Home
ಮೊಬೈಲ್

ಇದ್ದರೆ ಇಂತಹ ಫೋನ್‌ ಇರಬೇಕು!..ಸೂಪರ್‌ ಸ್ಪೀಡ್‌ ಪ್ರೊಸೆಸರ್‌..ಬೊಂಬಾಟ್‌ ಕ್ಯಾಮೆರಾ!

ಇಂದಿನ ದಿನಗಳಲ್ಲಿ ಸ್ಮಾರ್ಟ್‌ಫೋನ್‌ ಪ್ರತಿಯೊಬ್ಬರ ಅಗತ್ಯ ಹಾಗೂ ಅವಶ್ಯ ಡಿವೈಸ್‌ ಎಂದೇನಿಸಿದೆ. ಉತ್ತಮ ಬ್ಯಾಟರಿ ಪವರ್‌ ಜೊತೆಗೆ ಅತ್ಯುತ್ತಮ ಪ್ರೊಸೆಸರ್‌ ಹೊಂದಿರುವ ಮೊಬೈಲ್‌ಗಳು ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಮತ್ತು ವೇಗದ ಕಾರ್ಯವೈಖರಿ ಒದಗಿಸುತ್ತವೆ. ಈ ನಿಟ್ಟಿನಲ್ಲಿ ಬಹುತೇಕ ನೂತನ ಫೋನ್‌ಗಳು ಅಪ್‌ಗ್ರೇಡ್‌ ಪ್ರೊಸೆಸರ್‌ ಅನ್ನು ಹೊಂದಿದ್ದು, ಅತ್ಯುತ್ತಮ ಕಾರ್ಯವೈಖರಿಯ ನೀಡುವ ಸೌಲಭ್ಯ ಪಡೆದಿವೆ. ಅದಾಗ್ಯೂ, ಹೊಸ ಸ್ನ್ಯಾಪ್‌ಡ್ರಾಗನ್‌ 8 ಎಲೈಟ್‌ (Snapdragon 8 Elite) ಪ್ರೊಸೆಸರ್‌ ಬಾರೀ ಸದ್ದು ಮಾಡಿದೆ.

ಹೌದು, ಮೊಬೈಲ್‌ ಮಾರುಕಟ್ಟೆಯಲ್ಲಿ ವೇಗದ ಪ್ರೊಸೆಸರ್‌ನ ಸ್ಮಾರ್ಟ್‌ಫೋನ್‌ಗಳಿಗೆ ಹೆಚ್ಚಿನ ಬೇಡಿಕೆ ಇದೆ ಎನ್ನಬಹುದು. ಅದರಲ್ಲಿಯೂ ಇತ್ತೀಚಿನ ಹೊಸ ಸ್ನ್ಯಾಪ್‌ಡ್ರಾಗನ್‌ 8 ಎಲೈಟ್‌ (Snapdragon 8 Elite) ಪ್ರೊಸೆಸರ್‌ ಇರುವ ಮೊಬೈಲ್‌ಗಳಿಗೆ ಡಿಮ್ಯಾಂಡ್‌ ಮತ್ತಷ್ಟು ಅಧಿಕ ಆಗಿದೆ. ಸ್ಪೀಡ್‌ ಪ್ರೊಸೆಸರ್‌ ಇರುವ ಸ್ಮಾರ್ಟ್‌ಫೋನ್‌ಗಳಲ್ಲಿ ಅಡೆ ತಡೆ ರಹಿತ ಮಲ್ಟಿಟಾಸ್ಕ್‌ ಕೆಲಸಗಳನ್ನು ನಿರೀಕ್ಷಿಸಬಹುದು. ಹಾಗಾದರೇ ಸ್ನ್ಯಾಪ್‌ಡ್ರಾಗನ್‌ 8 ಎಲೈಟ್‌ ಪ್ರೊಸೆಸರ್‌ ಪಡೆದಿರುವ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಇದ್ದರೆ ಇಂತಹ ಫೋನ್‌ ಇರಬೇಕು!..ಸೂಪರ್‌ ಸ್ಪೀಡ್‌ ಪ್ರೊಸೆಸರ್‌..ಬೊಂಬಾಟ್‌ ಕ್ಯಾಮೆರ

ರಿಯಲ್‌ಮಿ GT 7 ಪ್ರೊ ಮೊಬೈಲ್‌

ರಿಯಲ್‌ಮಿ GT 7 ಪ್ರೊ ಫೋನ್‌ 6.78 ಇಂಚಿನ 8T LTPO ಸ್ಯಾಮ್‌ಸಂಗ್‌ Eco2 1.5K OLED ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಅಲ್ಲದೇ ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್‌ 8 ಎಲೈಟ್‌ ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಕೂಡಾ ಪಡೆದಿದೆ. ಹಾಗೆಯೇ 12GB + 256 GB, 16GB + 512 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ.

ಹಾಗೆಯೇ ಈ ಫೋನಿನ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಆಗಿದ್ದು, ಇದರ ಜೊತೆಗೆ 16 ಮೆಗಾ ಪಿಕ್ಸಲ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸಹ ಇದೆ. ಅಲ್ಲದೇ 6500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಪಡೆದಿದ್ದು, ಇದಕ್ಕೆ ಪೂರಕವಾಗಿ 120W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಕೂಡಾ ಪಡೆದುಕೊಂಡಿದೆ.

ಐಕ್ಯೂ 13 ಮೊಬೈಲ್

ಐಕ್ಯೂ 13 ಮೊಬೈಲ್ 6.82 ಇಂಚಿನ ಡಿಸ್‌ಪ್ಲೇ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 1,440 x 3,168 ಪಿಕ್ಸೆಲ್‌ ರೆಸಲ್ಯೂಶನ್‌ ಸೌಲಭ್ಯ ಪಡೆದಿದೆ. ಹಾಗೆಯೇ ಇದು ಸ್ನಾಪ್‌ಡ್ರಾಗನ್ 8 ಎಲೈಟ್ SoC ಪ್ರೊಸೆಸರ್‌ ಸಾಮರ್ಥ್ಯದ ಪವರ್‌ನಲ್ಲಿ ಕಾರ್ಯ ಮಾಡಲಿದ್ದು, ಇದಕ್ಕೆ ಪೂರಕವಾಗಿ Android 15 ಆಧಾರಿತ OriginOS 5 ಸಪೋರ್ಟ್‌ ಇದೆ.

ಇನ್ನು ಈ ಫೋನಿನ ಮೊದಲ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಆಗಿದ್ದು, 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಅಲ್ಲದೇ ಐಕ್ಯೂ 13 ಮೊಬೈಲ್ 6,150mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದಕ್ಕೆ ಅನುಗುಣವಾಗಿ 120W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್‌ ಮಾಡುತ್ತದೆ.

ಒನ್‌ಪ್ಲಸ್‌ 13 ಮೊಬೈಲ್‌

ಒನ್‌ಪ್ಲಸ್‌ 13 ಮೊಬೈಲ್‌ 6.82 ಇಂಚಿನ 2K ರೆಸಲ್ಯೂಶನ್‌ LTPO AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇಯು 3168×1440 ಪಿಕ್ಸಲ್‌ ರೆಸಲ್ಯೂಶನ್‌ ಅನ್ನು ಪಡೆದಿದೆ. ಅಲ್ಲದೇ ಇದು ಸ್ನಾಪ್‌ಡ್ರಾಗನ್ 8 ಎಲೈಟ್ ಚಿಪ್‌ಸೆಟ್ (Snapdragon 8 Elite) ಪ್ರೊಸೆಸರ್‌ ಪವರ್‌ ಅನ್ನು ಪಡೆದಿದ್ದು, ಇದು ಆಂಡ್ರಾಯ್ಡ್‌ 15 ಓಎಸ್‌ ನಲ್ಲಿ ಕೆಲಸ ನಿರ್ವಹಿಸಲಿದೆ.

ಅಂದಹಾಗೆ ಈ ಫೋನಿನ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸಲ್‌ನ ಸೋನಿ LYT 808 ಸೆನ್ಸಾರ್‌ ಪಡೆದಿದ್ದು, ಇದಲ್ಲದೆ ಮುಂಭಾಗದಲ್ಲಿ 32 ಮೆಗಾ ಪಿಕ್ಸೆಲ್‌ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 6000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 100W ವೈರ್ಡ್ ಚಾರ್ಜಿಂಗ್ ಮತ್ತು 50W ವೈರ್‌ಲೆಸ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ.

Best Mobiles in India

English summary
Best Phones Powered by Snapdragon 8 Elite Processor. Check Mobiles list.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+