Home
ಮೊಬೈಲ್

ಅಧಿಕ ಬ್ಯಾಟರಿ ಸೌಲಭ್ಯ ಇರುವ ಬೆಸ್ಟ್‌ ಮೀಡ್‌ರೇಂಜ್‌ ಫೋನ್‌ಗಳ ಲಿಸ್ಟ್‌ ಇಲ್ಲಿದೆ!

ಪ್ರಸ್ತುತ ಸ್ಮಾರ್ಟ್‌ಫೋನ್‌ ಎಲ್ಲರಿಗೂ ಅವಶ್ಯ ಹಾಗೂ ಅಗತ್ಯ ಡಿವೈಸ್‌ ಎನಿಸದ್ದು, ಈ ನಿಟ್ಟಿನಲ್ಲಿ ದೀರ್ಘ ಅವಧಿ ಬ್ಯಾಟರಿ ಬ್ಯಾಕ್‌ಅಪ್‌ ಫೋನ್‌ ಸಹ ಮುಖ್ಯ ಎನಿಸುತ್ತದೆ. ಅನೇಕ ಗ್ರಾಹಕರು ಬಿಗ್ ಬ್ಯಾಟರಿ ಸಾಮರ್ಥ್ಯದ ಸ್ಮಾರ್ಟ್‌ಫೋನ್‌ ಖರೀದಿಗೆ ಮುಂದಾಗುತ್ತಾರೆ. ಪ್ರೀಮಿಯಂ ಮಾದರಿಯ ಸ್ಮಾರ್ಟ್‌ಫೊನ್‌ಗಳು ಕೂಡಾ ಇದೀಗ ದೀರ್ಘ ಬ್ಯಾಟರಿ ಸೌಲಭ್ಯದ ಆಯ್ಕೆ ಒಳಗೊಂಡಿವೆ.

ಅಧಿಕ ಬ್ಯಾಟರಿ ಬ್ಯಾಕ್‌ಅಪ್‌ ಇರುವ ಮೊಬೈಲ್‌ಗಳಿಗೆ ಅಧಿಕ ಬೇಡಿಕೆ ಎಂದು ಹೇಳಬಹುದಾಗಿದೆ. ಹೀಗಾಗಿ ಇತ್ತೀಚಿನ ಬಹುತೇಕ ಹೊಸ ಸ್ಮಾರ್ಟ್‌ಫೋನ್‌ಗಳು 5,000mAh ಹಾಗೂ 6,000 mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯದೊಂದಿಗೆ ಗಮನ ಸೆಳೆಯುತ್ತವೆ. 30000ರೂ. ಗಳ ಒಳಗಿನ ಕೆಲವು ಫೋನ್‌ಗಳು ಬ್ಯಾಟರಿ ಜೊತೆಗೆ ಇತರೆ ಫೀಚರ್ಸ್ ಜೊತೆಗೆ ಆಕರ್ಷಕ ಎನಿಸವೆ. ಹಾಗಾದರೇ ಅಧಿಕ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದ ಕೆಲವು ಬೆಸ್ಟ್‌ ಪ್ರೀಮಿಯಂ ಫೋನ್‌ಗಳು ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಅಧಿಕ ಬ್ಯಾಟರಿ ಸೌಲಭ್ಯ ಇರುವ ಬೆಸ್ಟ್‌ ಮೀಡ್‌ರೇಂಜ್‌ ಫೋನ್‌ಗಳ ಲಿಸ್ಟ್‌ ಇಲ್ಲಿದೆ!

ಒನ್‌ಪ್ಲಸ್‌ ನಾರ್ಡ್‌ CE 3

ಒನ್‌ಪ್ಲಸ್‌ ನಾರ್ಡ್‌ CE 3 ಮೊಬೈಲ್‌ 1,080 x 2,400 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.7 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ AMOLED ಡಿಸ್‌ಪ್ಲೇ ಅನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್‌ 782G SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇದರ ಜೊತೆಗೆ ಟ್ರಿಪಲ್ ಕ್ಯಾಮೆರಾ ರಚನೆ ಪಡೆದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ. 5,000 mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 80w ಸೂಪರ್‌ವೂಕ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.

ಅಧಿಕ ಬ್ಯಾಟರಿ ಸೌಲಭ್ಯ ಇರುವ ಬೆಸ್ಟ್‌ ಮೀಡ್‌ರೇಂಜ್‌ ಫೋನ್‌ಗಳ ಲಿಸ್ಟ್‌ ಇಲ್ಲಿದೆ!

ಐಕ್ಯೂ Z7 ಪ್ರೊ 5G

ಐಕ್ಯೂ Z7 ಪ್ರೊ 5G ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಹಾಗೆಯೇ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7200 SoC ಪ್ರೊಸೆಸರ್‌ ವೇಗದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. 4,600mAh ಸಾಮರ್ಥ್ಯವನ್ನು ಹೊಂದಿದೆ. ಇದು 66W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ.

ಪೊಕೊ X6 5G

ಪೊಕೊ X6 ಫೋನ್‌ 6.67 ಇಂಚಿನ ಡಿಸ್‌ಪ್ಲೇ ಅನ್ನು ಹೊಂದಿದೆ. ಇದು ಸ್ನ್ಯಾಪ್‌ಡ್ರ್ಯಾಗನ್ 7 ಜೆನ್‌ 2 ಪ್ರೊಸೆಸರ್‌ ಪವರ್‌ ಪಡೆದಿದ್ದು, ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದೆ ಜೊತೆಗೆ 5,100mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 67W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಇದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G

ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಮೊಬೈಲ್‌ 2,400 x 1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಅಮೊಲೆಡ್‌ ಡಿಸ್‌ಪ್ಲೇ ಅನ್ನು ಪಡೆದಿದೆ. ಹಾಗೆಯೇ ಆಕ್ಟಾ ಕೋರ್ Exynos 1280 SoC ಪ್ರೊಸೆಸರ್‌ ಜೊತೆಗೆ ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ಹೊಂದಿದೆ.

ಇನ್ನು ಇದು ಮೂರು ರಿಯರ್ ಕ್ಯಾಮೆರಾ ರಚನೆ ಹೊಂದಿದ್ದು, ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಆಗಿದೆ. ಅಲ್ಲದೇ ಈ ಮೊಬೈಲ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಅನ್ನು ಪಡೆದುಕೊಂಡಿದೆ. ಇದಕ್ಕೆ ಸಪೋರ್ಟ್‌ ಆಗಿ 25W ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಸಹ ಹೊಂದಿದೆ.

Best Mobiles in India

English summary
Best Phones with Big battery life under Rs 30,000 in India. Phone list is here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+