Home
ಮೊಬೈಲ್

ಹೊಸ ಮೊಟೊ ಸ್ಮಾರ್ಟ್‌ಫೋನ್‌ ಖರೀದಿಸುವ ಗ್ರಾಹಕರೇ, ಇಲ್ಲಿ ಗಮನಿಸಿ!

ದೇಶದ ಮೊಬೈಲ್‌ ಮಾರುಕಟ್ಟೆಯಲ್ಲಿ ಮೊಟೊರೊಲಾ (Motorola) ಸಂಸ್ಥೆಯು ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಮೊಬೈಲ್‌ ಪ್ರಿಯರಿಂದ ಸೈ ಎನಿಸಿಕೊಂಡಿದೆ. ಇತ್ತೀಚಿಗೆ ಸಂಸ್ಥೆಯು ಹಲವು ಹೊಸ ಫೋನ್‌ಗಳನ್ನು ಬಿಡುಗಡೆ ಮಾಡಿದ್ದು, ಅವುಗಳ ಪೈಕಿ ಕೆಲವು ಮೀಡ್‌ರೇಂಜ್‌ ಪ್ರೈಸ್‌ಟ್ಯಾಗ್‌ನ ಸ್ಮಾರ್ಟ್‌ಫೋನ್‌ಗಳು ಗ್ರಾಹಕರ ಗಮನ ಸೆಳೆದಿವೆ. ಅದರಲ್ಲಿಯೂ ಮುಖ್ಯವಾಗಿ ಎಡ್ಜ್‌ ಸರಣಿಯ ಮೊಬೈಲ್‌ಗಳು ಡಿಮ್ಯಾಂಡ್‌ನಲ್ಲಿ ಇವೆ.

ಹೌದು, ಮೊಟೊರೊಲಾ ಮೊಬೈಲ್‌ ಸಂಸ್ಥೆಯು ಹಲವು ಸ್ಮಾರ್ಟ್‌ಫೋನ್‌ಗಳ ಆಯ್ಕೆ ಪಡೆದುಕೊಂಡಿದೆ. ಅವುಗಳಲ್ಲಿ ಇತ್ತೀಚಿನ ಮೊಟೊ ಎಡ್ಜ್‌ 40 ಸರಣಿಯ ಹಾಗೂ ಮೊಟೊ ಎಡ್ಜ್‌ 50 ಸರಣಿಯ ಫೋನ್‌ಗಳು ಸಖತ್‌ ಸ್ಟೈಲಿಶ್‌ ಲುಕ್‌ ಪಡೆದಿದ್ದು, ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಮೋಡಿ ಮಾಡಿವೆ. ಇಂದಿನ ಈ ಲೇಖನದಲ್ಲಿ ಮೊಟೊ ಎಡ್ಜ್‌ ಸರಣಿಯ ಕೆಲವು ಜನಪ್ರಿಯ ಫೋನ್‌ಗಳ ಬಗ್ಗೆ ನೋಡೋಣ ಬನ್ನಿರಿ.

ಹೊಸ ಮೊಟೊ ಸ್ಮಾರ್ಟ್‌ಫೋನ್‌ ಖರೀದಿಸುವ ಗ್ರಾಹಕರೇ, ಇಲ್ಲಿ ಗಮನಿಸಿ!

ಮೊಟೊರೊಲಾ ಸಂಸ್ಥೆಯ ಎಡ್ಜ್‌ 50 ಪ್ರೊ

ಮೊಟೊರೊಲಾ ಸಂಸ್ಥೆಯ ಎಡ್ಜ್‌ 50 ಪ್ರೊ ಮೊಬೈಲ್‌ 2712 × 1220 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಪೋರ್ಟ್‌ ಒಳಗೊಂಡ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಅಲ್ಲದೇ ಇದು ಕ್ವಾಲ್ಕಮ್‌ ಸ್ನಾಪ್‌ಡ್ರಾಗನ್‌ 7 ಜೆನ್‌ 3 SoC ಪ್ರೊಸೆಸರ್‌ ಸಾಮರ್ಥ್ಯದ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 14 ಓಎಸ್‌ ಸೌಲಭ್ಯ ಸಹ ಹೊಂದಿದೆ.

ಇದರೊಂದಿಗೆ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಇದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯದಲ್ಲಿ ಇದೆ. ಇನ್ನು ಈ ಫೋನ್‌ 4500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಸಪೋರ್ಟ್‌ ಆಗಿ 125 W ಫಾಸ್ಟ್‌ ಟರ್ಬೋ ಚಾರ್ಜಿಂಗ್‌ ಆಯ್ಕೆ ಇದೆ. ಅಲ್ಲದೇ 50W ವೈರ್‌ಲೆಸ್ ಚಾರ್ಜಿಂಗ್ ಸೌಲಭ್ಯ ಹೊಂದಿದೆ.

ಮೊಟೊರೊಲಾ ಎಡ್ಜ್ 40 5G

ಮೊಟೊರೊಲಾ ಎಡ್ಜ್ 40 5G ಫೋನ್‌ 6.5 ಇಂಚಿನ ಫುಲ್ ಹೆಚ್‌ಡಿ ಸಾಮರ್ಥ್ಯದ ಕರ್ವ್ಡ್ ಡಿಸ್‌ಪ್ಲೇ ಪಡೆದಿದ್ದು, 2400 x 1080 ಪಿಕ್ಸೆಲ್ ರೆಸಲ್ಯೂಶನ್‌ ಸಾಮರ್ಥ್ಯ ಒಳಗೊಂಡಿದೆ. ಅಲ್ಲದೇ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 8020 5G SoC ಪ್ರೊಸೆಸರ್‌ನಿಂದ ಕೆಲಸ ನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಓಎಸ್‌ ಸಪೋರ್ಟ್‌ ಸಹ ಪಡೆದುಕೊಂಡಿದೆ.

ಹಾಗೆಯೇ ಈ ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಆಗಿದೆ. ಇದರೊಂದಿಗೆ 4,400 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಇದ್ದು, ಇದಕ್ಕೆ ಪೂರಕವಾಗಿ 68W ಟರ್ಬೋಪವರ್ ವೈರ್ಡ್ ಚಾರ್ಜಿಂಗ್ ಮತ್ತು 15W ವಾಯರ್‌ಲೆಸ್‌ ಚಾರ್ಜಿಂಗ್ ಸೌಲಭ್ಯ ಕೂಡಾ ಪಡೆದಿದೆ.

ಮೊಟೊರೊಲಾ ಎಡ್ಜ್‌ 40 ನಿಯೋ

ಮೊಟೊರೊಲಾ ಎಡ್ಜ್‌ 40 ನಿಯೋ ಮೊಬೈಲ್‌ 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಪೋಲೆಡ್‌ ಡಿಸ್‌ಪ್ಲೇ ಹೊಂದಿದ್ದು, ಈ ಡಿಸ್‌ಪ್ಲೇಯು 2400 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಅಲ್ಲದೇ ಮೀಡಿಯಾ ಟೆಕ್ ಡೈಮೆನ್ಸಿಟಿ 7030 SoC ಪ್ರೊಸೆಸರ್ ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್‌ ಸಪೋರ್ಟ್‌ ಇದೆ.

ಅಲ್ಲದೇ ಈ ಫೋನ್ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಆಗಿದೆ. ಇದರೊಂದಿಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಇದ್ದು, ಇದಕ್ಕೆ ಪೂರಕವಾಗಿ 68W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಕೂಡಾ ಪಡೆದಿದೆ.

Best Mobiles in India

English summary
Best Motorola Edge phones in India at mid range price. check out phone list, phone specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+