ಈ ಬಜೆಟ್ ಬೆಲೆಯ ಫೋನ್‌ಗಳಲ್ಲಿ 5G ಜೊತೆಗೆ 6,000mAh ಬ್ಯಾಟರಿ ಲಭ್ಯ!
ಸ್ಮಾರ್ಟ್‌ಫೋನ್‌ಗಳಲ್ಲಿ ಬ್ಯಾಟರಿ ಫೀಚರ್ ಫೋನಿನ ಜೀವಾಳವೇ ಸರಿ. ಏಕೆಂದರೆ ದೀರ್ಘಾವಧಿಯ ವರೆಗೂ ಎಲ್ಲ ಕೆಲಸ ನಡೆಯಲು ಅತ್ಯುತ್ತಮ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಅಗತ್ಯ. ಈ ನಿಟ್ಟಿನಲ್ಲಿ ಇತ್ತೀಚಿಗೆ ಬಿಡುಗಡೆ ಆಗುತ್ತಿರುವ ಹೊಸ ಫೋನ್‌ಗಳಲ್ಲಿ ಅಧಿಕ ಬ್ಯಾಟರಿ ಸೌಲಭ್ಯ ಕಾಣಬಹುದಾಗಿದೆ. ಸದ್ಯದ ಫೋನ್‌ಗಳಲ್ಲಿ ಕನಿಷ್ಠ ಅಂದರೂ 5000mAh ಬ್ಯಾಟರಿ ಸಾಮಾನ್ಯ ಎನ್ನುವಂತಾಗಿದೆ. ಅದಾಗ್ಯೂ, ಕೆಲವು ಬ್ರ್ಯಾಂಡ್‌ಗಳ ಫೋನ್‌ಗಳಲ್ಲಿ 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿವೆ. ಇಂತಹ ಫೋನ್‌ಗಳು ಅಧಿಕ ಬ್ಯಾಟರಿ ಬ್ಯಾಕ್‌ಅಪ್ ಬಯಸುವ ಗ್ರಾಹಕರ ಗಮನ ಸೆಳೆಯುತ್ತವೆ.
ಹೌದು, ಇಂದಿನ ಕೆಲವು ಮೊಬೈಲ್‌ಗಳಲ್ಲಿ ಅಧಿಕ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಲಭ್ಯ ಇದೆ. ಪ್ರಸ್ತುತ 5,000mAh ಬ್ಯಾಟರಿ ಸೌಲಭ್ಯದ ಫೋನ್‌ಗಳಿಗೂ ಡಿಮ್ಯಾಂಡ್ ಇದೆ. ಹಾಗೆಯೇ 6,000 mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಹೊಂದಿರುವ ಫೋನ್‌ಗಳು ಬೇಡಿಕೆಯಲ್ಲಿ ಕಾಣಿಸಿಕೊಂಡಿವೆ. ಹಾಗಾದರೇ 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದ ಕೆಲವು ಬೆಸ್ಟ್ ಫೋನ್‌ಗಳು ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿವೋ T3x 5G ಮೊಬೈಲ್
ವಿವೋ T3x 5G ಮೊಬೈಲ್ 6000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪ್ರಯೋಜನ ಪಡೆದಿದ್ದು, 44W ಫ್ಲ್ಯಾಶ್ ಚಾರ್ಜ್ ಅನ್ನು ಸಪೋರ್ಟ್ ಇದೆ. ಇದರೊಂದಿಗೆ ಈ ಫೋನ್ 6.72 ಇಂಚಿನ ಡಿಸ್‌ಪ್ಲೇ ಜೊತೆಗೆ 120 Hz ರಿಫ್ರೆಶ್ ರೇಟ್ ಆಯ್ಕೆ ಪಡೆದಿದೆ. ಇದು ಫುಲ್ ಹೆಚ್‌ಡಿ + 2408 x 1080 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದ ಪಡೆದಿದೆ.
ಹಾಗೆಯೇ ಇದು ಸ್ನಾಪ್‌ಡ್ರಾಗನ್ 6 ಜನ್ 1 ಚಿಪ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದ್ದು, ಇದರೊಂದಿಗೆ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಕೂಡಾ ಪಡೆದುಕೊಂಡಿದೆ. ಇದರ ಜೊತೆಗೆ ಡ್ಯುಯಲ್ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸರ್ ಸೌಲಭ್ಯ ಪಡೆದುಕೊಂಡಿದೆ. ಫ್ಲಿಪ್‌ಕಾರ್ಟ್‌ನಲ್ಲಿ 14,999ರೂ. ಗಳಿಗೆ ಲಭ್ಯ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಮೊಬೈಲ್
ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಮೊಬೈಲ್ 6,000mAh ಸಾಮರ್ಥ್ಯದ ಬ್ಯಾಟರಿ (Battery) ಬ್ಯಾಕ್‌ಅಪ್ ಆಯ್ಕೆ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 25W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಹೊಂದಿದೆ.ಫೋನ್ 6.5 ಇಂಚಿನ ಫುಲ್ ಹೆಚ್‌ಡಿ ಸೂಪರ್ AMOLED ಮಾದರಿಯ ಡಿಸ್‌ಪ್ಲೇ ಪಡೆದಿದೆ. ಇದರ ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿ.
ಇನ್ನು ಇದು ಸ್ಯಾಮ್‌ಸಂಗ್ ಎಕ್ಸಿನೋಸ್ 1280 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಹೊಂದಿದ್ದು, ಇದರಲ್ಲಿ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಜೊತೆಗೆ ಅಗತ್ಯ ಫೋಟೋ ಎಡಿಟಿಂಗ್ ಆಯ್ಕೆಗಳನ್ನು ಪಡೆದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಮೊಬೈಲ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಮೊಬೈಲ್ 6000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಇದು 25W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ. 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದೆ. ಈ ಡಿಸ್‌ಪ್ಲೇ 2408 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ.
ಹಾಗೆಯೇ ಇದು ಎಕ್ಸಿನೋಸ್ 1330 ಆಕ್ಟಾ ಕೋರ್ SoC ಪ್ರೊಸೆಸರ್ ಸ್ಪೀಡ್ ಅನ್ನು ಪಡೆದಿದ್ದು, ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕೆಲಸ ಮಾಡಲಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ.


Click it and Unblock the Notifications








