15000ರೂ. ಒಳಗೆ ಲಭ್ಯ ಇರುವ ಹೊಚ್ಚ ಹೊಸ 5G ಮೊಬೈಲ್‌ಗಳು ಇವೇ ನೋಡಿ!
ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ವಾತಾವರಣ ಇದ್ದು, ಪ್ರಮುಖ ಮೊಬೈಲ್ ತಯಾರಿಕಾ ಸಂಸ್ಥೆಗಳು ಜನಪ್ರಿಯತೆ ಉಳಿಸಿಕೊಳ್ಳಲು ಹೊಸ ಫೋನ್ ಪರಿಚಯಿಸುವ ಸರ್ಕಸ್ ನಡೆಸುತ್ತಿವೆ. ಮುಖ್ಯವಾಗಿ ಬಜೆಟ್ ವಿಭಾಗದಲ್ಲಿ (15,000 ರೂ. ರೇಂಜ್‌ನಲ್ಲಿ) ಪೈಪೋಟಿ ಜೋರಾಗಿದ್ದು, ಕಡಿಮೆ ಬೆಲೆಗೆ ಅತ್ಯುತ್ತಮ ಫೀಚರ್ಸ್ ಮೂಲಕ ಹೆಚ್ಚಿನ ಗ್ರಾಹಕರನ್ನು ಸೆಳೆಯುವ ಪ್ರಯತ್ನ ಮುಂದುವರೆಸಿವೆ. ಈ ನಿಟ್ಟಿನಲ್ಲಿ ಸಂಸ್ಥೆಗಳು ಅತ್ಯುತ್ತಮ ಕ್ಯಾಮೆರಾ, ಪ್ರೊಸೆಸರ್, ಡಿಸೈನ್ ಹಾಗೂ ಸ್ಟೋರೇಜ್ ಜೊತೆಗೆ 5G ಒಳಗೊಂಡ ನೂತನ ಫೋನ್‌ಗಳನ್ನು ಲಾಂಚ್ ಮಾಡುತ್ತಿವೆ. ಸದ್ಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿರುವ ಬಜೆಟ್ ದರದ ಕೆಲವು ಹೊಸ ಫೋನ್‌ಗಳು ಗಮನ ಸೆಳೆದಿವೆ.
ಹೌದು, ಸುಮಾರು 15,000ರೂ. ಗಳ ಒಳಗೆ ಇತ್ತೀಚಿಗೆ ಕೆಲವು ಹೊಸ 5G ಫೋನ್‌ಗಳು ಮಾರುಕಟ್ಟೆಗೆ ಪ್ರವೇಶಿಸಿವೆ. ಹೊಸದಾಗಿ ಲಗ್ಗೆ ಇಟ್ಟಿರುವ ಫೋನ್‌ಗಳ ಪೈಕಿ ಒಪ್ಪೋ (OPPO) ಹಾಗೂ ಪೊಕೊ (POCO) ಬ್ರ್ಯಾಂಡ್‌ಗಳ ಫೋನ್‌ಗಳು ಸೇರಿವೆ. ಈ ಸಂಸ್ಥೆಗಳ ನೂತನ ಫೋನ್‌ಗಳು ಮೊದಲ ನೋಟದಲ್ಲೇ ಗ್ರಾಹಕರನ್ನು ಸೆಳೆಯುವಂತಹ ಆಯ್ಕೆಗಳನ್ನು ಹಾಗೂ ಡಿಸೈನ್ ಪಡೆದಿರುವುದು ಪ್ಲಸ್ ಪಾಯಿಂಟ್ ಎನಿಸುತ್ತವೆ. ಹಾಗಾದರೇ ನೂತನವಾಗಿ ಬಿಡುಗಡೆ ಆಗಿರುವ 5G ಫೋನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಒಪ್ಪೋ K12x 5G
ಒಪ್ಪೋ K12x 5G ಮೊಬೈಲ್ 6.67 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಫೋನ್ ಡಿಸ್‌ಪ್ಲೇ 1,612 x 720 ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. ಅಲ್ಲದೇ ಮೀಡಿಯಾ ಟೆಕ್ ಡೈಮೆನ್ಸಿಟಿ 6300 5G ಚಿಪ್‌ಸೆಟ್ ಪ್ರೊಸೆಸರ್ ಮೂಲಕ ಕೆಲಸ ನಿರ್ವಹಿಸಲಿದ್ದು, ಇದರೊಂದಿಗೆ 6 + 128GB ಹಾಗೂ 8 + 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದೆ.
ಹಾಗೆಯೇ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಇದರ ಮೊದಲ ಕ್ಯಾಮೆರಾವು 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದ್ದು, ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ರಚನೆ ಅನ್ನು ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್ 8 ಮೆಗಾ ಪಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ. 5,100mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಜೊತೆಗೆ 45W SuperVOOC ಚಾರ್ಜಿಂಗ್ ಬೆಂಬಲ ಪಡೆದಿದೆ.
ಪೊಕೊ M6 ಪ್ಲಸ್ 5G
ಪೊಕೊ M6 ಪ್ಲಸ್ 5G ಮೊಬೈಲ್ 6.74 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದೆ. ಅಲ್ಲದೇ ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಸಪೋರ್ಟ್ ಮಾಡಲಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಒಳಗೊಂಡಿದೆ. ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್ ಪವರ್ ಅನ್ನು ಪಡೆದಿದ್ದು, 4GB RAM + 128GB, 6GB RAM + 128GB ಹಾಗೂ 8GB RAM + 256GB ಸ್ಟೋರೇಜ್ ವೇರಿಯೆಂಟ್ ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ.
ಅಲ್ಲದೇ ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಇದರ ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 18W ಫಾಸ್ಟ್ ಚಾರ್ಜಿಂಗ್ ಅನ್ನು ಪಡೆದಿದೆ.
ಒಪ್ಪೋ A3x 5G
ಈ ಮೊಬೈಲ್ 6.67 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಅನ್ನು ಪಡೆದಿದ್ದು, ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಮೂಲಕ ಕೆಲಸ ನಿರ್ವಹಿಸಲಿದೆ. ಇದರೊಂದಿಗೆ 4GB+64GB ಹಾಗೂ 4GB+128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದೆ. ಹಾಗೆಯೇ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಪ್ರಾಥಮಿಕ ಕ್ಯಾಮೆರಾ ಸೌಲಭ್ಯ ಪಡೆದಿದೆ. ಇದಲ್ಲದೇ ಈ ಫೋನ್ 5,100mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಜೊತೆಗೆ 45W SuperVOOC ಚಾರ್ಜಿಂಗ್ ಬೆಂಬಲ ಪಡೆದಿದೆ.


Click it and Unblock the Notifications








