Home
ಮೊಬೈಲ್

ಮೀಡ್‌ರೇಂಜ್‌ ಬೆಲೆಯಲ್ಲಿ ಸ್ಟೈಲಿಶ್‌ ಲುಕ್‌ ಫೋನ್‌ ಖರೀದಿಸಲು ಈ ಲಿಸ್ಟ್‌ ನೋಡಿ!

ಮೊಬೈಲ್‌ ಮಾರುಕಟ್ಟೆಯಲ್ಲಿ ಹಲವು ಸ್ಮಾರ್ಟ್‌ಫೋನ್‌ ತಯಾರಿಕಾ ಸಂಸ್ಥೆಗಳು ಭಿನ್ನ ಮಾದರಿಯ ಫೋನ್‌ಗಳನ್ನು ಲಾಂಚ್‌ ಮಾಡುತ್ತಾ ಮುನ್ನಡೆದಿವೆ. ಸಂಸ್ಥೆಗಳು ಬಜೆಟ್‌ ದರದ ಫೋನ್‌ಗಳ ಜೊತೆಗೆ ಮೀಡ್‌ರೇಂಜ್‌ ಪ್ರೈಸ್‌ಟ್ಯಾಗ್‌ ನಲ್ಲಿ ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿವೆ. ಮುಖ್ಯವಾಗಿ ಮೀಡ್‌ರೇಂಜ್‌ ಬೆಲೆಯ ಫೋನ್‌ಗಳು ಸ್ಟೈಲಿಶ್‌ ಲುಕ್‌ನಲ್ಲಿ ಕಾಣಿಸಿಕೊಂಡಿವೆ.

ಹೌದು, ಮೀಡ್‌ರೇಂಜ್‌ ಬೆಲೆಯಲ್ಲಿನ ಕೆಲವು ಅತ್ಯುತ್ತಮ ಫೀಚರ್ಸ್‌ನ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಹೆಚ್ಚು ಗಮನ ಸೆಳೆದಿವೆ. ಆ ಪೈಕಿ ಬಹುತೇಕ ಫೋನ್‌ಗಳು ಡಿಸೈನ್‌, ಕ್ಯಾಮೆರಾ, ಪ್ರೊಸೆಸರ್‌, ಬ್ಯಾಟರಿ ಆಯ್ಕೆಗಳಿಂದಲೂ ಗಮನ ಸೆಳೆದಿವೆ. ಹಾಗಾದರೆ ಮೀಡ್‌ರೇಂಜ್‌ ಒಳಗೆ ಲಭ್ಯ ಇರುವ ಸ್ಮಾರ್ಟ್‌ಫೋನ್‌ಗಳ ಬಗ್ಗೆ ತಿಳಿಯೋಣ ಬನ್ನಿರಿ.

ಮೀಡ್‌ರೇಂಜ್‌ ಬೆಲೆಯಲ್ಲಿ ಸ್ಟೈಲಿಶ್‌ ಲುಕ್‌ ಫೋನ್‌ ಖರೀದಿಸಲು ಈ ಲಿಸ್ಟ್‌ ನೋಡಿ!

ವಿವೋ V29e ಸ್ಮಾರ್ಟ್‌ಫೋನ್‌
ವಿವೋ V29e ಫೋನ್ ಫುಲ್‌ ಹೆಚ್‌ಡಿ 6.73 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದಿದೆ. ಈ ಫೋನ್‌ ಕ್ವಾಲ್ಕಾಮ್ ಸ್ನ್ಯಾಪ್ ಡ್ರ್ಯಾಗನ್ 695 SoC ಪ್ರೊಸೆಸರ್‌ ಬಲದಲ್ಲಿ ಕೆಲಸ ಮಾಡಲಿದೆ. ಕಾರ್ಯ ನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಓಎಸ್‌ ಸಪೋರ್ಟ್‌ ಪಡೆದಿದೆ. ಇನ್ನು ಫೋನಿನ ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಆಗಿದ್ದು, ಜೊತೆಗೆ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದ್ದು, ಇದಕ್ಕೆ ಪೂರಕವಾಗಿ 44W ಚಾರ್ಜಿಂಗ್ ಬೆಂಬಲ ಇದೆ.

ಒಪ್ಪೋ ರೆನೋ 10 5G ಸ್ಮಾರ್ಟ್‌ಫೋನ್‌
ಒಪ್ಪೋ ಸಂಸ್ಥೆಯ ಈ ಸ್ಮಾರ್ಟ್‌ಫೋನ್‌ 6.74 ಇಂಚಿನ OLED ಡಿಸ್‌ಪ್ಲೆ ಅನ್ನು ಪಡೆದಿದ್ದು, ಡಿಸ್‌ಪ್ಲೇ 1080 x 2412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡದಿದೆ. ಜೊತೆಗೆ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಇದರ ಹಾಗೆಯೇ 8 GB + 256 GB ಸ್ಟೋರೇಜ್ ಕಾನ್ಫಿಗರೇಶನ್ ಆಯ್ಕೆ ಪಡೆದಿದೆ.

ಒನ್‌ಪ್ಲಸ್‌ ನಾರ್ಡ್‌ 3 ಸ್ಮಾರ್ಟ್‌ಫೋನ್‌
ಒನ್‌ಪ್ಲಸ್‌ ನಾರ್ಡ್‌ 3 ಫೋನ್‌ 6.74 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 9000 SoC ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ನಲ್ಲಿದೆ. ಇದರೊಂದಿಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಹ ಹೊಂದಿದ್ದು, 80W SuperVOOC ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ವಿವೋ V23 ಪ್ರೊ 5G ಸ್ಮಾರ್ಟ್‌ಫೋನ್‌
ವಿವೋ V23 ಪ್ರೊ 5G ಸ್ಮಾರ್ಟ್‌ಫೋನ್‌ 1,080 x 2,376 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.56 ಇಂಚಿನ ಫುಲ್‌ HD+ ಡಿಸ್‌ಪ್ಲೇ ಅನ್ನು ಹೊಂದಿದೆ. ಅಲ್ಲದೇ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 1200 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಪಡೆದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ.

ಇದಲ್ಲದೆ ಈ ಫೋನ್‌ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಮತ್ತು 8 ಮೆಗಾಪಿಕ್ಸೆಲ್ ವೈಡ್ ಆಂಗಲ್ ಸೆನ್ಸಾರ್‌ ಸಾಮರ್ಥ್ಯ ಡ್ಯುಯೆಲ್‌ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ. ಇದರ ಜೊತೆಗೆ ಈ ಸ್ಮಾರ್ಟ್‌ಫೋನ್‌ 4,300 mAh ಸಾಮರ್ಥ್ಯದ ಬ್ಯಾಟರಿ ಅನ್ನು ಪಡೆದಿದ್ದು, 44W ಫಾಸ್ಟ್‌ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

Best Mobiles in India

English summary
best phones at midrange price tag in india 2023. check full list is here with all details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+