Home
ಮೊಬೈಲ್

ಬಜೆಟ್‌ ದರದಲ್ಲಿ ಒಪ್ಪೋ ಮೊಬೈಲ್‌ ಖರೀದಿಸಬೇಕೆ?..ಹಾಗಿದ್ರೆ, ಈ ಫೋನ್‌ಗಳನ್ನು ನೋಡಿ!

ದೇಶದ ಟೆಕ್ ಮಾರುಕಟ್ಟೆಯಲ್ಲಿ ಒಪ್ಪೋ ಮೊಬೈಲ್‌ (Oppo) ಸಂಸ್ಥೆಯ ಸ್ಮಾರ್ಟ್‌ಫೋನ್‌ಗಳು ಗ್ರಾಹಕರನ್ನು ಸೆಳೆದಿವೆ. ಸಂಸ್ಥೆಯು ಭಿನ್ನ ಶ್ರೇಣಿಯಲ್ಲಿ ಹಲವು ಮೊಬೈಲ್‌ ಮಾಡೆಲ್‌ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಒಪ್ಪೋ F ಸರಣಿ, ಒಪ್ಪೋ ರೆನೋ ಸರಣಿ, ಒಪ್ಪೋ A ಸರಣಿಯ ಫೋನ್‌ಗಳು ಆಕರ್ಷಕ ಎನಿಸಿಕೊಂಡಿವೆ. ಅದಾಗ್ಯೂ, ಬಜೆಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇರುವ ಕೆಲವು ಮೊಬೈಲ್‌ಗಳಿಗೆ ಮಾರುಕಟ್ಟೆಯಲ್ಲಿ ಡಿಮ್ಯಾಂಡ್‌ ಅಧಿಕ. ಈ ನಿಟ್ಟಿನಲ್ಲಿ ಒಪ್ಪೋ A ಸರಣಿಯ ಹಾಗೂ ಒಪ್ಪೋ F ಸರಣಿಯ ಮೊಬೈಲ್‌ಗಳು ಬಜೆಟ್‌ ದರದಲ್ಲಿ ಗಮನ ಸೆಳೆದಿವೆ.

ಹೌದು, ಒಪ್ಪೋ ಮೊಬೈಲ್‌ ಸಂಸ್ಥೆಯ ಇತ್ತೀಚಿನ ಒಪ್ಪೋ F25 ಪ್ರೊ 5G ಫೋನ್‌ ಹಾಗೂ ಒಪ್ಪೋ A79 5G ಫೋನ್‌ ಮೊಬೈಲ್‌ಗಳು ಆಕರ್ಷಕ ಫೀಚರ್ಸ್‌ನಿಂದ ಮಾರುಕಟ್ಟೆಯಲ್ಲಿ ಸದ್ದು ಮಾಡಿವೆ. ಅಲ್ಲದೇ ಇವುಗಳು ಬಜೆಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದ್ದು, ಇವುಗಳ ಡಿಸೈನ್‌ ಸಹ ಆಕರ್ಷಕ ಎನಿಸಿದೆ. ಹಾಗಾದರೇ ಬಜೆಟ್‌ ದರದಲ್ಲಿ ಲಭ್ಯ ಇರುವ ಕೆಲವು ಬೆಸ್ಟ್‌ ಒಪ್ಪೋ ಫೋನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಬಜೆಟ್‌ ದರದಲ್ಲಿ ಒಪ್ಪೋ ಮೊಬೈಲ್‌ ಖರೀದಿಸಬೇಕೆ?..ಹಾಗಿದ್ರೆ, ಈ ಫೋನ್‌ಗಳನ್ನು ನೋಡಿ

ಒಪ್ಪೋ F25 ಪ್ರೊ 5G ಮೊಬೈಲ್‌

ಒಪ್ಪೋ F25 ಪ್ರೊ 5G ಮೊಬೈಲ್‌ 6.7 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಕರ್ವ್ಡ್ ಡಿಸ್‌ಪ್ಲೇ ರಚನೆ ಅನ್ನು ಪಡೆದಿದ್ದು, ಇದು 2412×1080 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿದೆ. ಅಲ್ಲದೇ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 6nm ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಇದರ ಜೊತೆಗೆ 8GB + 128GB ಸ್ಟೋರೇಜ್‌ ಹಾಗೂ 8GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಸಹ ಕಾಣಬಹುದು.

ಇನ್ನು ಈ ಫೋನ್ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸರ್‌ ಸೌಲಭ್ಯದಲ್ಲಿ ಇದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಇದಕ್ಕೆ ಪೂರಕವಾಗಿ 67W ಸೂಪರ್‌ವೂಕ್ ಚಾರ್ಜಿಂಗ್‌ ಸಪೋರ್ಟ್‌ ಇದೆ.

ಒಪ್ಪೋ A79 5G ಮೊಬೈಲ್‌

ಒಪ್ಪೋ A79 5G ಮೊಬೈಲ್‌ 6.72 ಇಂಚಿನ ಫುಲ್‌ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಅಲ್ಲದೇ ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್‌ ಪವರ್‌ ಅನ್ನು ಹೊಂದಿದ್ದು, ಇದಕ್ಕೆ ಅನುಗುಣವಾಗಿ ಆಂಡ್ರಾಯ್ಡ್‌ 13 OS ಆಧಾರಿತ ಕಲರ್ ಓಎಸ್‌ 13 ಬೆಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ.

ಹಾಗೆಯೇ ಈ ಮೊಬೈಲ್ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಪಡೆದಿದೆ. ಇದರ ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 33W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್‌ ಮಾಡುತ್ತದೆ. ಇದು ಗ್ಲೋಯಿಂಗ್ ಗ್ರೀನ್ ಮತ್ತು ಮಿಸ್ಟರಿ ಬ್ಲ್ಯಾಕ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

ಒಪ್ಪೋ A59 5G ಮೊಬೈಲ್‌

ಒಪ್ಪೋ A59 5G ಸ್ಮಾರ್ಟ್‌ಫೋನ್‌ 6.56 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ ಡ್ಯೂಡ್ರಾಪ್ ನಾಚ್ ಅನ್ನು ಪಡೆದುಕೊಂಡಿದೆ. ಅಲ್ಲದೇ ಇದರ ಡಿಸ್‌ಪ್ಲೇ 1612 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಅಲ್ಲದೇ ಮೀಡಿಯಾ ಟೆಕ್‌ ಡೈಮೆನ್ಸಿಟಿ 6020SoC ಪ್ರೊಸೆಸರ್‌ ಪವರ್‌ ಅನ್ನು ಪಡೆದಿದ್ದು, ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ಪಡೆದಿದೆ.

ಇದರೊಂದಿಗೆ ಡ್ಯುಯಲ್ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇದರ ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದು 33W SUPERVOOC ಫ್ಲ್ಯಾಶ್ ಚಾರ್ಜಿಂಗ್ ಸಪೋರ್ಟ್‌ ಅನ್ನು ಪಡೆದುಕೊಂಡಿದೆ.

Best Mobiles in India

English summary
Best Oppo Smartphones in india under Rs 25000. Check Specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+