Just In
- 5 min ago
ಸ್ಯಾಮ್ಸಂಗ್ನ ಈ ಹೊಸ ಡಿವೈಸ್ ನೋಡಿದ್ರೆ ನಿಮಗೆ ಏನನ್ನಿಸುತ್ತೆ? ಇದೇನು ಸಾಬೂನಾ?
- 25 min ago
ಬೆಸ್ಟ್ ಕ್ಯಾಮೆರಾ ಫೋನ್ ಖರೀದಿಸಬೇಕೆ?..ಹಾಗಿದ್ರೆ, ಸ್ವಲ್ಪ ಕಾಯುವುದು ಉತ್ತಮ!
- 40 min ago
ಫೆಬ್ರವರಿ ತಿಂಗಳಿನಲ್ಲಿ ಅಬ್ಬರಿಸಲಿರುವ ಪ್ರಮುಖ ಸ್ಮಾರ್ಟ್ಫೋನ್ಗಳ ವಿವರ ಇಲ್ಲಿದೆ!
- 1 hr ago
MusicLM :ಗೂಗಲ್ನಿಂದ ಹೊಸ ಟೂಲ್; ಇದು ಪಠ್ಯವನ್ನು ಸಂಗೀತವಾಗಿ ಪರಿವರ್ತಿಸಲಿದೆ!
Don't Miss
- Finance
Budget 2023 Expectations: ಸಾಮಾನ್ಯ ಜನರ ಬಜೆಟ್ ನಿರೀಕ್ಷೆಗಳೇನು?
- News
ಭಾರತ್ ಜೋಡೋ ಯಾತ್ರೆ: ಸಂಭ್ರಮಾಚರಣೆಯ ಉತ್ಸಾಹ ಕುಗ್ಗುವ ಸಾಧ್ಯತೆ
- Sports
BGT 2023: ಭಾರತದ ಸ್ಪಿನ್ ದಾಳಿ ಭಯ: ಆಸ್ಟ್ರೇಲಿಯಾ ಆಟಗಾರರು ಮಾಡ್ತಿರೋದೇನು?
- Automobiles
ಶೀಘ್ರವೇ ಕಡಿಮೆ ಬೆಲೆಯಲ್ಲಿ ಸಿಗಲಿದೆ ಮಾರುತಿ ಸುಜುಕಿ ಆಲ್ಟೊ ಕೆ10 ಎಕ್ಸ್ಟ್ರಾ ಎಡಿಷನ್
- Movies
'ಕ್ರಾಂತಿ' ₹100 ಕೋಟಿ ಕ್ಲಬ್ ಸೇರಿದ್ದು ಹೇಗೆ? ಥಿಯೇಟರ್ನಿಂದ ಎಷ್ಟು? ಟಿವಿ ರೈಟ್ಸ್ನಿಂದ ಎಷ್ಟು?
- Lifestyle
ಫೆಬ್ರವರಿ ತಿಂಗಳಿನಲ್ಲಿ ಜನಿಸಿದವರ ಕುರಿತ ಆಸಕ್ತಿಕರ ಸಂಗತಿಗಳಿವು
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಡ್ಯುಯಲ್ ಕ್ಯಾಮೆರಾ-ಫೇಸ್‌ಲಾಕ್ ಜೊತೆ 4000mAh ಬ್ಯಾಟರಿ: ಒಂದರಲ್ಲೇ ಎಲ್ಲಾ..!
ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ಬಳಕೆದಾರರು ಕಡಿಮೆ ಬೆಲೆಗೆ ಹೆಚ್ಚಿನ ಆಯ್ಕೆಗಳನ್ನು ನೀಡುವ ಸ್ಮಾರ್ಟ್‌ಫೋನ್‌ಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿರುವ ಬೆಳವಣಿಗೆಯೂ ಕಂಡುಬರುತ್ತಿರುವ ಹಿನ್ನಲೆಯಲ್ಲಿ ಅನೇಕ ಸ್ಮಾರ್ಟ್‌ಫೋನ್ ಕಂಪನಿಗಳು ಕಡಿಮೆ ಬೆಲೆಗೆ ಹೆಚ್ಚಿನ ವಿಶೇಷತೆಗಳಿರುವ ಸ್ಮಾರ್ಟ್ ಫೋನ್ ಗಳನ್ನು ಬಿಡುಗಡೆ ಮಾಡುತ್ತಿವೆ. ಇದೇ ಮಾದರಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್ ಮಾಡಿರುವ ಆಲ್ಕಾಟೆಲ್ ಕಂಪನಿಯೂ ಪ್ರೀಮಿಯಮ್ ವಿಶೇಷತೆಗಳನ್ನು ಹೊಂದಿರುವ ಸ್ಮಾರ್ಟ್‌ಫೋನ್ ವೊಂದನ್ನು ಲಾಂಚ್ ಮಾಡಲು ಮುಂದಾಗಿದೆ.

ಆಲ್ಕಾಟೆಲ್ ಕಂಪನಿಯೂ ನೂತನವಾಗಿ ಆಲ್ಕಾಟೆಲ್ 5V ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದ್ದು, ಮಾರುಕಟ್ಟೆಯಲ್ಲಿ ಸದ್ಯ ಟ್ರೆಂಡ್ ಆಗಿರುವ ಎಲ್ಲಾ ವಿಶೇಷತೆಗಳನ್ನು ಹೊಂದಿರುವ ಸ್ಮಾರ್ಟ್‌ಫೋನ್ ಇದಾಗಿದ್ದು, ಬಳಕೆದಾರರಿಗೆ ಅತೀ ಕಡಿಮೆ ಬೆಲೆಗೆ ಟಾಪ್ ಎಂಡ್ ವಿಶೇಷತೆಗಳನ್ನು ಹೊಂದಿದೆ. ಈ ಹಿನ್ನಲೆಯಲ್ಲಿ ಆಲ್ಕಾಟೆಲ್ 5V ಸ್ಮಾರ್ಟ್‌ಫೋನ್ ಕುರಿತ ಮಾಹಿತಿಯೂ ಮುಂದಿದೆ.

6.2 ಇಂಚಿನ ಡಿಸ್‌ಪ್ಲೇ:
ಆಲ್ಕಾಟೆಲ್ 5V ಸ್ಮಾರ್ಟ್‌ಫೋನಿನಲ್ಲಿ ಐಪೋನ್ X ಮಾದರಿಯಲ್ಲಿ ನೋಚ್ ಡಿಸ್‌ಪ್ಲೇಯನ್ನು ಕಾಣಬಹುದಾಗಿದೆ. 19:9 ಅನುಪಾತದಿಂದ ಕೂಡಿರುವ 6.1 ಇಂಚಿನ ಡಿಸ್‌ಪ್ಲೇ ಮಲ್ಟಿಟೆಚ್ ಆಯ್ಕೆಯನ್ನು ಒಳಗೊಂಡಿದೆ ಎನ್ನಲಾಗಿದೆ. ಇದಲ್ಲದೇ 88% ಡಿಸ್‌ಪ್ಲೇಯನ್ನು ಹೊಂದಿರುವ ವಿನ್ಯಾಸವು ಇದಾಗಿದೆ.

3GB RAM:
ಆಲ್ಕಾಟೆಲ್ 5V ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹೆಲಿಯಾ P22 ಆಕ್ಟಾಕೋರ್ ಪ್ರೋಸೆಸರ್ ನೊಂದಿಗೆ ಕಾಣಿಸಿಕೊಂಡಿದ್ದು, 3GB RAM ಮತ್ತು 32GB ಇಂಟರ್ನಲ್ ಮೆಮೊರಿಯೊಂದಿಗೆ ಮಾರಾಟವಾಗಲಿದೆ. ಅಲ್ಲದೇ 128GB ವರೆಗೆ ಮೆಮೊರಿಯನ್ನು ವಿಸ್ತರಿಸಿಕೊಳ್ಳುವ ಅವಕಾಶವನ್ನು ಮಾಡಿಕೊಡಲಾಗಿದೆ.

ಡ್ಯುಯಲ್ ಕ್ಯಾಮೆರಾ ಇದೆ:
ಆಲ್ಕಾಟೆಲ್ 5V ಸ್ಮಾರ್ಟ್‌ಫೋನ್ ಬಜೆಟ್ ಬೆಲೆಯಲ್ಲಿ ದೊರೆಯುತ್ತಿದ್ದರೂ ಸಹ ಡ್ಯುಯಲ್ ಕ್ಯಾಮೆರಾವನ್ನು ಹೊಂದಿದೆ. 12 MP + 2 MP ಕ್ಯಾಮೆರಾ ಸೆಟಪ್ ಅನ್ನು ನೀಡಲಾಗಿದ್ದು, ಬಳಕೆದಾರರಿಗೆ ಉತ್ತಮ ಚಿತ್ರಗಳನ್ನು ಸೆರೆಹಿಡಿಯಲು ಇದು ಸಹಾಯವನ್ನು ಮಾಡಲಿದೆ. ಇದಲ್ಲದೇ 8MP ಸೆಲ್ಫಿ ಕ್ಯಾಮೆರಾವನ್ನು ಮುಂಭಾಗದಲ್ಲಿ ಕಾಣಬಹುದಾಗಿದೆ.

ಫೇಸ್ ಆನ್‌ಲಾಕ್:
ಇಲ್ಲದೇ ಆಲ್ಕಾಟೆಲ್ 5V ಸ್ಮಾರ್ಟ್‌ಫೋನ್ ವಿಶೇಷತೆಗಳಲ್ಲಿ ಪ್ರಮುಖವಾಗಿರುವುದು ಫೇಸ್ ಆನ್ ಲಾಕ್, ಮುಂಭಾಗದಲ್ಲಿ ನೀಢಲಾಗಿರುವ 8MP ಕ್ಯಾಮೆರಾ ನಿಮ್ಮ ಮುಖವನ್ನು ಗುರುತಿಸಿ ಲಾಕ್ ಓಪನ್ ಮಾಡುವ ಶಕ್ತಿಯನ್ನು ಪಡೆದುಕೊಂಡಿದೆ ಎನ್ನಲಾಗಿದೆ. ಇದರೊಂದಿಗೆ ಫಿಂಗರ್ ಪ್ರಿಂಟ್ ಸ್ಕ್ಯಾನರ್ ಅನ್ನು ಕಾಣಬಹುದಾಗಿದೆ.

ಆಂಡ್ರಾಯ್ಡ್ ಒರಿಯೋ:
ಸದ್ಯ ಮಾರುಕಟ್ಟೆಯಲ್ಲಿ ಲೆಟೆಸ್ಟ್ ಎನ್ನಲಾಗಿರುವ ಆಂಡ್ರಾಯ್ಡ್ ಓರಿಯೊದಲ್ಲಿ ಕಾರ್ಯನಿರ್ವಹಿಸಲಿರುವ ಆಲ್ಕಾಟೆಲ್ 5V ಸ್ಮಾರ್ಟ್‌ಫೋನ್, 4000mAh ಬ್ಯಾಟರಿಯನ್ನು ಹೊಂದಿದೆ ಎನ್ನಲಾಗಿದೆ. ಇದಲ್ಲದೇ ಇದು ಸಿಂಗಲ್ ಸಿಮ್ ನಲ್ಲಿ ವರ್ಕ್ ಆಗಲಿದ್ದು, ಡ್ಯೂಯಲ್ ಸಿಮ್ ಆಯ್ಕೆಯೂ ಇಲ್ಲ ಎನ್ನಲಾಗಿದೆ.

ಬೆಲೆ:
ಆಲ್ಕಾಟೆಲ್ 5V ಸ್ಮಾರ್ಟ್‌ಫೋನ್ ಸದ್ಯ ಜಾಗತಿಕ ಮಾರುಕಟ್ಟೆಯಲ್ಲಿ ಮಾತ್ರವೇ ಕಾಣಿಸಿಕೊಂಡಿದ್ದು, ಶೀಘ್ರವೇ ಭಾರತೀಯ ಮಾರುಕಟ್ಟೆಯಲ್ಲಿಯೂ ಸದ್ದು ಮಾಡಲಿದ್ದು, ಇದು ರೂ.13,500ಕ್ಕೆ ಮಾರಾಟವಾಗಲಿದೆ ಎನ್ನುವ ಮಾಹಿತಿಯೂ ಲಭ್ಯವಾಗಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470