Home
ಮೊಬೈಲ್

Smartphones: 8000 ರೂ. ಒಳಗಿನ ಸೊಗಸಾದ ಫೋನ್‌ಗಳಿವು! ನಂ.1 ಯಾವುದು? ಇಲ್ಲಿದೆ ಪಟ್ಟಿ

ನೀವು 8,000 ರೂ. ಬಜೆಟ್‌ನಲ್ಲಿ ಉತ್ತಮ ಫೋನ್‌ಗಳನ್ನು ಹುಡುಕುತ್ತಿದ್ದೀರಾ? ನಿಮ್ಮ ಬಜೆಟ್‌ ಇದಕ್ಕಿಂತಲೂ ಕಡಿಮೆ ಇದ್ಯಾ? ಹಾಗಿದ್ರೆ, ಚಿಂತೆ ಬೇಡ. 8,000ಕ್ಕಿಂತಲೂ ಕಡಿಮೆ ಬೆಲೆಗೆ (Smartphones​ Under 8,000 in India) ಸೊಗಸಾದ ಮೊಬೈಲ್‌ಗಳನ್ನು ಖರೀದಿಸಬಹುದು. ಹೌದು, ಜನಪ್ರಿಯ ಟೆಕ್ ಕಂಪನಿಗಳಾದ ಸ್ಯಾಮ್‌ಸಂಗ್, ರೆಡ್ಮಿ, ರಿಯಲ್‌ಮಿ, ವಿವೋ 7,500 ರೂ. ಗಿಂತ ಕಡಿಮೆಗೆ ತನ್ನ ಫೋನ್‌ಗಳನ್ನು ಮಾರಾಟ ಮಾಡುತ್ತಿವೆ. ಈ ಫೋನ್‌ ಖರೀದಿ ಮೇಲೆ ಬ್ಯಾಂಕ್ ರಿಯಾಯಿತಿ, ಎಕ್ಸ್‌ಚೇಂಜ್ ಆಫರ್ ಮತ್ತು ಇಎಂಐ ಆಯ್ಕೆಯೂ ಲಭ್ಯವಿರುತ್ತದೆ. ನಾವು ಈ ಲೇಖನದಲ್ಲಿ ಕೆಲವು ಫೋನ್‌ಗಳನ್ನು ಪಟ್ಟಿ ಮಾಡಿದ್ದೇವೆ.

ಪ್ರಸ್ತುತ ಸ್ಮಾರ್ಟ್‌ಫೋನ್‌ಗಳು (smartphones) ಎಲ್ಲ ವಯೋಮಾನದವರನ್ನು ಆವರಿಸಿಕೊಂಡಿವೆ. ಶಾಲಾ ಮಕ್ಕಳಿಗೆ ಆನ್‌ಲೈನ್ ತರಗತಿಗಳಿಗೆ ಅಥವಾ ಮನೆಯಲ್ಲಿ ವೃದ್ಧರಿಗೆ ಫೋನ್ ಅಗತ್ಯವಾಗಿದೆ. ಹೆಚ್ಚಿನ ಜನರು ಅಗ್ಗದ ಬೆಲೆಯಲ್ಲಿ ಉತ್ತಮ ವೈಶಿಷ್ಟ್ಯಗಳನ್ನು ಹೊಂದಿರುವ ಫೋನ್‌ಗಳನ್ನು ಬಯಸುತ್ತಾರೆ. ಇದಕ್ಕೆ ಅನುಗುಣವಾಗಿ ಟೆಕ್ ಬ್ರಾಂಡ್‌ಗಳು ಅಗ್ಗದ ಬೆಲೆಗೆ ಹೊಸ ಮೊಬೈಲ್‌ಗಳನ್ನು ಪರಿಚಯಿಸುತ್ತಿವೆ. ಜೊತೆಗೆ, ತನ್ನ ಫೋನ್‌ಗಳ ಬೆಲೆ ಇಳಿಕೆ ಮಾಡುತ್ತಿವೆ. ಭಾರತವು ಅತಿದೊಡ್ಡ ಸ್ಮಾರ್ಟ್‌ಫೋನ್ ಮಾರುಕಟ್ಟೆಗಳಲ್ಲಿ ಒಂದಾಗಿದೆ. ಅಗ್ಗದ ಸ್ಮಾರ್ಟ್‌ಫೋನ್‌ಗಳಿಗೆ ಬೇಡಿಕೆ ತುಸು ಹೆಚ್ಚಿದೆ. ಹೀಗಾಗಿ, ನಾವು 8,000ಕ್ಕಿಂತ ಕಡಿಮೆ ಬೆಲೆಯ ಫೋನ್‌ಗಳ ಬಗ್ಗೆ ಮಾಹಿತಿ ಹೊತ್ತು ತಂದಿದ್ದೇವೆ.

Smartphones: 8000 ರೂ. ಒಳಗಿನ ಸೊಗಸಾದ ಫೋನ್‌ಗಳಿವು! ಪಟ್ಟಿ ಇಲ್ಲಿದೆ

8,000 ರೂ. ಒಳಗಿನ ಸ್ಮಾರ್ಟ್‌ಫೋನ್‌ಗಳಿವು!

ರೆಡ್ಮಿ A3x: 6,699 ರೂ.

ರೆಡ್ಮಿ A3X (Redmi A3x) 8,000 ರೂ.ಗಿಂತ ಕಡಿಮೆ ಬೆಲೆಗೆ ಲಭ್ಯವಿರುವ ಉತ್ತಮ ಫೋನ್ ಆಗಿದೆ. ಈ ಮೊಬೈಲ್ ಅನ್ನು ಕಳೆದ ವರ್ಷ ಜೂನ್‌ನಲ್ಲಿ ಬಿಡುಗಡೆ ಮಾಡಲಾಯಿತು. ಈ ಫೋನಿನ 4GB RAM + 128GB ಸ್ಟೋರೇಜ್ ಬೆಲೆ 7,499 ರೂ. ಆಗಿದೆ. ಮತ್ತು 3GB RAM + 64GB ಸ್ಟೋರೇಜ್ ರೂಪಾಂತರವನ್ನು 6,699 ರೂ.ಗೆ ಬಿಡುಗಡೆ ಮಾಡಲಾಯಿತು. ಈ ಸ್ಮಾರ್ಟ್‌ಫೋನ್ ಯುನಿಸಾಕ್ T603 ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಈ ಅಗ್ಗದ ರೆಡ್‌ಮಿ ಫೋನ್ 5,000mAh ಬ್ಯಾಟರಿಯನ್ನು ಹೊಂದಿದೆ. ಈ ಪೋನಿನಲ್ಲಿ 8 ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ಮತ್ತು 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ರೆಡ್ಮಿ A3x ಸ್ಮಾರ್ಟ್‌ಫೋನ್ 6.71 ಇಂಚಿನ ದೊಡ್ಡ ಡಿಸ್ಪ್ಲೇಯನ್ನು ಹೊಂದಿದೆ. ಇದು 90Hz ರಿಫ್ರೆಶ್ ದರದ ಬೆಂಬಲ ಪಡೆದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A05: 7,099 ರೂ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A05 (Samsung Galaxy A05) ಈ ಬಜೆಟ್‌ನಲ್ಲಿ ಲಭ್ಯವಿರುವ ಅತ್ಯುತ್ತಮ ಆಯ್ಕೆಗಳಲ್ಲಿ ಒಂದಾಗಿದೆ. ಈ ಫೋನಿನ 4GB RAM + 64GB ಸ್ಟೋರೇಜ್ ರೂಪಾಂತರವನ್ನು ಅಮೆಜಾನ್‌ನಲ್ಲಿ 7,099 ರೂ.ಗೆ ಖರೀದಿಸಬಹುದು. ಈ ಫೋನಿನ ವಿಶೇಷತೆಗಳ ಬಗ್ಗೆ ಹೇಳುವುದಾದರೆ, ಈ ಮೊಬೈಲ್ ಮೀಡಿಯಾ ಟೆಕ್ ಹೆಲಿಯೊ G85 ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಇದು 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಹಾಗೆಯೇ 5,000mAh ಶಕ್ತಿಶಾಲಿ ಬ್ಯಾಟರಿ ಮತ್ತು 25W ವೇಗದ ಚಾರ್ಜಿಂಗ್ ತಂತ್ರಜ್ಞಾನ ಹೊಂದಿದೆ. ಈ ಸ್ಯಾಮ್‌ಸಂಗ್ ಫೋನಿನಲ್ಲಿ 6.7 ಇಂಚಿನ ಹೆಚ್‌ಡಿ ಪ್ಲಸ್ ಡಿಸ್ಪ್ಲೇ ಲಭ್ಯವಿದೆ.

ರಿಯಲ್‌ಮಿ ನಾರ್ಜೊ N61: 7,499 ರೂ.

ರಿಯಲ್‌ಮಿ ನಾರ್ಜೊ N61 (Realme Narzo N61) ಮೊಬೈಲ್ ಅನ್ನು ಕಳೆದ ವರ್ಷ ಜುಲೈನಲ್ಲಿ ಭಾರತದಲ್ಲಿ ಬಿಡುಗಡೆ ಮಾಡಲಾಗಿದೆ. ಈ ಫೋನಿನ 4GB RAM + 64GB ಸ್ಟೋರೇಜ್ ರೂಪಾಂತರದ ಬೆಲೆ 7,499 ರೂ. ಆಗಿದೆ. ಹಾಗೆಯೇ 6GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 8,499 ರೂ.ಗೆ ಲಭ್ಯವಿದೆ. ಈ ಫೋನ್ 6GB ಡೈನಾಮಿಕ್ RAM ತಂತ್ರಜ್ಞಾನ, Unisoc T612 ಪ್ರೊಸೆಸರ್‌ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ 6.74 ಇಂಚಿನ ಹೆಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಈ ಫೋನ್ 5,000mAh ಬ್ಯಾಟರಿಯನ್ನು ಸಹ ಪಡೆದಿದೆ. ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ.

ರಿಯಲ್‌ಮಿ C61: 7,699 ರೂ.

ರಿಯಲ್‌ಮಿ C61 (Realme C61) ಫೋನನ್ನು ಕಳೆದ ವರ್ಷ ಜೂನ್‌ ತಿಂಗಳಲ್ಲಿ ಬಿಡುಗಡೆ ಮಾಡಲಾಯಿತು. ಇದರ ಆರಂಭಿಕ ಬೆಲೆ 7,699 ರೂ. ಆಗಿದೆ. ಈ ಮೊಬೈಲ್ 4GB RAM + 64GB ಸ್ಟೋರೇಜ್ ಆಯ್ಕೆ ಹೊಂದಿದೆ. ಈ ಫೋನಿನ 4GB RAM +1 28GB ಸ್ಟೋರೇಜ್ ರೂಪಾಂತರದ ಬೆಲೆ 8,499 ರೂ. ಮತ್ತು 6GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 8,999 ರೂ. ಆಗಿದೆ. ಈ ಸ್ಮಾರ್ಟ್‌ಫೋನ್‌ 8GB ಡೈನಾಮಿಕ್ RAM ತಂತ್ರಜ್ಞಾನ ಇದೆ. ಈ ಮೊಬೈಲ್ ಯುನಿಸಾಕ್ T612 ಪ್ರೊಸೆಸರ್‌ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 5,000mAh ಬ್ಯಾಟರಿ, 90Hz ರಿಫ್ರೆಶ್ ದರದೊಂದಿಗೆ ಹೆಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ.

ವಿವೋ Y18e: 7,999 ರೂ.

ವಿವೋ Y18e (Vivo Y18e) ಫೋನನ್ನು ಕಳೆದ ವರ್ಷ ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗಿದೆ. ಇದರ ಬೆಲೆ 7,999 ರೂ. ಆಗಿದೆ. ಇದು 4GB RAM + 64GB ಸ್ಟೋರೇಜ್ ಆಯ್ಕೆಯೊಂದಿಗೆ ಬರುತ್ತದೆ. ಈ ಫೋನ್ 4GB ವಿಸ್ತೃತ RAM ತಂತ್ರಜ್ಞಾನ ಹೊಂದಿದೆ. ಈ ಫೋನಿನ ವಿಶೇಷತೆಗಳನ್ನು ನೋಡುವುದಾದರೆ, ಈ ಮೊಬೈಲ್ ಮೀಡಿಯಾ ಟೆಕ್ ಹೆಲಿಯೊ G85 ಪ್ರೊಸೆಸರ್‌ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಈ ಫೋನಿನಲ್ಲಿ 13 ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ಮತ್ತು 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಈ ವಿವೋ ಸ್ಮಾರ್ಟ್‌ಫೋನ್ 6.56 ಇಂಚಿನ ಡಿಸ್ಪ್ಲೇ ಹೊಂದಿದೆ. ಈ ಅಗ್ಗದ ವಿವೋ ಫೋನ್ 5,000mAh ಬ್ಯಾಟರಿಯನ್ನು ಸಹ ಹೊಂದಿದೆ.

ವಿವೋ Y18i: 7,999 ರೂ.

ವಿವೋ Y18i (vivo Y18i) ಮೊಬೈಲ್ ಕಳೆದ ವರ್ಷ ಜುಲೈ ತಿಂಗಳಲ್ಲಿ ಬಿಡುಗಡೆಯಾಗಿತ್ತು. ಇದರ ಬೆಲೆ ಕೇವಲ 7,999 ರೂ. ಆಗಿದೆ. ಈ ಮೊಬೈಲ್ 4GB ವರ್ಚುವಲ್ RAM ಜೊತೆಗೆ 4GB ಭೌತಿಕ RAM ಸಹ ಹೊಂದಿದೆ. ಈ ಫೋನ್ 64GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ. ಇದು ಯುನಿಸಾಕ್ ಟೈಗರ್ T612 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ವಿವೋ ಮೊಬೈಲ್ 13 ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ಮತ್ತು 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 6.56 ಇಂಚಿನ ದೊಡ್ಡ ಡಿಸ್ಪ್ಲೇ, 5000mAh ಬ್ಯಾಟರಿಯನ್ನು ಒಳಗೊಂಡಿದೆ.

Best Mobiles in India

English summary
Best Smartphones under Rs 8,000 price range in india: Here's List Of Best Mobiles
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+