Home
ಮೊಬೈಲ್

ದುಬಾರಿ ಬೆಲೆಯ ಮೊಬೈಲ್‌ ಖರೀದಿಸಬೇಕೆ?..ಹಾಗಿದ್ರೆ, ಈ ಫೋನ್‌ ನಿಮಗೆ ಇಷ್ಟವಾಗುತ್ತೆ!

ಜನಪ್ರಿಯ ಮೊಬೈಲ್‌ ಸಂಸ್ಥೆಗಳು ಭಿನ್ನ ರೇಂಜ್‌ನಲ್ಲಿ ಹೊಸ ಫೋನ್‌ಗಳು ಮಾರುಕಟ್ಟೆಗೆ ಪರಿಚಯಿಸುತ್ತಾ ಮುನ್ನಡೆದಿವೆ. ಅವುಗಳಲ್ಲಿ ಬಹುತೇಕ ಗ್ರಾಹಕರು ಬಜೆಟ್‌ ಪ್ರೈಸ್‌ ಟ್ಯಾಗ್‌ನಲ್ಲಿ ಲಭ್ಯ ಇರುವ ಫೋನ್‌ಗಳನ್ನು ಆಯ್ಕೆ ಮಾಡಿದರೆ, ಮತ್ತೆ ಕೆಲವರು ದುಬಾರಿ ರೇಂಜ್‌ನ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಲು ಮುಂದಾಗುತ್ತಾರೆ. ಅದಾಗ್ಯೂ, ದುಬಾರಿ ದರದ ಫೋನ್‌ಗಳ ಫೀಚರ್ಸ್‌ಗಳಿಗೆ ಗ್ರಾಹಕರು ಫಿದಾ ಆಗುತ್ತಾರೆ.

ಹೌದು, ಮಾರುಕಟ್ಟೆಯಲ್ಲಿ ದುಬಾರಿ ಬೆಲೆಯ ಫೋನ್‌ಗಳಿಗೂ ಡಿಮ್ಯಾಂಡ್‌ ಇದೆ. ಅನೇಕರು ಹೈ ಎಂಡ್ ಮಾದರಿಯ ಫೋನ್‌ಗಳಿಗೆ ಅಪ್‌ಗ್ರೇಡ್‌ ಆಗಲು ಬಯಸುತ್ತಾರೆ. ಆಪಲ್‌, ಸ್ಯಾಮ್‌ಸಂಗ್‌, ಒನ್‌ಪ್ಲಸ್‌ ಹಾಗೂ ವಿವೋ ಸಂಸ್ಥೆಗಳು ಹೈ ಎಂಡ್ ಮಾದರಿಯ ಫೋನ್‌ಗಳಲ್ಲಿ ಜನಪ್ರಿಯತೆ ಗಳಿಸಿವೆ. ಹಾಗಾದರೇ ಸದ್ಯ 50000ರೂ. ಗಿಂತ ಅಧಿಕ ದರದ ಕೆಲವು ಬೆಸ್ಟ್‌ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ದುಬಾರಿ ಬೆಲೆಯ ಮೊಬೈಲ್‌ ಖರೀದಿಸಬೇಕೆ?..ಹಾಗಿದ್ರೆ, ಈ ಫೋನ್‌ ನಿಮಗೆ ಇಷ್ಟವಾಗುತ್ತೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಫೀಚರ್ಸ್‌

ಸ್ಯಾಮ್‌ಸಂಗ್‌ನ ಈ ಸ್ಮಾರ್ಟ್‌ಫೋನ್‌ 6.2 ಇಂಚಿನ ಡೈನಾಮಿಕ್ AMOLED FHD+ 2X ಮಾದರಿಯ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಸಪೋರ್ಟ್ ಪಡೆದಿದೆ. ಅಲ್ಲದೇ ಇದು Exynos 2400 SoC ಚಿಪ್ಸೆಟ್ ಪ್ರೊಸೆಸರ್‌ ಪವರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ನೊಂದಿಗೆ ಕೆಲಸ ನಿರ್ವಹಿಸಲಿದೆ.

ಹಾಗೆಯೇ ಈ ಫೋನ್‌ ಮೂರು ರಿಯರ್‌ ಕ್ಯಾಮೆರಾ ರಚನೆ ಹೊಂದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಅಲ್ಲದೇ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 4000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ.

ಐಫೋನ್ 15 ಫೀಚರ್ಸ್‌

ಆಪಲ್‌ ಸಂಸ್ಥೆಯ ಈ ಐಫೋನ್‌ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಇದು ಆಪಲ್‌ನ A16 ಬಯೋನಿಕ್ ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸುತ್ತದೆ. ಇದು ಡೈನಾಮಿಕ್ ಐಲ್ಯಾಂಡ್ ನಾಚ್ ಅನ್ನು ಪಡೆದಿದೆ. ಹಾಗೆಯೇ 48 ಮೆಗಾಪಿಕ್ಸೆಲ್ ಸೆನ್ಸಾರ್‌ನ ಪ್ರಾಥಮಿಕ ಕ್ಯಾಮೆರಾ ಸೌಲಭ್ಯ ಪಡೆದಿದ್ದು, ಅತ್ಯುತ್ತಮ ಫೋಟೋಗ್ರಫಿ ಅನುಭವ ನೀಡಲಿದೆ. ಮುಂಭಾಗದಲ್ಲಿ 12 ಮೆಗಾ ಪಿಕ್ಸಲ್‌ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಪಡೆದಿದೆ. ಹಾಗೆಯೇ ಸಿನಿಮಾಟಿಕ್ ಮೋಡ್, 4K ಮೋಡ್ ಆಯ್ಕೆಗಳು ಇವೆ.

ಒನ್‌ಪ್ಲಸ್‌ 12 ಫೀಚರ್ಸ್‌

ಈ ಸ್ಮಾರ್ಟ್‌ಫೋನ್‌ 6.82 ಇಂಚಿನ QHD+ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇಯು 1440 x 3168 ಪಿಕ್ಸೆಲ್‌ ಸ್ಕ್ರೀನ್‌ ಸೂಪರ್ ಕ್ರಿಸ್ಪ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಅಲ್ಲದೇ ಕ್ವಾಲ್ಕಾಮ್ ಸ್ನ್ಯಾಪ್‌ಡ್ರಾಗನ್ 8 ಜೆನ್‌ 3 SoC ಪ್ರೊಸೆಸರ್‌ ಪವರ್‌ ಹೊಂದಿದ್ದು, ಆಂಡ್ರಾಯ್ಡ್‌ 14 ಓಎಸ್‌ ನಲ್ಲಿ ಕೆಲಸ ನಿರ್ವಹಿಸಲಿದೆ.

ಹಾಗೆಯೇ ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ 5400mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 100W ಸೂಪರ್‌ವೂಕ್‌ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ವಿವೋ X90 ಫೀಚರ್ಸ್

ವಿವೋ X90 ಫೋನ್‌ 6.76 ಇಂಚಿನ ಕರ್ವ್ಡ FHD+ Q9 ಅಲ್ಟ್ರಾ-ವಿಷನ್ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್‌ ಆಯ್ಕೆ ಪಡೆದಿದೆ. ಹಾಗೆಯೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 9200 ಚಿಪ್‌ಸೆಟ್‌ ಪ್ರೊಸೆಸರ್‌ ಮೂಲಕ ಕಾರ್ಯ ನಿರ್ವಹಿಸಲಿದ್ದು, ತ್ರಿವಳಿ ಕ್ಯಾಮೆರಾ ಹೊಂದಿದೆ. ಇದರ ಜೊತೆಗೆ 4,810mAh ಸಾಮರ್ಥ್ಯದ ಬ್ಯಾಟರಿ ಪವರ್‌ ಪಡೆದಿದ್ದು, ಇದಕ್ಕೆ ಪೂರಕವಾಗಿ 120W ಡ್ಯುಯಲ್ ಸೆಲ್ ಫಾಸ್ಟ್‌ ಚಾರ್ಜಿಂಗ್ ಬೆಂಬಲ ಹೊಂದಿದೆ.

Best Mobiles in India

English summary
Best Mobiles Under 50000 In India in 2024. check phone list here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+