Home
ಮೊಬೈಲ್

ಮಾರುಕಟ್ಟೆಯಲ್ಲಿ ಅಬ್ಬರಿಸುತ್ತಿರುವ ಅತ್ಯುತ್ತಮ ಮೊಟೊ ಫೋನ್‌ಗಳ ಲಿಸ್ಟ್‌ ಇಲ್ಲಿದೆ!

ಮೊಟೊರೊಲಾ ಕಂಪನಿಯು ಹಲವು ಮಾಡೆಲ್‌ಗಳಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದ್ದು, ಮಾರುಕಟ್ಟೆಯಲ್ಲಿ ತನ್ನದೇ ಗ್ರಾಹಕ ಬಳಗವನ್ನು ಒಳಗೊಂಡಿದೆ. ಅಂದಹಾಗೆ ಮೊಟೊ ಸಂಸ್ಥೆಯ ಕೆಲವು ಫೋನ್‌ಗಳಂತೂ ಈಗಾಗಲೇ ಮಾರುಕಟ್ಟೆಯಲ್ಲಿ ಗಮನ ಸೆಳೆದಿವೆ. ಆ ಲಿಸ್ಟ್‌ನಲ್ಲಿ ಮೊಟೊ ಎಡ್ಜ್ ಸರಣಿಯ ಫೋನ್‌ಗಳು ಹೆಚ್ಚು ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿವೆ. ಇನ್ನು ಮೊಟೊ ಎಡ್ಜ್ ಸರಣಿಯ ಮೊಬೈಲ್‌ಗಳು ಸ್ಟೈಲಿಶ್‌ ಲುಕ್‌ ಪಡೆದಿವೆ.

ಹೌದು, ಮೊಟೊರೊಲಾ ಸಂಸ್ಥೆಯ ಮೊಟೊರೊಲಾ ಎಡ್ಜ್ ಸರಣಿಯಲ್ಲಿನ ಕೆಲವು ಮೊಬೈಲ್‌ಗಳು ಆಕರ್ಷಕ ಎನಿಸಿವೆ. ಅವುಗಳ ಪೈಕಿ ಮೊಟೊರೊಲಾ ಎಡ್ಜ್‌ 50 ಫ್ಯೂಶನ್‌, ಮೊಟೊರೊಲಾ ಎಡ್ಜ್ 50 ಹಾಗೂ ಮೊಟೊರೊಲಾ ಎಡ್ಜ್ 50 ಅಲ್ಟ್ರಾ, ಮೊಬೈಲ್‌ಗಳು ಸೇರಿವೆ. ಹಾಗಾದರೇ ಪ್ರಸ್ತುತ ಮಾರುಕಟ್ಟೆಯಲ್ಲಿ ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿರುವ ಮೊಟೊರೊಲಾ ಎಡ್ಜ್ ಸರಣಿಯ ಮೂರು ಅತ್ಯುತ್ತಮ ಫೋನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಮಾರುಕಟ್ಟೆಯಲ್ಲಿ ಅಬ್ಬರಿಸುತ್ತಿರುವ ಅತ್ಯುತ್ತಮ ಮೊಟೊ ಫೋನ್‌ಗಳ ಲಿಸ್ಟ್‌ ಇಲ್ಲಿದೆ!

ಮೊಟೊರೊಲಾ ಎಡ್ಜ್‌ 50 ಫ್ಯೂಜನ್‌

ಮೊಟೊ (Moto) ಎಡ್ಜ್‌ 50 ಫ್ಯೂಜನ್‌ ಮೊಬೈಲ್‌ 6.7 ಇಂಚಿನ 3D ಕರ್ವ್ಡ್‌ pOLED ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದರ ಡಿಸ್‌ಪ್ಲೇಯು 2400 × 1080p ಪಿಕ್ಸಲ್‌ ರೆಸಲ್ಯೂಶನ್‌ ಸೌಲಭ್ಯ ಪಡೆದಿದೆ. ಇನ್ನು ಈ ಫೋನ್‌ ಕ್ವಾಲ್ಕಮ್‌ ಸ್ನಾಪ್ಡ್ರಾಗನ್ 7s ಜೆನ್ 3 ಚಿಪ್‌ಸೆಟ್‌ ಪ್ರೊಸೆಸರ್‌ ಸೌಲಭ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಕೂಡಾ ಇದೆ.

ಇದರ ಜೊತೆಗೆ ಇದು ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಹಾಗೆಯೇ ಇದು 5,000 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದರ ಜೊತೆಗೆ 68W ಟರ್ಬೋ ಪವರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದುಕೊಂಡಿದೆ.

ಮೊಟೊರೊಲಾ ಎಡ್ಜ್‌ 50 ಮೊಬೈಲ್‌

ಮೊಟೊರೊಲಾ ಎಡ್ಜ್‌ 50 ಮೊಬೈಲ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದ್ದು, ಈ ಡಿಸ್‌ಪ್ಲೇಯು 1200 x 2780 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಪೋರ್ಟ್‌ ಮಾಡಲಿದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 7 ಜೆನ್‌ 1 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಬೆಂಬಲ ಇದೆ.

ಅಂದಹಾಗೆ ಈ ಮೊಬೈಲ್‌ ಮೂರು ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಆಗಿದೆ. ಅಲ್ಲದೇ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, ಇದಕ್ಕೆ ಪೂರಕವಾಗಿ 68 W ಫಾಸ್ಟ್‌ ಟರ್ಬೋ ಚಾರ್ಜಿಂಗ್‌ ಸೌಲಭ್ಯ ಒಳಗೊಂಡಿದೆ.

ಮೊಟೊರೊಲಾ ಎಡ್ಜ್‌ 50 ಅಲ್ಟ್ರಾ ಮೊಬೈಲ್‌

ಮೊಟೊರೊಲಾ ಎಡ್ಜ್‌ 50 ಅಲ್ಟ್ರಾ ಮೊಬೈಲ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಪಡೆದಿದ್ದು, ಈ ಡಿಸ್‌ಪ್ಲೇಯು 1200 x 2780 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಪೋರ್ಟ್‌ ಸಹ ಇದೆ. ಇದಲ್ಲದೆ ಡಿಸ್‌ಪ್ಲೇ 144 ಟ್ರೂ ಕಲರ್‌ ಡಿಸ್‌ಪ್ಲೇ ಸೌಲಭ್ಯ ಪಡೆದಿದ್ದು, ಇದರೊಂದಿಗೆ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8s ಜೆನ್‌ 3 ಪ್ರೊಸೆಸರ್‌ ಸಪೋರ್ಟ್‌ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಪಡೆದುಕೊಂಡಿದೆ.

ಅಂದಹಾಗೆ ಈ ಮೊಬೈಲ್‌ ಮೂರು ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಇದರ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಆಗಿದೆ. ಇದರ ಜೊತೆಗೆ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ 125W ಫಾಸ್ಟ್‌ ಟರ್ಬೋ ಚಾರ್ಜಿಂಗ್‌ ಸೌಲಭ್ಯ ಒಳಗೊಂಡಿದೆ.

Best Mobiles in India

English summary
Best Motorola Edge Smartphones to Buy in India Right Now. check mobile list and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+