ಹೊಸ Samsung ಫೋನ್ ಖರೀದಿಸಬೇಕೆ?..ಹಾಗಿದ್ರೆ, ಯಾವುದಕ್ಕೂ ಒಮ್ಮೆ ಇಲ್ಲಿ ನೋಡಿ!
ದಕ್ಷಿಣ ಕೊರಿಯಾದ ಟೆಕ್ ದೊಡ್ಡಣ್ಣ ಸ್ಯಾಮ್‌ಸಂಗ್ ದೇಶದ ಮೊಬೈಲ್ ಮಾರುಕಟ್ಟೆಯಲ್ಲಿ ಜನಪ್ರಿಯ ಸ್ಥಾನ ಪಡೆದಿದೆ. ಸಂಸ್ಥೆಯು ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿ ಹಲವು ಮೊಬೈಲ್ ಆಯ್ಕೆಗಳನ್ನು ನೀಡಿದೆ. ಆ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A, ಗ್ಯಾಲಕ್ಸಿ S ಹಾಗೂ ಗ್ಯಾಲಕ್ಸಿ M ಸರಣಿಯ ಸ್ಮಾರ್ಟ್‌ಫೋನ್‌ಗಳು ಹೆಚ್ಚಿನ ಬೇಡಿಕೆಯಲ್ಲಿ ಕಾಣಿಸಿಕೊಂಡಿವೆ. ಅದರಲ್ಲಿಯೂ ಇತ್ತೀಚಿನ ಕೆಲವು ಮೊಬೈಲ್‌ಗಳಂತೂ ಸಿಕ್ಕಾಪಟ್ಟೆ ಸದ್ದು ಮಾಡಿವೆ.
ಹೌದು, ಸ್ಯಾಮ್‌ಸಂಗ್ (Samsung) ಗ್ಯಾಲಕ್ಸಿ ಸರಣಿಯಲ್ಲಿನ ಕೆಲವು ಸ್ಮಾರ್ಟ್‌ಫೋನ್‌ಗಳು ವಿಶೇಷವಾಗಿ ಕ್ಯಾಮೆರಾ ಸೆನ್ಸಾರ್, ದೀರ್ಘ ಬ್ಯಾಟರಿ ಹಾಗೂ ಆಕರ್ಷಕ ಡಿಸೈನ್‌ನಿಂದಾಗಿ ಗ್ರಾಹಕರನ್ನು ಸೆಳೆದಿವೆ. ಇನ್ನು ಇತ್ತೀಚಿನ ಗ್ಯಾಲಕ್ಸಿ S24 ಸರಣಿಯು ಮಾರುಕಟ್ಟೆಯಲ್ಲಿ ಸಖತ್ ಸೌಂಡ್ ಮಾಡಿದೆ. ಅದಾಗ್ಯೂ, ಸಂಸ್ಥೆಯ ಕೆಲವು ಫೋನ್‌ಗಳು ಗ್ರಾಹಕರ ಮೊದಲ ಆಯ್ಕೆ ಆಗಿ ಗುರುತಿಸಿಕೊಂಡಿವೆ. ಹಾಗಾದರೇ ಸ್ಯಾಮ್‌ಸಂಗ್ ಸಂಸ್ಥೆಯ ಕೆಲವು ಅತ್ಯುತ್ತಮ ಗ್ಯಾಲಕ್ಸಿಯ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S24 ಅಲ್ಟ್ರಾ ಮೊಬೈಲ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S24 ಅಲ್ಟ್ರಾ (Samsung Galaxy S24 Ultra) ಮೊಬೈಲ್ 6.8 ಇಂಚಿನ ಡೈನಾಮಿಕ್ AMOLED 2X ಡಿಸ್‌ಪ್ಲೇ ಅನ್ನು ಪಡೆದಿದೆ. ಇದು ಸ್ನಾಪ್‌ಡ್ರಾಗನ್ 8 Gen 3 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಜೊತೆಗೆ ಕ್ವಾಡ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಇದರಲ್ಲಿ ಮೊದಲನೆ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಹಾಗೆಯೇ ಇದು 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, ಇದು 45W ವೇಗದ ಚಾರ್ಜಿಂಗ್ ಸಪೋರ್ಟ್ ಕೂಡಾ ಪಡೆದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE ಮೊಬೈಲ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE ಸ್ಮಾರ್ಟ್‌ಫೋನ್ 6.7 ಇಂಚಿನ FHD+ ಇನ್ಫಿನಿಟಿ-O ಡೈನಾಮಿಕ್ AMOLED ಡಿಸ್‌ಪ್ಲೇ ಅನ್ನು ಪಡೆದಿದೆ. ಅಲ್ಲದೇ ಇದು Exynos 2400e 4nm ಪ್ರೊಸೆಸರ್ ಜೊತೆಗೆ ಸ್ಯಾಮ್‌ಸಂಗ್ Xclipse 940 GPU ಅನ್ನು ಹೊಂದಿದೆ. ಹಾಗೆಯೇ ಟ್ರಿಪಲ್ ರಿಯರ್ ಕ್ಯಾಮೆರಾ ಸಿಸ್ಟಮ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದ್ದು, ಜೊತೆಗೆ 4,700mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A35 5G ಮೊಬೈಲ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A35 5G ಫೋನ್ 1080 × 2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಸೂಪರ್ ಅಮೊಲೆಡ್ ಡಿಸ್‌ಪ್ಲೇ ಅನ್ನು ಪಡೆದಿದೆ. ಹಾಗೆಯೇ ಇದು Exynos 1380 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಅನ್ನು ಒಳಗೊಂಡಿದ್ದು, ಇದರ ಜೊತೆಗೆ ಮಾಲಿ G68 GPU ಸಪೋರ್ಟ್ ಅನ್ನು ಹೊಂದಿದೆ. ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A55 5G ಮೊಬೈಲ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A55 5G ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದ್ದು, ಈ ಡಿಸ್‌ಪ್ಲೇಯು 1,080x2,408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದರ ಜೊತೆಗೆ Exynos 1480 SoC ಪ್ರೊಸೆಸರ್ ಪವರ್‌ನಲ್ಲಿ ಇದು ಕೆಲಸ ಮಾಡಲಿದೆ. ಅಲ್ಲದೇ ಇದು ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದರೊಟ್ಟಿಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.


Click it and Unblock the Notifications








