Home
ಮೊಬೈಲ್

ಬಜೆಟ್‌ ಬೆಲೆಯಲ್ಲಿ ಬೆಸ್ಟ್‌ ಕ್ಯಾಮೆರಾ ಫೋನ್‌ ಬೇಕೆ?..ಹಾಗಿದ್ರೆ, ಈ ಮೊಬೈಲ್‌ ನೋಡಿರಿ!

ಪ್ರಸ್ತುತ ಸ್ಮಾರ್ಟ್‌ಫೋನ್‌ಗಳಲ್ಲಿ ಕ್ಯಾಮೆರಾ ಸೆನ್ಸಾರ್‌ ಬಹುಮುಖ್ಯವಾಗಿದ್ದು, ಅನೇಕರು ಅಧಿಕ ಸೆನ್ಸಾರ್‌ನ ಕ್ಯಾಮೆರಾ ಸ್ಮಾರ್ಟ್‌ಫೋನ್‌ ಖರೀದಿಸಲು ಮುಂದಾಗುತ್ತಾರೆ. ಈ ನಿಟ್ಟಿನಲ್ಲಿ ಮೊಬೈಲ್‌ ಸಂಸ್ಥೆಗಳು ಕ್ಯಾಮೆರಾ ಆಯ್ಕೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು, ಹೀಗಾಗಿ ಅನೇಕ ಹೊಸ ಫೋನ್‌ಗಳ ಪ್ರಾಥಮಿಕ ಕ್ಯಾಮೆರಾಗಳು 50 ಮೆಗಾಪಿಕ್ಸಲ್‌ ಸೆನ್ಸಾರ್ ಸೌಲಭ್ಯ ಪಡೆದಿವೆ.

ಇಂದಿನ ಬಹುತೇಕ ಮೊಬೈಲ್‌ಗಳು ಡ್ಯುಯಲ್‌ ಕ್ಯಾಮೆರಾ ಆಯ್ಕೆ ಪಡೆದಿದ್ದು, ಅವುಗಳಲ್ಲಿ ಮೊದಲ ಕ್ಯಾಮೆರಾ 50 ಮೆಗಾಪಿಕ್ಸಲ್‌ ಸೆನ್ಸಾರ್‌ ಸೌಲಭ್ಯ ಹೊಂದಿರುತ್ತದೆ. ಕೆಲವು ಅಗ್ಗದ ಮೊಬೈಲ್‌ಗಳು ಕೂಡಾ 50ಎಂಪಿ ಕ್ಯಾಮೆರಾ ಸೆನ್ಸಾರ್‌ ಹೊಂದಿವೆ. ಸದ್ಯ ನೀವೇನಾದರೂ ಬಜೆಟ್‌ ದರದಲ್ಲಿ ಅತ್ಯುತ್ತಮ ಕ್ಯಾಮೆರಾ ಮೊಬೈಲ್‌ ಖರೀದಿಸಲು ಪ್ಲ್ಯಾನ್ ಮಾಡಿದ್ದರೆ, ಈ ಲೇಖನ ನಿಮಗೆ ಉಪಯುಕ್ತ ಎನಿಸಲಿದೆ. ಮುಂದೆ ಓದಿರಿ.

ಬಜೆಟ್‌ ಬೆಲೆಯಲ್ಲಿ ಬೆಸ್ಟ್‌ ಕ್ಯಾಮೆರಾ ಫೋನ್‌ ಬೇಕೆ?.ಹಾಗಿದ್ರೆ, ಈ ಮೊಬೈಲ್‌ ನೋಡಿ

ರಿಯಲ್‌ಮಿ 12X 5G ಸ್ಮಾರ್ಟ್‌ಫೋನ್‌

ರಿಯಲ್‌ಮಿ ಸಂಸ್ಥೆಯ ಈ ನೂತನ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇನ್ನು ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಆಗಿದೆ. ಹಾಗೆಯೇ 6.72 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ರಚನೆ ಅನ್ನು ಪಡೆದಿದ್ದು, ಹಾಗೆಯೇ 1080 x 2400 ಪಿಕ್ಸಲ್‌ ರೆಸಲ್ಯೂಶನ್‌ ಸೌಲಭ್ಯ ಒಳಗೊಂಡಿದೆ.

ಇದರ ಜೊತೆಗೆ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್‌ ಸಾಮರ್ಥ್ಯವನ್ನು ಇದು ಒಳಗೊಂಡಿದ್ದು, ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಇದೆ. ಅಲ್ಲದೇ 5000 mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ 45W SuperVOOC ಚಾರ್ಜಿಂಗ್‌ ಸಪೋರ್ಟ್‌ ಪಡೆದಿದೆ.

ಮೊಟೊರೊಲಾ ಎಡ್ಜ್ 40 ನಿಯೋ ಫೋನ್‌

ಮೊಟೊರೊಲಾ ಎಡ್ಜ್ 40 ನಿಯೋ ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಆಗಿದೆ. ಅಲ್ಲದೇ ಇದು 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಪೋಲೆಡ್‌ ಡಿಸ್‌ಪ್ಲೇ ಪಡೆದಿದ್ದು, ಡಿಸ್‌ಪ್ಲೇಯು 2400 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ.

ಹಾಗೆಯೇ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7030 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 14 ಓಎಸ್‌ ಸಫೋರ್ಟ್‌ ಪಡೆದಿದೆ. ಇದರೊಂದಿಗೆ ಇದು 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, ಇದಕ್ಕೆ ಪೂರಕವಾಗಿ 68W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಕೂಡಾ ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಫೋನ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಮೊಬೈಲ್‌ ಮೂರು ರಿಯರ್‌ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ನಲ್ಲಿ ಇದೆ. ಅಲ್ಲದೇ ಇದು 6.5 ಇಂಚಿನ S-AMOLED ಇನ್ಫಿನಿಟಿ-U ನಾಚ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1080 x 2340 ಪಿಕ್ಸೆಲ್‌ ಸ್ಕ್ರಿನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ.

ಅದೇ ರೀತಿ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ನಿರ್ವಹಿಸಲಿದ್ದು, ಹಾಗೆಯೇ ಈ ಫೋನ್‌ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಕೂಡಾ ಪಡೆದಿದೆ. ಇದರೊಂದಿಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 25 W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.

Best Mobiles in India

English summary
Best 50MP camera phones in India 2024. Check phone list here with all details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+