ರೆಡ್ಮಿ ನೋಟ್ 14 ಪ್ರೊ 5G ಫೋನಿಗೆ ಟಕ್ಕರ್ ನೀಡುವ ಮೊಬೈಲ್‌ಗಳ ಲಿಸ್ಟ್ ಇಲ್ಲಿದೆ!
ಪ್ರಮುಖ ಮೊಬೈಲ್ ಬ್ರ್ಯಾಂಡ್‌ಗಳಲ್ಲಿ ಒಂದೆನಿಸಿರುವ ಶಿಯೋಮಿ (Xiaomi) ಸಂಸ್ಥೆಯು ಭಾರತದಲ್ಲಿ ಹೊಸದಾಗಿ ರೆಡ್ಮಿ ನೋಟ್ 14 ಪ್ರೊ 5G (Redmi Note 14 Pro 5G) ಫೋನ್ ಅನ್ನು ಬಿಡುಗಡೆ ಮಾಡಿದ್ದು, ಇದು ಮೊಬೈಲ್ ಮಾರುಕಟ್ಟೆಯ ಗಮನ ಸೆಳೆದಿದೆ. ಕಂಪನಿಯ ಹೊಸ ರೆಡ್ಮಿ ನೋಟ್ 14 ಪ್ರೊ 5G ಫೋನ್ ಬಜೆಟ್ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಕೆಲವು ಆಕರ್ಷಕ ಫೀಚರ್ಸ್‌ಗಳ ಮೂಲಕ ಮೊಬೈಲ್ ಪ್ರಿಯರನ್ನು ಸೆಳೆದಿದೆ. ಆದರೆ ರೆಡ್ಮಿ ನೋಟ್ 14 ಪ್ರೊ 5G ಫೋನಿಗೆ ಫೈಟ್ ನೀಡುವ ಪರ್ಯಾಯ ಫೋನ್‌ಗಳು ಮಾರುಕಟ್ಟೆಯಲ್ಲಿ ಲಭ್ಯ ಇವೆ.
ಹೌದು, ಮೊಬೈಲ್ ಮಾರುಕಟ್ಟೆಯಲ್ಲಿ ಮೀಡ್‌ರೇಂಜ್ ಪ್ರೈಸ್‌ಟ್ಯಾಗ್ ಫೋನ್‌ಗಳಿಗೆ ಹೆಚ್ಚಿನ ಡಿಮ್ಯಾಂಡ್ ಇದೆ. ಈ ನಿಟ್ಟಿನಲ್ಲಿ ಕಂಪನಿಗಳು ಕೂಡಾ ಈ ವಿಭಾಗದಲ್ಲಿ ಅತ್ಯುತ್ತಮ ಮೊಬೈಲ್‌ಗಳನ್ನು ಪರಿಚಯಿಸುತ್ತ ಸಾಗಿವೆ. ಈ ಸಾಲಿಗೆ ರೆಡ್ಮಿ ನೋಟ್ 14 ಪ್ರೊ 5G ಕೂಡಾ ಸೇರ್ಪಡೆ ಆಗಿದೆ. ಅದಾಗ್ಯೂ ಮಾರುಕಟ್ಟೆಯಲ್ಲಿ ಈ ಫೋನಿಗೆ ನೇರ ಪೈಪೋಟಿ ನೀಡುವ ಇತರೆ ಪರ್ಯಾಯ ಮೊಬೈಲ್‌ಗಳ ಆಯ್ಕೆ ಸಹ ಗ್ರಾಹಕರಿಗೆ ಲಭ್ಯ ಇವೆ. ಹಾಗಾದರೇ ರೆಡ್ಮಿ ನೋಟ್ 14 ಪ್ರೊ 5G ಫೋನ್ ಪರ್ಯಾಯ ಮೊಬೈಲ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿವೋ T3 ಪ್ರೊ 5G ಫೋನ್
ವಿವೋ T3 ಪ್ರೊ 5G ಮೊಬೈಲ್ 6.67 ಇಂಚಿನ 3D ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದೆ. ಅಲ್ಲದೇ ಇದು ಸ್ನಾಪ್‌ಡ್ರಾಗನ್ 7 ಜೆನ್ 3 SoC ಪ್ರೊಸೆಸರ್ ಬಲದಲ್ಲಿ ಕಾರ್ಯ ನಿರ್ವಹಿಸಲಿದ್ದು. ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಬೆಂಬಲ ಕೂಡಾ ಪಡೆದಿದೆ.
ಹಾಗೆಯೇ ಇದು ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇನ್ನು ಮೊದಲ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನು ಇದರ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಜೊತೆಗೆ 5500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದಕ್ಕೆ ಅನುಗುಣವಾಗಿ 80W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಇದೆ.
ಮೊಟೊರೊಲಾ ಎಡ್ಜ್ 50 ಫ್ಯೂಜನ್
ಮೊಟೊರೊಲಾ ಎಡ್ಜ್ 50 ಫ್ಯೂಜನ್ ಫೋನ್ 6.7 ಇಂಚಿನ 3D ಕರ್ವ್ಡ್ pOLED ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದರ ಡಿಸ್‌ಪ್ಲೇಯು 2400 × 1080p ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಹೊಂದಿದೆ. ಅಲ್ಲದೇ ಇದು ಕ್ವಾಲ್ಕಮ್ ಸ್ನಾಪ್ಡ್ರಾಗನ್ 7s ಜೆನ್ 3 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಇದೆ.
ಮೊಟೊರೊಲಾ ಎಡ್ಜ್ 50 ಫ್ಯೂಜನ್ ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಈ ಫೋನಿನ ಸೆಲ್ಫಿ ಕ್ಯಾಮೆರಾ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಪಡೆದಿದೆ. ಇದರೊಂದಿಗೆ 5,000 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಇದರ ಜೊತೆಗೆ 68W ಟರ್ಬೋ ಪವರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಹೊಂದಿದೆ.
ನಥಿಂಗ್ ಫೋನ್ 2a ಫೋನ್
ನಥಿಂಗ್ ಫೋನ್ 2a ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದ್ದು, ಇದು 1,080x2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7200 ಪ್ರೊ SoC ಪ್ರೊಸೆಸರ್ ಪವರ್ ಅನ್ನು ಒಳಗೊಂಡಿದ್ದು, ಹಾಗೆಯೇ ಡ್ಯುಯಲ್ ಕ್ಯಾಮೆರಾ ರಚನೆ ಪಡೆದಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದು 45W ಫಾಸ್ಟ್ ಚಾರ್ಜಿಂಗ್‌ಗೆ ಸಪೋರ್ಟ್ ನೀಡಲಿದೆ.


Click it and Unblock the Notifications








