ಮೊಬೈಲ್ ಕ್ಯಾಮೆರಾದಲ್ಲಿ ಅತ್ಯುತ್ತಮ ಫೋಟೋ ತೆಗೆಯಬೇಕೆ?..ಈ ಫೋನ್ ಬೆಸ್ಟ್!
ಸ್ಮಾರ್ಟ್‌ಫೋನ್‌ಗಳಲ್ಲಿ ಕ್ಯಾಮೆರಾ ಫೀಚರ್ ತುಂಬಾ ಅಗತ್ಯ ಎನಿಸುತ್ತದೆ. ಹೀಗಾಗಿ ಅನೇಕರು ತಮಗೆ ಫೋಟೋಗ್ರಫಿ ಇಷ್ಟವಿಲ್ಲದಿದ್ದರು ಅತ್ಯುತ್ತಮ ಕ್ಯಾಮೆರಾ ಇರುವ ಫೋನ್ ಖರೀದಿಗೆ ಮುಂದಾಗುತ್ತಾರೆ. ಇನ್ನು ಫೋಟೋಗ್ರಫಿ ಆಸಕ್ತ ಗ್ರಾಹಕರಂತೂ ಹೈ ಎಂಡ್ ಕ್ಯಾಮೆರಾ ಸೌಲಭ್ಯ ಇರುವ ಫೋನ್‌ಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ. ಸದ್ಯ ಮಾರುಕಟ್ಟೆಯಲ್ಲಿ 200 ಮೆಗಾ ಪಿಕ್ಸಲ್ ಕ್ಯಾಮೆರಾಗಳು ಗ್ರಾಹಕರ ಹುಬ್ಬೇರಿಸುವಂತೆ ಮಾಡಿವೆ.
ಹೌದು, ಪ್ರಸ್ತುತ ಬಹುತೇಕ ಮೊಬೈಲ್ ಸಂಸ್ಥೆಗಳು ತಮ್ಮ ನೂತನ ಫೋನಿನಲ್ಲಿ ಉತ್ತಮ ಕ್ಯಾಮೆರಾ ಆಯ್ಕೆ ಒದಗಿಸುತ್ತ ಮುನ್ನಡೆದಿವೆ. ಅದಾಗ್ಯೂ, ಹೈ ಎಂಡ್ ಕ್ಯಾಮೆರಾ ಸೆನ್ಸಾರ್‌ನ ಫೋನ್‌ಗಳು ಗಮನ ಸೆಳೆಯುತ್ತವೆ. ಅದರಲ್ಲಿಯೂ ಇತ್ತೀಚಿನ 200ಎಂಪಿ ಕ್ಯಾಮೆರಾ ಸೆನ್ಸಾರ್ ಪಡೆದಿರುವ ಕೆಲವು ಫೋನ್‌ಗಳು ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿವೆ. ಹಾಗಾದರೇ 200 ಮೆಗಾ ಪಿಕ್ಸಲ್ ಕ್ಯಾಮೆರಾ ಸೌಲಭ್ಯದ ಕೆಲವು ಬೆಸ್ಟ್ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S24 ಅಲ್ಟ್ರಾ
ಸ್ಯಾಮ್‌ಸಂಗ್ ಗ್ಯಾಲಕ್ಸಿ S24 ಅಲ್ಟ್ರಾ ಮೊಬೈಲ್ ಹಿಂಬದಿಯಲ್ಲಿ ಕ್ವಾಡ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 200 ಮೆಗಾಪಿಕ್ಸೆಲ್ ಸೆನ್ಸಾರ್ ಆಗಿದೆ. ಇನ್ನು ಇದು 6.8 ಇಂಚಿನ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಪಡೆದಿದ್ದು, ಈ ಡಿಸ್‌ಪ್ಲೇಯು 3120 x 1440 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ.
ಹಾಗೆಯೇ ಈ ಫೋನ್ ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 8 ಜೆನ್ 3 SoC ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದ್ದು, ಇದಕ್ಕೆ ಅನುಗುಣವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಪಡೆದುಕೊಂಡಿದೆ. ಅಲ್ಲದೇ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದು 45W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಪಡೆದಿದೆ.

ಹಾನರ್ 90 5G
ಹಾನರ್ 90 5G ಮೊಬೈಲ್ ಹಿಂಭಾಗದಲ್ಲಿ ತ್ರಿವಳಿ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಇನ್ನು ಈ ಮೊಬೈಲ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದರ ಜೊತೆಗೆ ಈ ಫೋನ್ 1,200 x 2,664 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ.
ಅಲ್ಲದೇ ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 1 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಈ ಫೋನ್ ಆಂಡ್ರಾಯ್ಡ್ 13 ಆಧಾರಿತ ಮ್ಯಾಜಿಕ್ ಒಎಸ್ ಸಪೋರ್ಟ್ ಇದೆ. ಇದರೊಂದಿಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 66W ವೇಗದ ಚಾರ್ಜಿಂಗ್ ಅನ್ನು ಒದಗಿಸಲಾಗಿದೆ.
ರೆಡ್ಮಿ ನೋಟ್ 13 ಪ್ರೊ 5G
ರೆಡ್ಮಿ ನೋಟ್ 13 ಪ್ರೊ 5G ಮೊಬೈಲ್ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 200 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ಇನ್ನು ಇದು 6.67 ಇಂಚಿನ OLED ಡಿಸ್‌ಪ್ಲೇಯನ್ನು ಪಡೆದಿದ್ದು, ಈ ಡಿಸ್‌ಪ್ಲೇಯು 1220 x 2712 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ.
ಹಾಗೆಯೇ ಈ ಫೋನ್ ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 7s ಜೆನ್ 2 ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದ್ದು, ಇದಕ್ಕೆ ಅನುಗುಣವಾಗಿ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಪಡೆದುಕೊಂಡಿದೆ. ಅಲ್ಲದೇ ಈ ಫೋನ್ 5100 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದು 67W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಪಡೆದಿದೆ.


Click it and Unblock the Notifications








