲಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G80 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. 8GB RAM ಸಾಮರ್ಥ್ಯ ಮತ್ತು 128GB ಆಂತರಿಕ ಸ್ಟೋರೇಜ್‌ನ ಆಯ್ಕೆಯನ್ನು ಹೊಂದಿದೆ. ಹಾಗೆಯೇ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಎಂಪಿ ಸೆನ್ಸಾರ್ ಇದೆ. ಇದರೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದ್ದು, ಅದಕ್ಕೆ ಪೂರಕವಾಗಿ 18W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಇದೆ.

ರಿಯಲ್‌ಮಿ 8 5G ಸ್ಮಾರ್ಟ್‌ಫೋನ್

ರಿಯಲ್‌ಮಿ 8 5G ಸ್ಮಾರ್ಟ್‌ಫೋನ್

ರಿಯಲ್‌ಮಿ 8 5G ಸ್ಮಾರ್ಟ್‌ಫೋನ್‌ 1,080 × 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌-ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ನಲ್ಲಿ ರಿಯಲ್‌ಮಿ ಯುಐ 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ಕ್ವಿಕ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ.

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದರೊಂದಿಗೆ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB + 128GB ವೇರಿಯಂಟ್ ಆಯ್ಕೆ ಪಡೆದಿದೆ. ಇದು ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಐಸೊಸೆಲ್ GW3 ಸೆನ್ಸಾರ್‌ ಹೊಂದಿದೆ. ಹಾಗೆಯೇ ಈ ಫೋನ್ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M31 ಸ್ಮಾರ್ಟ್‌ಫೋನ್

ಸ್ಯಾಮ್‌ಸಂಗ್ ಗ್ಯಾಲಕ್ಸಿ M31 ಸ್ಮಾರ್ಟ್‌ಫೋನ್

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಂ31 ಸ್ಮಾರ್ಟ್‌ಫೋನ್‌ 1080x2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿರುವ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಇನ್‌ಫಿನಿಟಿ ಯು ಡಿಸ್‌ಪ್ಲೇ ಹೊಂದಿದೆ. ಇದು ಸ್ಯಾಮ್‌ಸಂಗ್‌ exynos 9611 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ 6GB RAM ಮತ್ತು 64GB ಶೇಖರಣಾ ಸಾಮರ್ಥ್ಯ ಹಾಗೂ 8 GB RAM ಮತ್ತು 128GB ಸಾಮರ್ಥ್ಯ ವೆರಿಯೆಂಟ್‌ ಆಯ್ಕೆಯಲ್ಲಿ ಈ ಸ್ಮಾರ್ಟ್‌ಫೋನ್‌ ಲಭ್ಯವಾಗಲಿದೆ. ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ.

ಪೊಕೊ X3 ಸ್ಮಾರ್ಟ್‌ಫೋನ್

ಪೊಕೊ X3 ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC, ಪ್ರೊಸೆಸರ್‌ ವೇಗವನ್ನು ಹೊಂದಿದ್ದು,ಆಂಡ್ರಾಯ್ಡ್ 10 ಆಧಾರಿತ ಎಂಐಯುಐ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 6GB RAM +64GB ಮತ್ತು 8GB RAM +128GB ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಇದು 5,160mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಇನ್‌ಫಿನಿಕ್ಸ್‌ 10 ಪ್ರೊ ಸ್ಮಾರ್ಟ್‌ಫೋನ್

ಇನ್‌ಫಿನಿಕ್ಸ್‌ 10 ಪ್ರೊ ಸ್ಮಾರ್ಟ್‌ಫೋನ್

ಇನ್‌ಫಿನಿಕ್ಸ್‌ ನೋಟ್‌ 10 ಪ್ರೊ ಫೋನ್ 6.95 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, ಮೀಡಿಯಾ ಟೆಕ್ ಹಿಲಿಯೊ G95 ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಈ ಫೋನ್ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 64 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಆಗಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸೆನ್ಸಾರ್ ಪಡೆದಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 8GB RAM + 256GB ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

Best Mobiles in India

English summary
8GB RAM Smartphones Under 20,000 In India.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X