Home
ಮೊಬೈಲ್

ಬಜೆಟ್‌ ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿಸಬಹುದಾದ ಅತ್ಯುತ್ತಮ ಫೋನ್‌ಗಳ ಲಿಸ್ಟ್‌

ಇಂದಿನ ದಿನಗಳಲ್ಲಿ ವೇಗದ ಕಾರ್ಯವೈಖರಿಯ ಇರುವ ಸ್ಮಾರ್ಟ್‌ಫೋನ್‌ಗಳಿಗೆ ಹೆಚ್ಚಿನ ಡಿಮ್ಯಾಂಡ್‌ ಇದೆ. ಈ ನಿಟ್ಟಿನಲ್ಲಿ ಪ್ರಮುಖ ಮೊಬೈಲ್‌ ಬ್ರ್ಯಾಂಡ್‌ ಸೇರಿದಂತೆ ಇತರೆ ಸಂಸ್ಥೆಗಳು ಅಧಿಕ RAM ಹಾಗೂ ಪ್ರೊಸೆಸರ್‌ ಸೌಲಭ್ಯದ ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತ ಮುನ್ನಡೆದಿವೆ. ಹಾಗೆಯೇ ವೇಗದ ಪ್ರೊಸೆಸರ್‌ ಜೊತೆಗೆ ಅತ್ಯುತ್ತಮ ಕ್ಯಾಮೆರಾ, ಬಿಗ್ ಬ್ಯಾಟರಿ ಸೌಲಭ್ಯ ಇರಬೇಕು ಎಂದು ಗ್ರಾಹಕರು ಬಯಸುತ್ತಾರೆ. ಅದರಲ್ಲಿಯೂ ಬಜೆಟ್‌ ದರದಲ್ಲಿ ಲಭ್ಯ ಇರುವ ಅತ್ಯುತ್ತಮ ಫೀಚರ್ಸ್‌ಗಳ ಮೊಬೈಲ್‌ಗಳು ಗ್ರಾಹಕರ ಗಮನ ಸೆಳೆಯುತ್ತವೆ.

ಹೌದು, ದೇಶಿಯ ಮಾರುಕಟ್ಟೆಯಲ್ಲಿ ಬಜೆಟ್‌ ದರದ ಸ್ಮಾರ್ಟ್‌ಫೋನ್‌ಗಳಿಗೆ ಸದ್ಯ ಸಖತ್ ಬೇಡಿಕೆ ಇದೆ ಎನ್ನಬಹುದು. ಬಜೆಟ್‌ ವಿಭಾಗದಲ್ಲಿ 5G ಸೌಲಭ್ಯ ಒಳಗೊಂಡಂತೆ ಬೆಸ್ಟ್‌ ಕ್ಯಾಮೆರಾ, ಬಿಗ್ ಬ್ಯಾಟರಿ, ಅತ್ಯುತ್ತಮ ಪ್ರೊಸೆಸರ್‌ನಂತಹ ಆಯ್ಕೆಗಳು ಇದ್ದರೆ ಇನ್ನಷ್ಟು ಆಕರ್ಷಕ ಎನಿಸುತ್ತವೆ. ಹಾಗಾದರೇ ಪ್ರಸ್ತುತ ಬಜೆಟ್‌ ಬೆಲೆಯಲ್ಲಿ ಲಭ್ಯವಿರುವ ಅತ್ಯುತ್ತಮ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಬಜೆಟ್‌ ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿಸಬಹುದಾದ ಅತ್ಯುತ್ತಮ ಫೋನ್‌ಗಳ ಲಿಸ್ಟ್‌

ವಿವೋ T3 5G ಫೋನ್‌

ವಿವೋ T3 5G ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದು 2400 × 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 7200 4nm ಪ್ರೊಸೆಸರ್‌ ಬಲ ಪಡೆದಿದ್ದು. ಇತ್ತೀಚಿನ ಆಂಡ್ರಾಯ್ಡ್‌ 14 ಓಎಸ್‌ ಬೆಂಬಲ ಕೂಡಾ ಇದೆ.

ಈ ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆ ಹೊಂದಿದ್ದು, 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಮುಖ್ಯ ಕ್ಯಾಮೆರಾ ಪಡೆದಿದ್ದು, 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಅಲ್ಲದೇ ಈ ಮೊಬೈಲ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದಕ್ಕೆ ಅನುಗುಣವಾಗಿ 44W ಫಾಸ್ಟ್ ಚಾರ್ಜಿಂಗ್ ಬೆಂಬಲ ಕುಡಾ ಇದೆ. ಇದು 5G ಸೌಲಭ್ಯ ಸಹ ಪಡೆದಿದೆ.

ಮೊಟೊ G85 5G ಫೋನ್‌

ಈ ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ pOLED ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದು 2712 × 1220 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಪೋರ್ಟ್‌ ಪಡೆದಿದೆ. ಇದರ ಜೊತೆಗೆ 120Hz ರಿಫ್ರೆಶ್ ರೇಟ್‌ ಅನ್ನು ಪಡೆದಿದ್ದು, ಹಾಗೆಯೇ ಡಿಸ್‌ಪ್ಲೇ 1600 nits ಬ್ರೈಟ್‌ನೆಸ್‌ ಸಪೋರ್ಟ್‌ ಜೊತೆಗೆ 3D ಕರ್ವ್ಡ್‌ ಡಿಸ್‌ಪ್ಲೇ ರಚನೆ ಹೊಂದಿದ್ದು, ಗೊರಿಲ್ಲಾ ಗ್ಲಾಸ್‌ 5 ಅನ್ನು ಹೊಂದಿದೆ.

ಹಾಗೆಯೇ ಕ್ವಾಲ್ಕಮ್‌ ಸ್ನಾಪ್‌ಡ್ರಾಗನ್‌ 8 ಜೆನ್‌ 3 SoC ಪ್ರೊಸೆಸರ್‌ ಸಾಮರ್ಥ್ಯದದಲ್ಲಿ ಕೆಲಸ ನಿರ್ವಹಣೆ ಮಾಡಲಿದ್ದು, ಇದಕ್ಕೆ ಸಪೋರ್ಟ್‌ ಆಗಿ ಆಂಡ್ರಾಯ್ಡ್‌ 14 ಓಎಸ್‌ ಸೌಲಭ್ಯ ಸಹ ಇದೆ. ಜೊತೆಗೆ ಡ್ಯುಯಲ್‌ ಕ್ಯಾಮೆರಾ ರಚನೆ ಇದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯ ಪಡೆದಿದೆ. ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಪಡೆದಿದೆ.

ರೆಡ್ಮಿ 13C 5G ಫೋನ್‌

ರೆಡ್ಮಿ 13C 5G ಮೊಬೈಲ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇನ್ನು ಡಿಸ್‌ಪ್ಲೇ 1080×2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿದೆ. ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 6080SoC ಪ್ರೊಸೆಸರ್‌ ಸೌಲಭ್ಯ ಒಳಗೊಂಡಿದೆ. ಜೊತೆಗೆ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು. 5,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 5G ಸೌಲಭ್ಯ ಸಹ ಪಡೆದಿದೆ.

ಪೊಕೊ X6 ನಿಯೋ ಫೋನ್‌

ಈ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದ್ದು, ಈ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಪಡೆದಿದೆ. ಇದರೊಂದಿಗೆ ಮೀಡಿಯಾಟೆಕ್ ಡೈಮೆನ್ಸಿಟಿ 6100+ (6 nm) ಪ್ರೊಸೆಸರ್‌ ಇದ್ದು, ಪೂರಕವಾಗಿ ಆಂಡ್ರಾಯ್ಡ್ 14 ಓಎಸ್‌ ಸಪೋರ್ಟ್‌ ಒಳಗೊಂಡಿದೆ. ಹಾಗೆಯೇ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿ ಇದೆ. ಇನ್ನು ಈ ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದು 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ಆಯ್ಕೆ ಪಡೆದುಕೊಂಡಿದೆ.

Best Mobiles in India

English summary
Best Budget Mobiles of 2024 in India. Price, Specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+