ಭಾರತೀಯ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ ಬಜೆಟ್ ಸ್ಮಾರ್ಟ್‌ಫೋನ್‌ಗಳ ಬೇಡಿಕೆಯೂ ಹೆಚ್ಚಾಗಿರುವ ಸಂದರ್ಭದಲ್ಲಿ ಅನೇಕ ಸ್ಮಾರ್ಟ್‌ಫೋನ್ ತಯಾರಕ ಕಂಪನಿಗಳು ಅತೀ ಕಡಿಮೆ ಬೆಲೆಗೆ ಉತ್ತಮ ಗುಣಮಟ್ಟಗಳನ್ನು ಹೊಂದಿರುವ ಸ್ಮಾರ್ಟ್‌ಫೋನ್ ಗಳನ್ನು ಮಾರುಕಟ್ಟೆಗೆ ಪರಿಚಯ ಮಾಡಲು ಮುಂದಾಗಿವೆ. ಇದೇ ಮಾದರಿಯಲ್ಲಿ ಜನವರಿ 26ಕ್ಕೆ ರೂ. 2000ಕ್ಕೆ ಆಂಡ್ರಾಯ್ಡ್ ಗೋ ಸ್ಮಾರ್ಟ್‌ಫೋನ್ ಲಾಂಚ್ ಆಗಲಿದೆ.

ಓದಿರಿ: ಹೋಟೆಲ್-ಮಾಲ್‌ಗಳಲ್ಲಿ ಸ್ಪೈ ಕ್ಯಾಮೆರಾ ಇದ್ರೆ ಕಂಡುಹಿಡಿಯುವುದು ಹೇಗೆ.?
ಈ ವಿಭಾಗದಲ್ಲಿ ಚೀನಾ ಫೋನ್‌ಗಳ ಹಾವಳಿಯೂ ಹೆಚ್ಚಾಗಿದ್ದು, ಈ ಹಿನ್ನಲೆಯಲ್ಲಿ ಭಾರತೀಯ ಮೂಲದ ಸ್ಮಾರ್ಟ್‌ಫೋನ್ ತಯಾರಿಕಾ ಕಂಪನಿ ಮೈಕ್ರೋಮ್ಯಾಕ್ಸ್, ಅತೀ ಕಡಿಮೆ ಬೆಲೆಗೆ ಸ್ಮಾರ್ಟ್‌ಫೋನ್‌ವೊಂದನ್ನು ಲಾಂಚ್ ಮಾಡಲು ಮುಂದಾಗಿದೆ. ಕೇವಲ 31 ಡಾಲರ್‌ಗೆ ಅಂದರೆ ಭಾರತೀಯ ರೂಪಾಯಿಗಳಲ್ಲಿ ರೂ.200೦ಕ್ಕಿಂತಲೂ ಕಡಿಮೆ ಬೆಲೆಗೆ ಆಂಡ್ರಾಯ್ಡ್ ಗೋನಲ್ಲಿ ಕಾರ್ಯನಿರ್ವಹಿಸುವ ಸ್ಮಾರ್ಟ್‌ಫೋನ್ ಲಾಂಚ್ ಮಾಡಲಿದೆ ಎನ್ನಲಾಗಿದೆ.
ಆಂಡ್ರಾಯ್ಡ್ ಗೋ:
ಈಗಾಗಲೇ ಗೂಗಲ್ ಎಂಟ್ರಿ ಲೆವೆಲ್ ಆಂಡ್ರಾಯ್ಡ್ ಫೋನ್‌ಗಳಲ್ಲಿ ಬಳಕೆ ಮಾಡಿಕೊಳ್ಳುವ ಸಲುವಾಗಿ ಬಿಡುಗಡೆ ಮಾಡಿರುವ ಆಂಡ್ರಾಯ್ಡ್ ಗೋ ಆಪರೇಟಿಂಗ್ ಸಿಸ್ಟಮ್ ಹೆಚ್ಚು ಖ್ಯಾತಿಯನ್ನು ಪಡೆದುಕೊಳ್ಳುತ್ತಿದ್ದು, ಇದೇ ಕಾರ್ಯಚರಣೆಯನ್ನು ಹೊಂದಿರುವ ಸ್ಮಾರ್ಟ್‌ಫೋನ್ ಅನ್ನು ಮೈಕ್ರೊಮಾಕ್ಸ್ ಬಿಡುಗಡೆ ಮಾಡಲಿದೆ ಎನ್ನಲಾಗಿದೆ.
ಆಂಡ್ರಾಯ್ಡ್ ಓರಿಯೋ:
ಮೈಕ್ರೋಮಾಕ್ಸ್ ಬಿಡುಗಡೆ ಮಾಡಲು ಸಿದ್ಧತೆ ನಡೆಸಿರುವ ಆಂಡ್ರಾಯ್ಡ್ ಗೋ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಹೊಸ ಭಾಷ್ಯವನ್ನು ಬರೆಯಲಿದೆ ಎನ್ನಲಾಗಿದೆ. ಈಗಾಗಲೇ ಗೂಗಲ್ ಲಾಂಚ್ ಮಾಡಿರುವ ಆಂಡ್ರಾಯ್ಡ್ ಓರಿಯೋದಲ್ಲಿ ಈ ಸ್ಮಾರ್ಟ್‌ಫೋನ್ ಕಾರ್ಯನಿರ್ವಹಿಲಿದೆ, ಆಂಡ್ರಾಯ್ಡ್ ಟಾಪ್ ಎಂಡ್ ಫೋನ್‌ಗಳೇ ಈ ಕಾರ್ಯಚರಣೆಯನ್ನು ಹೊಂದಿಲ್ಲ ಎನ್ನಬಹುದು.
ಗಣರಾಜ್ಯೋತ್ಸವದಂದು ಬಿಡುಗಡೆ:
ರೂ.2000ಕ್ಕೆ ಸ್ಮಾರ್ಟ್‌ಫೋನ್ ಅನ್ನು ಮೈಕ್ರೋ ಮಾಕ್ಸ್ ಇದೇ ಜನವರಿ 26ರಂದು ಗಣರಾಜ್ಯೋತ್ಸವದಂದು ಮಾರುಕಟ್ಟೆಗೆ ಲಾಂಚ್ ಮಾಡಲಿದೆ ಎನ್ನಲಾಗಿದೆ. ಇದು ಮಾರುಕಟ್ಟೆಯಲ್ಲಿ ಹೊಸ ಅಲೆಯನ್ನು ಹುಟ್ಟುಹಾಕಲಿದೆ ಎನ್ನಲಾಗಿದೆ.
1GB RAM ಇದರಲ್ಲಿ ಇರಲಿದೆ:
ಮೈಕ್ರೋಮಾಕ್ಸ್ ಬಿಡುಗಡೆ ಮಾಡಲಿರುವ ಈ ಹೊಸ ಸ್ಮಾರ್ಟ್‌ಫೋನ್ ನಲ್ಲಿ 1GB RAM ಸೇರಿದಂತೆ ಉತ್ತಮ ಫೀಚರ್ ಗಳನ್ನು ಕಾಣಬಹುದಾಗಿದೆ. ಬೆಲೆ ಕಡಿಮೆ ಎಂದ ತಕ್ಷಣ ಗುಣಮಟ್ಟದಲ್ಲಿ ಯಾವುದೇ ರಾಜಿಯಾಗಿಲ್ಲ ಎಂದು ಕಂಪನಿಯೂ ತಿಳಿಸಿದೆ.
Gizbot ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿ.Subscribe to Kannada Gizbot.