50ಎಂಪಿ ಸೆಲ್ಫಿ ಕ್ಯಾಮೆರಾ ಫೋನ್ ಖರೀದಿಸಬೇಕೆ?..ಹಾಗಿದ್ರೆ, ಇಲ್ಲಿ ಗಮನಿಸಿ!
ಪ್ರಸ್ತುತ ಮೊಬೈಲ್ ಮಾರುಕಟ್ಟೆಗೆ ಲಾಂಚ್ ಆಗುವ ಅನೇಕ ಫೋನ್‌ಗಳು ಆಕರ್ಷಕ ಕ್ಯಾಮೆರಾ ಫೀಚರ್ ಒಳಗೊಂಡಿರುತ್ತವೆ. ಇನ್ನು ಮೊಬೈಲ್ ಕಂಪನಿಗಳು ರಿಯರ್ ಕ್ಯಾಮೆರಾ ಜೊತೆಗೆ ಸೆಲ್ಫಿ ಕ್ಯಾಮೆರಾಗೂ ಹೆಚ್ಚಿನ ಆದ್ಯತೆ ನೀಡುತ್ತಿವೆ. ಈ ನಿಟ್ಟಿನಲ್ಲಿ ಇಂದಿನ ಬಹುತೇಕ ಫೋನ್‌ಗಳು ಅತ್ಯುತ್ತಮ ಸೆಲ್ಫಿ ಕ್ಯಾಮೆರಾ ಫೀಚರ್ ಪಡೆದಿರುತ್ತವೆ.
ಹೌದು, ಸೆಲ್ಫಿ ಕ್ಯಾಮೆರಾಗಳಿಗೆ ಡಿಮ್ಯಾಂಡ್ ಇದ್ದೇ ಇದೆ. ಕೆಲವರು ಗ್ರಾಹಕರು ಬಜೆಟ್ ದರದಲ್ಲಿನ ಸೆಲ್ಫಿ ಕ್ಯಾಮೆರಾ ಫೋನ್ ಆಯ್ಕೆ ಮಾಡಿಕೊಂಡರೆ, ಇನ್ನಷ್ಟು ಖರೀದಿದಾರರು ಮೀಡ್‌ರೇಂಜ್ ಬೆಲೆಯಲ್ಲಿ ಸಿಗುವ ಸೆಲ್ಫಿ ಕ್ಯಾಮೆರಾ ಫೋನ್‌ಗಳತ್ತ ಮುಖ ಮಾಡುತ್ತಾರೆ. ಇನ್ನು ಬಜೆಟ್ ವಿಭಾಗದಲ್ಲಿ 50 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾ ಫೋನ್‌ಗಳು ಹೆಚ್ಚು ಗಮನ ಸೆಳೆದಿವೆ. ಹಾಗಾದರೇ ಬಜೆಟ್ ಬೆಲೆಯಲ್ಲಿ ಲಭ್ಯವಿರುವ ಕೆಲವು 50 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾ ಫೋನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ವಿವೋ V30e ಫೋನ್ ಫೀಚರ್ಸ್
ವಿವೋ V30e ಮೊಬೈಲ್ 6.78 ಇಂಚಿನ ಫುಲ್ ಹೆಚ್‌ಡಿ + ಕರ್ವ್ ಅಮೋಲೆಡ್ ಡಿಸ್‌ಪ್ಲೇ ಆಯ್ಕೆ ಹೊಂದಿದ್ದು, 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಇದು ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 6 ಜನ್ 1 ಪ್ರೊಸೆಸರ್ ಬಲದಲ್ಲಿ ಕಾರ್ಯ ನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಪಡೆದಿದೆ.
ಹಾಗೆಯೇ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ನಲ್ಲಿ ಇದೆ. ಮುಂಭಾಗದಲ್ಲಿ ಸೆಲ್ಫಿಗಾಗಿ 50 ಮೆಗಾ ಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಈ ಫೋನ್ 5500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ 44W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ.
ಮೊಟೊ ಎಡ್ಜ್ 50 ಪ್ರೊ ಫೋನ್ ಫೀಚರ್ಸ್
ಮೊಟೊರೊಲಾ ಸಂಸ್ಥೆಯ ಈ ಎಡ್ಜ್ 50 ಪ್ರೊ ಫೋನ್ 2712 × 1220 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಪೋರ್ಟ್ ಒಳಗೊಂಡ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದೆ. ಇದು ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 7 ಜೆನ್ 3 SoC ಪ್ರೊಸೆಸರ್ ಸಾಮರ್ಥ್ಯದ ಬಲ ಪಡೆದಿದ್ದು, ಜೊತೆಗೆ ಆಂಡ್ರಾಯ್ಡ್ 14 ಓಎಸ್ ಸೌಲಭ್ಯ ಸಹ ಹೊಂದಿದೆ.
ಹಾಗೆಯೇ ಇದು ಮೂರು ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಹಾಗೆಯೇ ಮುಂಭಾಗದಲ್ಲಿ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಹೊಂದಿದೆ. ಈ ಫೋನ್ 4500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಸಪೋರ್ಟ್ ಆಗಿ 125 W ಫಾಸ್ಟ್ ಟರ್ಬೋ ಚಾರ್ಜಿಂಗ್ ಆಯ್ಕೆ ಇದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M55 5G ಫೀಚರ್ಸ್
ಸಂಸ್ಥೆಯ ಈ ಗ್ಯಾಲಕ್ಸಿ M55 5G ಸ್ಮಾರ್ಟ್‌ಫೋನ್ 1080 × 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಹೆಚ್‌ಡಿ ಪ್ಲಸ್ ಅಮೊಲೆಡ್ Infinity-O ಡಿಸ್‌ಪ್ಲೇ ಅನ್ನು ಹೊಂದಿದೆ. ಜೊತೆಗೆ ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 7 ಜನ್ 1 ಪ್ರೊಸೆಸರ್ ಅನ್ನು ಒಳಗೊಂಡಿದ್ದು, 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಪ್ರಾಥಮಿಕ ರಿಯಲ್ ಕ್ಯಾಮೆರಾ ಹೊಂದಿದೆ.
ಇನ್ನು ಈ ಫೋನ್ ಸೆಲ್ಫಿ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಅಲ್ಲದೇ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 45W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಒಳಗೊಂಡಿದೆ.


Click it and Unblock the Notifications








