ಖರೀದಿಸಿದ್ರೆ ಇಂತಹ ಸ್ಮಾರ್ಟ್‌ಫೋನ್ ಖರೀದಿಸಬೇಕು!..ಆದ್ರೆ, ಬೆಲೆ ಸ್ವಲ್ಪ ಜಾಸ್ತಿ!
ಇಂದಿನ ಬಹುತೇಕ ಕೆಲಸಗಳುಗೆ ಸ್ಮಾರ್ಟ್‌ಫೋನ್ ಅವಶ್ಯಕವಾಗಿದ್ದು, ಹೀಗಾಗಿ ಸ್ಮಾರ್ಟ್‌ಫೋನ್ ಪ್ರತಿಯೊಬ್ಬರ ಅಗತ್ಯ ಡಿವೈಸ್ ಎನ್ನುವುದರಲ್ಲಿ ಸಂಶಯವಿಲ್ಲ. ಜನರು ಅವರ ಅಗಶ್ಯಕತೆಗೆ ಅನುಗುಣವಾಗಿ ನೂತನ ಸ್ಮಾರ್ಟ್‌ಫೋನ್ ಖರೀದಿಸುವರು. ಕೆಲವರು ಸ್ಮಾರ್ಟ್‌ಫೋನ್ ಖರೀದಿಸಲು ಹೆಚ್ಚು ಹಣ ವ್ಯಯಿಸಿದರೆ, ಮತ್ತೆ ಕೆಲವರು ಬಜೆಟ್ ಪ್ರೈಸ್ ಟ್ಯಾಗ್‌ನ ಸ್ಮಾರ್ಟ್‌ಫೋನ್ ಖರೀದಿ ಮಾಡಲು ಮುಂದಾಗುತ್ತಾರೆ. ಆದರೆ ಮೀಡ್‌ರೇಂಜ್ ದರದ ಕೆಲವು ಫೋನ್‌ಗಳು ಹೆಚ್ಚು ಗಮನ ಸೆಳೆದಿವೆ.

ಹೌದು, ಅತೀ ದುಬಾರಿನೂ ಅಲ್ಲದ, ಅತೀ ಕಡಿಮೆನೂ ಅಲ್ಲದ ಮೀಡ್‌ರೇಂಜ್ ಬೆಲೆಯಲ್ಲಿ ಕೆಲವು ಫೋನ್‌ಗಳು ಮಾರುಕಟ್ಟೆಯಲ್ಲಿ ಸದ್ದು ಮಾಡಿವೆ. ಮೀಡ್‌ರೇಂಜ್ ದರದಲ್ಲಿ ಬೆಸ್ಟ್ ಫೋನ್‌ಗಳನ್ನು ಸುಮಾರು 40,000ರೂ. ಗಳ ಒಳಗೆ ಖರೀದಿಸಬಹುದಾಗಿದೆ. ಈ ಫೋನ್‌ಗಳು ಅತ್ಯುತ್ತಮ ಪ್ರೊಸೆಸರ್, ಬೆಸ್ಟ್ ಕ್ಯಾಮೆರಾ, ಬಿಗ್ ಬ್ಯಾಟರಿ ಅಲ್ಲದೆ ಹೂ ಎಂಡ್ ಮಾದರಿಯ ಡಿಸ್‌ಪ್ಲೇ ಆಯ್ಕೆಗಳನ್ನು ಒಳಗೊಂಡಿವೆ. ಹಾಗಾದರೆ 40,000ರೂ. ಗಳ ಒಳಗೆ ಖರೀದಿಸಬಹುದಾದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒನ್‌ಪ್ಲಸ್ 10R 5G ಸ್ಮಾರ್ಟ್‌ಫೋನ್
ಒನ್‌ಪ್ಲಸ್ 10R 5G ಸ್ಮಾರ್ಟ್‌ಫೋನ್ 1,080 x 2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ HD+ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100-ಮ್ಯಾಕ್ಸ್ SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 12 ಆಧಾರಿತ OxygenOS 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಫೊನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL S5K3P9 ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 150W SuperVOOC ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಪಡೆದಿದೆ.
ರೆಡ್ಮಿ ನೋಟ್ 12 ಪ್ರೊ ಪ್ಲಸ್ 5G ಸ್ಮಾರ್ಟ್‌ಫೋನ್
ರೆಡ್ಮಿ ನೋಟ್ 12 ಪ್ರೊ ಪ್ಲಸ್ 5G ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 1080SoC ಪ್ರೊಸೆಸರ್ ವೇಗವನ್ನು ಪಡೆದಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ನೀಡಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸೆನ್ಸಾರ್ ಸ್ಯಾಮ್‌ಸಂಗ್ HPX ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 4,980mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್
ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ 90Hz ರಿಫ್ರೆಶ್ ರೇಟ್ ಒಳಗೊಂಡ 6.1 ಇಂಚಿನ ಫುಲ್ ಹೆಚ್‌ಡಿ ಪ್ಲಸ್ OLED ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಗೂಗಲ್ ಟೆನ್ಸರ್ SoC ಮತ್ತು ಟೈಟಾನ್ M2 ಸೆಕ್ಯುರಿಟಿ ಕೊಪ್ರೊಸೆಸರ್ ಹೊಂದಿದೆ. ಇದು ಮಾಲಿ G78 MP20 ಸಪೋರ್ಟ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅನ್ನು ಹೊಂದಿದೆ. ಇದರೊಂದಿಗೆ 4,306mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಮೊಟೊರೊಲಾ ಎಡ್ಜ್ 30 ಪ್ರೊ ಸ್ಮಾರ್ಟ್‌ಫೋನ್
ಮೊಟೊರೊಲಾ ಎಡ್ಜ್ 30 ಪ್ರೊ ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ ಹೆಚ್‌ಡಿ+ ಪೋಲೆಡ್ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 8 ಜೆನ್ 1 SoC ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಇದರೊಂದಿಗೆ 4,800mAh ಬ್ಯಾಟರಿಯನ್ನು ಹೊಂದಿದೆ. ಇದು 68W ಟರ್ಬೊ ಪವರ್ ಫಾಸ್ಟ್ ವೈರ್ಡ್ ಚಾರ್ಜಿಂಗ್ ಬೆಂಬಲಿಸಲಿದೆ.


Click it and Unblock the Notifications








