ಟಾಪ್‌ 5 ದೀರ್ಘ ಬಾಳಿಕೆಯ ಬ್ಯಾಟರಿ ಸ್ಮಾರ್ಟ್‌ಫೋನ್‌ಗಳು; ಇತರೆ ಫೀಚರ್ಸ್‌ ಏನು?

ಟಾಪ್‌ 5 ದೀರ್ಘ ಬಾಳಿಕೆಯ ಬ್ಯಾಟರಿ ಸ್ಮಾರ್ಟ್‌ಫೋನ್‌ಗಳು; ಇತರೆ ಫೀಚರ್ಸ್‌ ಏನು?

|

ಮೊಬೈಲ್‌ ಖರೀದಿ ಮಾಡಬೇಕೆಂದರೆ ಸಾಮಾನ್ಯವಾಗಿ ಮೊದಲು ಪರಿಗಣಿಸುವುದು ಅದರ ಬ್ಯಾಟರಿ ಸಾಮರ್ಥ್ಯ ಹಾಗೂ ಕ್ಯಾಮೆರಾ ವಿಶೇಷತೆ. ಈಗಂತೂ ಮೊಬೈಲ್‌ ತಯಾರಿಕಾ ಸಂಸ್ಥೆಗಳು ಬ್ಯಾಟರಿಗೆ ಪ್ರಮುಖವಾದ ಪ್ರಾಶಸ್ತ್ಯ ಕೊಡುತ್ತಾ ಬರುತ್ತಿವೆ. ಜೊತೆಗೆ ಮೊಬೈಲ್‌ ಸಂಸ್ಥೆಗಳು ವೇಗದ ಚಾರ್ಜಿಂಗ್‌ ಆಯ್ಕೆಯನ್ನು ನೀಡಿ ಗ್ರಾಹಕರನ್ನು ಸೆಳೆಯಲು ಮುಂದಾಗಿವೆ.

ಬ್ಯಾಟರಿ

ಹೌದು, ಹೆಚ್ಚಿನ ಬ್ಯಾಟರಿ ಸಾಮರ್ಥ್ಯ ಇರುವ ಫೋನ್‌ಗಳಿಗೆ ಬೇಡಿಕೆ ಜಾಸ್ತಿ. ಅದರಲ್ಲೂ ಬಜೆಟ್‌ ದರದಲ್ಲಿ ಸಿಗುವ ಅಧಿಕ ಬ್ಯಾಟರಿ ಬ್ಯಾಕ್‌ಅಪ್‌ ಸ್ಮಾರ್ಟ್‌ಫೋನ್‌ಗಳಿಗೆ ಹೆಚ್ಚು ಡಿಮ್ಯಾಂಡ್‌ ಪಡೆದಿವೆ. ನೀವೇನಾದರೂ ಬಜೆಟ್‌ ಬೆಲೆಗೆ ಅದರಲ್ಲೂ ಅಧಿಕ ಬ್ಯಾಟರಿ ಸಾಮರ್ಥ್ಯ ಇರುವ ಸ್ಮಾರ್ಟ್‌ಫೋನ್‌ ಕೊಂಡುಕೊಳ್ಳಲು ಬಯಸಿದರೆ ಈ ಲೇಖನದಲ್ಲಿ ನೀಡಿರುವ ಸ್ಮಾರ್ಟ್‌ಫೋನ್‌ಗಳು ನಿಮಗೆ ಸಹಾಯಕವಾಗಬಲ್ಲವು. ಹಾಗಿದ್ರೆ ಬನ್ನಿ ವಿವರ ಪಡೆಯೋಣ.

ವಿವೋ T1 44W

ವಿವೋ T1 44W

ಈ ಫೋನ್‌ 6.58 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, 120Hz ನ ರಿಫ್ರೆಶ್ ದರವನ್ನು ನೀಡುತ್ತದೆ. ಹಾಗೆಯೇ 1080x2408 ಪಿಕ್ಸೆಲ್‌ಗಳ ರೆಸಲ್ಯೂಶನ್‌ ಸಾಮರ್ಥ್ಯ ಇದರಲ್ಲಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 ಪ್ರೊಸೆಸರ್ ಹಾಗೂ ಆಂಡ್ರಾಯ್ಡ್ 12 ಆಪರೇಟಿಂಗ್ ಸಿಸ್ಟಂನಲ್ಲಿ ಕಾರ್ಯನಿರ್ವಹಿಸುತ್ತದೆ. 4 GB RAM ಮತ್ತು 128 GB ಆಂತರಿಕ ಸ್ಟೋರೇಜ್‌ ಈ ಸ್ಮಾರ್ಟ್‌ಫೋನ್‌ನಲ್ಲಿದೆ ಟ್ರಿಪಲ್‌ ಕ್ಯಾಮರಾ ರಚನೆ ಹೊಂದಿರುವ ಇದು ಕ್ರಮವಾಗಿ 50MP + 2MP + 2MP ಒಳಗೊಂಡಿದೆ. ಜೊತೆಗೆ 16MP ಸೆಲ್ಫಿ ಕ್ಯಾಮೆರಾ ಪಡೆದುಕೊಂಡಿದೆ. ಇದರಲ್ಲಿ 5,000 mAh ಬ್ಯಾಟರಿ ಸಾಮರ್ಥ್ಯ ಇದ್ದು, ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A12

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A12

ಈ ಸ್ಮಾರ್ಟ್‌ಫೋನ್‌ 6.50 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, 720x1600 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯ ತನ್ನದಾಗಿಸಿಕೊಂಡಿದೆ. ಇದು ಮೀಡಿಯಾಟೆಕ್‌ ಹಿಲಿಯೋ P35 ಪ್ರೊಸೆಸರ್‌ನಿಂದ ಹಾಗೂ ಆಂಡ್ರಾಯ್ಡ್ 10 ಆಪರೇಟಿಂಗ್ ಸಿಸ್ಟಂನಲ್ಲಿ ಕಾರ್ಯನಿರ್ವಹಿಸಲಿದೆ. 4 GB RAM ಮತ್ತು 64 GB ಆಂತರಿಕ ಸಂಗ್ರಹಣೆ ಇದರಲ್ಲಿದೆ. ಕ್ವಾಡ್‌ ಕ್ಯಾಮೆರಾ ರಚನೆ ಇದರಲ್ಲಿದ್ದು, ಕ್ರಮವಾಗಿ 48MP + 5MP + 2MP + 2MP ಹಾಗೂ 8MP ಸೆಲ್ಫಿ ಕ್ಯಾಮೆರಾವನ್ನು ಇದರಲ್ಲಿದೆ. 5,000 mAh ಬ್ಯಾಟರಿ ಸಾಮರ್ಥ್ಯ ಹೊಂದಿರುವ ಈ ಸ್ಮಾರ್ಟ್‌ಫೋನ್‌ ವೇಗದ ಚಾರ್ಜಿಂಗ್‌ ಆಯ್ಕೆಯನ್ನು ಹೊಂದಿದೆ.

ರೆಡ್ಮಿ ನೋಟ್ 10

ರೆಡ್ಮಿ ನೋಟ್ 10

6.43 ಇಂಚಿನ ಡಿಸ್‌ಪ್ಲೇಯನ್ನು ಹೊಂದಿರುವ ಈ ಫೋನ್ 1080x2400 ಪಿಕ್ಸೆಲ್‌ಗಳ ರೆಸಲ್ಯೂಶನ್ ಜೊತೆಗೆ 90Hz ನ ರಿಫ್ರೆಶ್ ದರ ಹೊಂದಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 678 ಪ್ರೊಸೆಸರ್‌ ಹಾಗೂ ಆಂಡ್ರಾಯ್ಡ್ 11 ಆಪರೇಟಿಂಗ್ ಸಿಸ್ಟಂನಲ್ಲಿ ಕಾರ್ಯನಿರ್ವಹಿಸುತ್ತದೆ. ಇದರ ಸ್ಟೋರೇಜ್‌ ವಿಷಯಕ್ಕೆ ಬಂದರೆ 4/6 / 8 GB RAM ಮತ್ತು 64/128 /256 GB ಆಂತರಿಕ ಸ್ಟೋರೇಜ್‌ ಆಯ್ಕೆಯನ್ನು ಪಡೆದಿದೆ. ಕ್ವಾಡ್‌ ಕ್ಯಾಮೆರಾ ರಚನೆ ಇದರಲ್ಲಿದ್ದು, 48MP + 8MP + 2MP + 2MP ಹಿಂಭಾಗ ಮತ್ತು 13MP ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ 5,000 mAh ಬ್ಯಾಟರಿ ಸಾಮರ್ಥ್ಯ ಹೊಂದಿದೆ. ಹಾಗೆಯೇ ವೇಗದ ಚಾರ್ಜಿಂಗ್‌ ಆಯ್ಕೆ ಸಹ ಇದರಲ್ಲಿದೆ.

IQOO Z6 4G

IQOO Z6 4G

ಈ ಸ್ಮಾರ್ಟ್‌ಫೋನ್‌ 6.44 ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಜೊತೆಗೆ 1080x2400 ಪಿಕ್ಸೆಲ್‌ಗಳ ರೆಸಲ್ಯೂಶನ್ ಹೊಂದಿದೆ. ಇದರಲ್ಲಿ 60Hz ರಿಫ್ರೆಶ್ ದರ ಇದ್ದು, ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 ಪ್ರೊಸೆಸರ್‌ ಹಾಗೂ ಆಂಡ್ರಾಯ್ಡ್ 12 ಆಪರೇಟಿಂಗ್ ಸಿಸ್ಟಂನಲ್ಲಿ ಕಾರ್ಯನಿರ್ವಹಿಸುತ್ತದೆ. ಇದರಲ್ಲಿ 4/6/8 GB RAM ಮತ್ತು 128 GB ಆಂತರಿಕ ಸ್ಟೋರೇಜ್ ಆಯ್ಕೆ ಇದೆ. ಟ್ರಿಪಲ್ ಕ್ಯಾಮೆರಾ ರಚನೆ ಹೊಂದಿದ್ದು ಅವು ಕ್ರಮವಾಗಿ 50MP+2MP+2MP ಮತ್ತು 16MP ಸೆಲ್ಫಿ ಕ್ಯಾಮೆರಾ ಹೊಂದಿವೆ. ಈ ಸ್ಮಾರ್ಟ್‌ಫೋನ್‌ 5,000 mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ.

ರಿಯಲ್‌ಮಿ ನಾರ್ಜೋ 50A ಪ್ರೈಮ್

ರಿಯಲ್‌ಮಿ ನಾರ್ಜೋ 50A ಪ್ರೈಮ್

ರಿಯಲ್‌ಮಿ ನಾರ್ಜೋ 50A ಪ್ರೈಮ್ ಸ್ಮಾರ್ಟ್‌ಫೋನ್‌ 6.6 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದರಲ್ಲಿ 2408x1080 ಪಿಕ್ಸೆಲ್‌ಗಳ ರೆಸಲ್ಯೂಶನ್ ವಿಶೇಷತೆ ಇದೆ. ಆಂಡ್ರಾಯ್ಡ್‌ 11 ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕಾರ್ಯನಿರ್ವಹಿಸುವ ಈ ಸ್ಮಾರ್ಟ್‌ಫೋನ್‌ನಲ್ಲಿ 4 GB RAM ಮತ್ತು 64 GB,128 GB ಸ್ಟೋರೇಜ್‌ನ ಆಯ್ಕೆಯನ್ನು ಪಡೆದಿದೆ. ಟ್ರಿಪಲ್‌ ಕ್ಯಾಮೆರಾ ರಚನೆ ಇದರಲ್ಲಿದ್ದು, 50 MP ಪ್ರಮುಖ ಕ್ಯಾಮೆರಾ ಹಾಗೂ 8MP ಮುಂಭಾಗದ ಕ್ಯಾಮರಾ ಲಭ್ಯವಿದೆ. ಇದು 5,000 mAh ಬ್ಯಾಟರಿ ಸಾಮರ್ಥ್ಯ ಹೊಂದಿದ್ದು, 18W ವೇಗದ ಚಾರ್ಜಿಂಗ್ ಆಯ್ಕೆಯನ್ನು ಹೊಂದಿದೆ.

Best Mobiles in India

English summary
Battery capacity is very important in while smartphone selection. We have given the details of battery capacity mobiles in this article.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X