ಅಗ್ಗದ ಬೆಲೆಗೆ ಅತ್ಯುತ್ತಮ ಸ್ಟೋರೇಜ್ ಸೌಲಭ್ಯದ ಫೋನ್‌ಗಳ ಲಿಸ್ಟ್ ಇಲ್ಲಿದೆ!
ಸ್ಮಾರ್ಟ್‌ಫೋನ್ ವಲಯದಲ್ಲಿ ಸಾಕಷ್ಟು ಅಪ್‌ಡೇಟ್ ಆಗುತಲಿದ್ದು, ಅಧಿಕ ಸ್ಟೋರೇಜ್, ಬಿಗ್ ಬ್ಯಾಟರಿ ಸೌಲಭ್ಯದ ಫೋನ್‌ಗಳು ಹೆಚ್ಚು ಮುನ್ನಲೆಯಲ್ಲಿ ಕಾಣಿಸಿಕೊಂಡಿವೆ. ಸದ್ಯ ಹೊಸ ಮೊಬೈಲ್ ಖರೀದಿಸಲು ಮುಂದಾಗುವ ಗ್ರಾಹಕರು ಹೆಚ್ಚಿನ ಸ್ಟೋರೇಜ್ ಸೌಲಭ್ಯ ಇರುವ ಫೋನಿನತ್ತ ಮುಖ ಮಾಡುತ್ತಾರೆ. ಇದರೊಂದಿಗೆ ಬಜೆಟ್ ಪ್ರೈಸ್‌ಟ್ಯಾಗ್ ಇರುವ ಫೋನ್‌ಗಳಿಗೆ ಡಿಮ್ಯಾಂಡ್ ಜಾಸ್ತಿ.
ಹೌದು, ಮಾರುಕಟ್ಟೆಯಲ್ಲಿ ಫೋನ್ ಖರೀದಿಸುವ ಗ್ರಾಹಕರು ಕ್ಯಾಮೆರಾ, ಪ್ರೊಸೆಸರ್, ಬ್ಯಾಟರಿ ಫೀಚರ್ಸ್ ಜೊತೆಗೆ ಆಂತರೀಕ ಅಧಿಕ ಸ್ಟೋರೇಜ್ ಆಯ್ಕೆ ಸಹ ಗಮನಿಸುತ್ತಾರೆ. ಈ ನಿಟ್ಟಿನಲ್ಲಿ ಪ್ರಮುಖ ಮೊಬೈಲ್ ಸಂಸ್ಥೆಗಳು ಕೂಡಾ ಬಜೆಟ್ ಬೆಲೆಯಲ್ಲಿ ಅಧಿಕ ಸ್ಟೋರೇಜ್ ವೇರಿಯಂಟ್ ಆಯ್ಕೆ ಫೋನ್‌ಗಳನ್ನು ಪರಿಚಯಿಸಿವೆ. ಅಂತಹ ಫೋನ್‌ಗಳಿಗೆ ಬೇಡಿಕೆ ಸಹ ಇದೆ. ಹಾಗಾದರೇ ಬಜೆಟ್ ದರದಲ್ಲಿ ಅಧಿಕ ಸ್ಟೋರೇಜ್ ಆಯ್ಕೆ ಒಳಗೊಂಡ ಕೆಲವು ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಪೊಕೊ C55 ಸ್ಮಾರ್ಟ್‌ಫೋನ್
ಪೊಕೊ ಸಂಸ್ಥೆಯ ಈ ಸ್ಮಾರ್ಟ್‌ಫೋನ್ 6.71 ಇಂಚಿನ HD+ ಡಿಸ್‌ಪ್ಲೇ ಹೊಂದಿದ್ದು, ಇದು 720 x 1650 ಪಿಕ್ಸೆಲ್ ರೆಸಲ್ಯೂಶನ್ ಪಡೆದಿದೆ. ಈ ಮೊಬೈಲ್ ಮೀಡಿಯಾ ಟೆಕ್ ಹೆಲಿಯೊ G85 ಪ್ರೊಸೆಸರ್ ಮೂಲಕ ಕೆಲಸ ಮಾಡಲಿದ್ದು, 64GB ಹಾಗೂ 128GB ಆಂತರೀಕ ಸ್ಟೋರೇಜ್ ಸಾಮರ್ಥ್ಯ ಒಳಗೊಂಡಿದೆ. ಅಲ್ಲದೇ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಹೊಂದಿದ್ದು, 50ಎಂಪಿ ಪ್ರಾಥಮಿಕ ಕ್ಯಾಮೆರಾ ಪಡೆದಿದೆ. ಅಲ್ಲದೇ 5,000 mAh ಸಾಮರ್ಥ್ಯದ ಬ್ಯಾಟರಿ ಪಡೆದಿದೆ.

ರಿಯಲ್‌ಮಿ ನಾರ್ಜೋ N53 ಸ್ಮಾರ್ಟ್‌ಫೋನ್
ಈ ಮೊಬೈಲ್ 6.74 ಇಂಚಿನ ಡಿಸ್‌ಪ್ಲೇ ಅನ್ನು ಪಡೆದಿದ್ದು, 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ ಯುನಿಸೊಕ್ T612 SoC ಪ್ರೊಸೆಸರ್ ಪವರ್ ಪಡೆದಿದ್ದು, 6GB + 128GB ಸೌಲಭ್ಯ ಒಳಗೊಂಡಿದೆ. ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ AI ಸೆನ್ಸಾರ್ ಅನ್ನು ಪಡೆದಿದೆ. ಇದರ ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಇದ್ದು, 33W ವೈರ್ಡ್ ಸೂಪರ್‌ವೂಕ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ರೆಡ್ಮಿ A1+ ಸ್ಮಾರ್ಟ್‌ಫೋನ್
ರೆಡ್ಮಿ ಕಂಪನಿಯ ಈ ಮೊಬೈಲ್ 1600 × 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52 ಇಂಚಿನ ಫುಲ್ ಹೆಚ್‌ಡಿ + ಮಾದಿರಯ ಡಿಸ್‌ಪ್ಲೇ ಅನ್ನು ಪಡೆದಿದೆ. ಇದು ಮೀಡಿಯಾ ಟೆಕ್ ಹಿಲಿಯೋ A22 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದ್ದು, 2GB RAM + 32 GB ಮತ್ತು 3GB + 32GB ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಇದು ಡ್ಯುಯಲ್ ರಿಯರ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಹಾಗೆಯೇ 5000 mAh ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯವನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಸಪೋರ್ಟ್ ಸಹ ಲಭ್ಯ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್
ಈ ಮೊಬೈಲ್ 6.5 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಮೀಡಿಯಾ ಟೆಕ್ ಹಿಲಿಯೋ P35 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ 4GB RAM + 64GB ಸ್ಟೋರೇಜ್ ಒಳಗೊಂಡಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ.


Click it and Unblock the Notifications








