Home
ಮೊಬೈಲ್

ಕಡಿಮೆ ಬೆಲೆಯಲ್ಲಿ 5G ಫೋನ್‌ ಖರೀದಿಸಬೇಕೆ?..ಹಾಗಿದ್ರೆ, ಈ ಫೋನ್‌ಗಳು ನಿಮಗಾಗಿ!

ಪ್ರಸ್ತುತ ಹೊಸ ಸ್ಮಾರ್ಟ್‌ಫೋನ್‌ ಖರೀದಿಸುವಾಗ ಬಹುತೇಕ ಗ್ರಾಹಕರು 5G ಸೌಲಭ್ಯ ಇರುವ ಫೋನಿನತ್ತ ಮುಖ ಮಾಡುತ್ತಾರೆ. ಅದರಲ್ಲಿಯೂ ಬಜೆಟ್‌ ದರದಲ್ಲಿ ಲಭ್ಯ ಇರುವ ಅತ್ಯುತ್ತಮ ಫೀಚರ್ಸ್‌ ಒಳಗೊಂಡ 5G ಫೋನ್‌ಗಳಿಗೆ ಡಿಮ್ಯಾಂಡ್‌ ಜಾಸ್ತಿ. ಸದ್ಯ ಸುಮಾರು 12000ರೂ. ಗಳ ಒಳಗೆ ಅತ್ಯುತ್ತಮ 5G ಫೋನ್‌ಗಳು ಖರೀದಿಗೆ ಲಭ್ಯ ಇವೆ.

ಹೌದು, ಭಾರತೀಯ ಮೊಬೈಲ್‌ ಮಾರುಕಟ್ಟೆಯಲ್ಲಿ ಬಜೆಟ್‌ ದರದ 5G ಮೊಬೈಲ್‌ಗಳಿಗೆ ಬೇಡಿಕೆ ಅಧಿಕ. ಈ ನಿಟ್ಟಿನಲ್ಲಿ ಬಹುತೇಕ ಮೊಬೈಲ್‌ ಸಂಸ್ಥೆಗಳು ಬಜೆಟ್‌ ಬೆಲೆಯಲ್ಲಿ ತಮ್ಮ 5G ಫೋನ್‌ಗಳನ್ನು ಪರಿಚಯಿಸಿವೆ. ಅದಾಗ್ಯೂ, ಬೆಲೆ ಹಾಗೂ 5G ಜೊತೆಗೆ ಬೆಸ್ಟ್‌ ಕ್ಯಾಮೆರಾ, ಬಿಗ್‌ ಬ್ಯಾಟರಿ, ಉತ್ತಮ ಪ್ರೊಸೆಸರ್‌ನಂತಹ ಫೀಚರ್ಸ್‌ಗಳನ್ನು ಒಳಗೊಂಡ ಫೋನ್‌ಗಳು ಹೆಚ್ಚು ಆಕರ್ಷಕ ಎನಿಸುತ್ತವೆ. ಅಂತಹ ಕೆಲವು ಫೋನ್‌ಗಳ ಬಗ್ಗೆ ಇಲ್ಲಿದೆ ಮಾಹಿತಿ.

ಕಡಿಮೆ ಬೆಲೆಯಲ್ಲಿ 5G ಫೋನ್‌ ಖರೀದಿಸಬೇಕೆ?..ಹಾಗಿದ್ರೆ, ಈ ಫೋನ್‌ಗಳು ನಿಮಗಾಗಿ!

ರೆಡ್ಮಿ 13C 5G ಸ್ಮಾರ್ಟ್‌ಫೋನ್‌

ರೆಡ್ಮಿ 13C 5G ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, ಇನ್ನು ಡಿಸ್‌ಪ್ಲೇ 1080×2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 6080SoC ಪ್ರೊಸೆಸರ್‌ ಸೌಲಭ್ಯ ಒಳಗೊಂಡಿದೆ.

ಇದರ ಜೊತೆಗೆ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು. 5,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 5G ಸೌಲಭ್ಯ ಸಹ ಪಡೆದಿದ್ದು, ಈ ಫೋನ್‌ ಸ್ಟಾರ್ಟ್ರೈಲ್ ಸಿಲ್ವರ್, ಸ್ಟಾರ್ಲೈಟ್ ಬ್ಲೂ ಮತ್ತು ಸ್ಟಾರ್ಟ್ರೈಲ್ ಗ್ರೀನ್‌ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

ವಿವೋ T3x 5G ಸ್ಮಾರ್ಟ್‌ಫೋನ್‌

ವಿವೋ ಕಂಪನಿಯ ಈ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದು 2400 × 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 7200 4nm ಪ್ರೊಸೆಸರ್‌ ಬಲ ಪಡೆದಿದ್ದು. ಇತ್ತೀಚಿನ ಆಂಡ್ರಾಯ್ಡ್‌ 14 ಓಎಸ್‌ ಬೆಂಬಲ ಕೂಡಾ ಇದ್ದು, ಇದು 5G ಸೌಲಭ್ಯ ಸಹ ಪಡೆದಿದೆ.

ವಿವೋದ ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆ ಹೊಂದಿದ್ದು, 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಮುಖ್ಯ ಕ್ಯಾಮೆರಾ ಪಡೆದಿದ್ದು, 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಅಲ್ಲದೇ ಈ ಮೊಬೈಲ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದಕ್ಕೆ ಅನುಗುಣವಾಗಿ 44W ಫಾಸ್ಟ್ ಚಾರ್ಜಿಂಗ್ ಬೆಂಬಲ ಕುಡಾ ಇದೆ.

ರಿಯಲ್‌ಮಿ ನಾರ್ಜೊ 60x 5G ಫೋನ್‌

ರಿಯಲ್‌ಮಿ ನಾರ್ಜೊ 60x 5G ಫೋನ್‌ 6.74 ಇಂಚಿನ IPS LCD ಡಿಸ್‌ಪ್ಲೇ ಸೌಲಭ್ಯವನ್ನು ಹೊಂದಿದ್ದು, ಇದರ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಅನ್ನು ಪಡೆದುಕೊಂಡಿದೆ. ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 6100 ಪ್ಲಸ್ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ನಿರ್ವಹಿಸಲಿದ್ದು, ಇದರ ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಅನ್ನು ಪಡೆದುಕೊಂಡಿದ್ದು, ಇದು 33W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್ ಸಹ ಪಡೆದುಕೊಂಡಿದೆ.

ಪೊಕೊ M6 ಪ್ರೊ 5G ಫೋನ್‌

ಪೊಕೊ M6 ಪ್ರೊ 5G ಮೊಬೈಲ್‌ 6.79 ಇಂಚಿನ ಫುಲ್‌ ಹೆಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದು 2460 x 1080 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್‌ ಸೌಲಭ್ಯ ಪಡೆದಿದೆ. ಹಾಗೆಯೇ ಸ್ನಾಪ್‌ಡ್ರಾಗನ್ 4 ಜನ್ 2 ಪ್ರೊಸೆಸರ್‌ ಸೌಲಭ್ಯದಲ್ಲಿ ಕಾರ್ಯ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ಇದೆ. ಜೊತೆಗೆ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಹೊಂದಿದೆ.

Best Mobiles in India

English summary
Best 5G Mobiles Under Rs 12000 in India. check Phone List, specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+