120Hz ರಿಫ್ರೆಶ್ ರೇಟ್ ಡಿಸ್‌ಪ್ಲೇ ಸೌಲಭ್ಯದ ಬೆಸ್ಟ್ ಸ್ಮಾರ್ಟ್‌ಫೋನ್‌ಗಳ ಲಿಸ್ಟ್ ಇಲ್ಲಿದೆ!
ಸದ್ಯ ಸ್ಮಾರ್ಟ್‌ಫೋನ್ ವಲಯದಲ್ಲಿ ಹಲವು ನೂತನ ಅಪ್‌ಡೇಟ್ ಕಾಣಬಹುದಾಗಿದ್ದು, ಮಾರುಕಟ್ಟೆಗೆ ಬರುತ್ತಿರುವ ಹೊಸ ಮೊಬೈಲ್‌ಗಳು ಅಚ್ಚರಿ ಆಯ್ಕೆಗಳೊಂದಿಗೆ ಲಗ್ಗೆ ಇಡುತ್ತಿವೆ. ಇನ್ನು ಹೊಸ ಫೋನ್ ಖರೀದಿಸುವಾಗ ಗ್ರಾಹಕರು ಮೊಬೈಲ್ ಪ್ರೊಸೆಸರ್, ಕ್ಯಾಮೆರಾ, ಬ್ಯಾಟರಿ, ಡಿಸ್‌ಪ್ಲೇ ಆಯ್ಕೆಗಳ ಜೊತೆಗೆ ಸ್ಕ್ರೀನ್ ರಿಫ್ರೆಶ್ ರೇಟ್ ಬಗ್ಗೆಯು ಗಮನ ನೀಡುತ್ತಾರೆ. ಇತ್ತೀಚಿಗಿನ ಫೋನ್‌ಗಳು ಕನಿಷ್ಠ 90Hz ರಿಫ್ರೆಶ್ ರೇಟ್ ಸೌಲಭ್ಯ ಪಡೆದಿರುತ್ತವೆ. ಅದಾಗ್ಯೂ, 120Hz ರಿಫ್ರೆಶ್ ರೇಟ್ ಸೌಲಭ್ಯದ ಫೋನ್‌ಗಳಿಗೆ ಡಿಮ್ಯಾಂಡ್ ಜಾಸ್ತಿ.
ಹೌದು, ಇತ್ತೀಚಿಗಿನ ಬಜೆಟ್ ದರದ ಬಹುತೇಕ ಮೊಬೈಲ್‌ಗಳು 120Hz ರಿಫ್ರೆಶ್ ರೇಟ್ ಸೌಲಭ್ಯದ ಡಿಸ್‌ಪ್ಲೇ (120Hz Display Refresh Rate) ಸೌಲಭ್ಯ ಒಳಗೊಂಡಿವೆ. ಅಧಿಕ ರಿಫ್ರೆಶ್ ರೇಟ್ ಫೋನಿನ ಸ್ಕ್ರೀನ್ ಟಚ್ ವೇಗಕ್ಕೆ ಪೂರಕವಾಗಿರುತ್ತದೆ. ಅಧಿಕ ರಿಫ್ರೆಶ್ ರೇಟ್ ಡಿಸ್‌ಪ್ಲೇಯು ನಯವಾಗಿ ಹಾಗೂ ವೇಗವಾಗಿ ಸ್ಕ್ರೀನ್ ಆಪರೇಟ್ ಮಾಡಲು ಸಹಾಯಕ ಎನಿಸುತ್ತದೆ. ಹೀಗಾಗಿ ಅನೇಕರು ಕನಿಷ್ಠ 120Hz ರಿಫ್ರೆಶ್ ರೇಟ್ ಸೌಲಭ್ಯದ ಫೋನ್ ಖರೀದಿಗೆ ಮುಂದಾಗುತ್ತಾರೆ. ಹಾಗಾದರೇ 120Hz ರಿಫ್ರೆಶ್ ರೇಟ್ ಪಡೆದ ಇತ್ತೀಚಿನ ಫೋನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G
ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಪಡೆದಿದ್ದು, ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೇ ಈ ಫೋನ್ 120Hz ರಿಫ್ರೆಶ್ ರೇಟ್ ಸಪೋರ್ಟ್ ಒಳಗೊಂಡಿದೆ. ಆಕ್ಟಾ-ಕೋರ್ ಸ್ನ್ಯಾಪ್‌ಡ್ರಾಗನ್ 695 SoC ಪ್ರೊಸೆಸರ್ ಪವರ್ ಹೊಂದಿದ್ದು, ಇದು ಆಂಡ್ರಾಯ್ಡ್ 14 ನಲ್ಲಿ ಕಾರ್ಯ ನಿರ್ವಹಿಸಲಿದೆ.
ಹಾಗೆಯೇ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒದಗಿಸಲಾಗಿದೆ. ಮೊಬೈಲ್ 5,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದು 80W ಫಾಸ್ಟ್ ಚಾರ್ಜಿಂಗ್ ಅನ್ನು ಪಡೆದಿದೆ.
ರಿಯಲ್‌ಮಿ GT 6T 5G
ರಿಯಲ್‌ಮಿ GT 6T ಮೊಬೈಲ್ 6.78 ಇಂಚಿನ 3D LTPO AMOLED ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದರ ಡಿಸ್‌ಪ್ಲೇಯು 2,789 x 1,264 ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. ಹಾಗೆಯೇ ಈ ಫೋನಿನ 120Hz ರಿಫ್ರೆಶ್ ರೇಟ್ ಸೌಲಭ್ಯ ಜೊತೆಗೆ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್ ಸೌಲಭ್ಯ ಸಹ ಕಾಣಬಹುದಾಗಿದೆ. ಜೊತೆಗೆ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 7+ ಜೆನ್ 3 ಚಿಪ್‌ಸೆಟ್ ಪ್ರೊಸೆಸರ್ ಬಲದಲ್ಲಿ ಕೆಲಸ ಮಾಡಲಿದೆ.
ಪ್ರೊಸೆಸರ್‌ಗೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಇದೆ. ಅಲ್ಲದೇ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಇದರೊಂದಿಗೆ 5,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದರ ಜೊತೆಗೆ 120W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಹೊಂದಿದೆ.
ಶಿಯೋಮಿ 14 CIVI
ಈ ಸ್ಮಾರ್ಟ್‌ಫೋನ್ 6.55 ಇಂಚಿನ 1.5K ಕರ್ವ್ಡ್ AMOLED ಡಿಸ್‌ಪ್ಲೇ ಸೌಲಭ್ಯ ಪಡೆದಿದ್ದು, 120Hz ರಿಫ್ರೆಶ್ ರೇಟ್ ಜೊತೆಗೆ 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಸೌಲಭ್ಯ ಪಡೆದಿದೆ. ಹಾಗೆಯೇ ಸ್ನಾಪ್‌ಡ್ರಾಗನ್ 8s ಜೆನ್ 3 SoC ಪ್ರೊಸೆಸರ್ ಪವರ್ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್‌ನೊಂದಿಗೆ ಕೆಲಸ ಮಾಡುತ್ತದೆ. ಇದರ ಜೊತೆಗೆ 4,700 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ 67W ವೈರ್ಡ್ ಚಾರ್ಜಿಂಗ್ ಸೌಲಭ್ಯ ಪಡೆದುಕೊಂಡಿದೆ.


Click it and Unblock the Notifications








