ಕಡಿಮೆ ಬೆಲೆಯಲ್ಲಿ 8GB RAM ಫೋನ್ ಬೇಕೆ?..ಈ ಫೋನ್‌ಗಳ ಲಿಸ್ಟ್ ನಿಮಗಾಗಿ!
ಸದ್ಯ ಸ್ಮಾರ್ಟ್‌ಫೋನ್‌ಗಳು ಅಗತ್ಯ ಹಾಗೂ ಅವಶ್ಯ ಡಿವೈಸ್ ಆಗಿದ್ದು, ಇಂದಿನ ಬಹುತೇಕ ಆನ್‌ಲೈನ್ ಕೆಲಸಗಳು ಮೊಬೈಲ್ ಮೂಲಕವೇ ಆಗಿ ಬಿಡುತ್ತವೆ. ಹೀಗಾಗಿ ಬಹುತೇಕರು ಅಧಿಕ RAM ಸೌಲಭ್ಯ ಇರುವ ಫೋನ್ ಅನ್ನು ಖರೀದಿಸಲು ಇಷ್ಟಪಡುತ್ತಾರೆ. ಇತ್ತೀಚಿನ ಹೊಸ ಫೋನ್‌ಗಳು ಅಧಿಕ RAM ಸೌಲಭ್ಯದ ಆಯ್ಕೆಯೊಂದಿಗೆ ಮಾರುಕಟ್ಟೆ ಲಗ್ಗೆ ಇಡುತ್ತಿವೆ.
ಫೋನ್‌ಗಳಲ್ಲಿ ಹೆಚ್ಚಿನ RAM ಇದ್ದರೆ, ಮಲ್ಟಿ ಟಾಸ್ಕ್ ಕೆಲಸ ಮಾಡುವಾಗ ಮತ್ತು ಹೈ ಎಂಡ್ ಆಪ್ ಅಥವಾ ಗೇಮ್ ಬಳಕೆ ಮಾಡುವಾಗ ಯಾವುದೇ ಅಡೆ ತಡೆ ಎದುರಾಗುವುದಿಲ್ಲ. ಇತ್ತೀಚಿಗೆ ಫೋನ್‌ಗಳಲ್ಲಿ ವರ್ಚುವಲ್ RAM ಸೌಲಭ್ಯವೂ ಸಹ ಪೂರಕವಾಗಿ ಕೆಲಸ ಮಾಡುತ್ತಿದೆ. ಮುಖ್ಯವಾಗಿ 8GB RAM ಅಂತೂ ಸಾಮಾನ್ಯ ಆಯ್ಕೆ ಎನ್ನುವಂತೆ ಆಗಿದೆ.

ಅದಾಗ್ಯೂ, ಕೆಲವು ಬಕೆದಾರರು ಇನ್ನೂ ಅಧಿಕ RAM ಸೌಲಭ್ಯ (12GB RAM ಅಥವಾ 16GB RAM) ಇರುವ ಫೋನ್ ಖರೀದಿಗೆ ಮುಂದಾಗುತ್ತಾರೆ. ಹಾಗಾದರೇ ಬಜೆಟ್ ಬೆಲೆಯಲ್ಲಿ ಖರೀದಿಸಬಹುದಾದ 8GB RAM ಸೌಲಭ್ಯದ ಕೆಲವು ಅತ್ಯುತ್ತಮ ಫೋನ್‌ಗಳ ಬಗ್ಗೆ ಇಲ್ಲಿದೆ ಮಾಹಿತಿ. ಮುಂದೆ ಓದಿರಿ.
ಐಕ್ಯೂ Z9 5G ಸ್ಮಾರ್ಟ್‌ಫೋನ್
ಈ ಮೊಬೈಲ್ 6.67 ಇಂಚಿನ ಫುಲ್‌ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಹೊಂದಿದ್ದು, 120Hz ರಿಫ್ರೆಶ್ ರೇಟ್ ಪಡೆದಿದೆ. ಅಲ್ಲದೇ ಇದು 1,800 ನಿಟ್ಸ್ ಬ್ರೈಟ್‌ನೆಸ್ ಆಯ್ಕೆ ಹಾಗೂ 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಜೊತೆಗೆ 300Hz ಟಚ್ ಸ್ಯಾಂಪ್ಲಿಂಗ್ ರೇಟ್ ಒಳಗೊಂಡಿದೆ.
ಇನ್ನು ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7200 ಪ್ರೊಸೆಸರ್‌ನಲ್ಲಿ ಕಾರ್ಯ ಮಾಡಲಿದ್ದು, ಇದರ ಜೊತೆಗೆ ARM ಮಾಲಿ-G610 ಜಿಪಿಯು ಪವರ್ ಹೊಂದಿದೆ. ಹಾಗೆಯೇ ಇದು 8GB RAM ಮತ್ತು 128GB/256GB UFS 2.2 ಆಂತರೀಕ ಸ್ಟೋರೇಜ್ ಆಯ್ಕೆ ಒಳಗೊಂಡಿದೆ. 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದಿದೆ.
ಪೊಕೊ X6 ನಿಯೋ ಫೋನ್
ಈ ನೂತನ ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಪಡೆದಿದ್ದು, ಈ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಅಲ್ಲದೇ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಚಿಪ್‌ಸೆಟ್ ಪ್ರೊಸೆಸರ್ ಪವರ್ ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಸಪೋರ್ಟ್ನಲ್ಲಿ ಕೆಲಸ ನಿರ್ವಹಿಸಲಿದೆ.
ಅಲ್ಲದೇ ಪೊಕೊ X6 ನಿಯೋ ಫೋನ್ 8GB + 128GB ಸ್ಟೋರೇಜ್ ವೇರಿಯಂಟ್ ಹಾಗೂ 12GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಇದರ ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದೆ. ಇನ್ನು ಈ ಫೋನ್ ಆಸ್ಟ್ರಲ್ ಬ್ಲ್ಯಾಕ್, ಹರೈಸನ್ ಬ್ಲೂ ಮತ್ತು ಆರೆಂಜ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ. ಇದೇ ಮಾರ್ಚ್ 18 ರಂದು ಸೇಲ್ ಶುರು.

ರಿಯಲ್‌ಮಿ 12 ಸ್ಮಾರ್ಟ್‌ಫೋನ್
ರಿಯಲ್‌ಮಿಯ ಈ ಫೋನ್ 6.72 ಇಂಚಿನ FHD+ ಡಿಸ್‌ಪ್ಲೇ ಹೊಂದಿದ್ದು, 120Hz ರಿಫ್ರೆಶ್ ರೇಟ್ ಪಡೆದಿದೆ. ಅಲ್ಲದೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್ ನಲ್ಲಿ ಕೆಲಸ ನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಪಡೆದಿದೆ. ಹಾಗೆಯೇ ಇದು 6GB RAM/128GB ಸ್ಟೋರೇಜ್ ಹಾಗೂ 8GB RAM/128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದ್ದು, 5000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದೆ.


Click it and Unblock the Notifications








