ಜಬರ್ದಸ್ತ್ ಬ್ಯಾಟರಿ ಬ್ಯಾಕ್‌ಅಪ್ ಪಡೆದಿರುವ ಅತ್ಯುತ್ತಮ ಫೋನ್‌ಗಳು!
ಸದ್ಯ ಫೋನ್ ಪ್ರತಿಯೊಬ್ಬರ ಅಗತ್ಯ ಸಾಧನವಾಗಿದ್ದು, ಅತ್ಯುತ್ತಮ ಬ್ಯಾಟರಿ ಬ್ಯಾಕ್‌ಅಪ್ ಸಹ ಅಗತ್ಯ ಎನಿಸಿದೆ. ಅಧಿಕ ಬ್ಯಾಟರಿ ಹೊಂದಿರುವ ಮೊಬೈಲ್‌ಗಳು ದೀರ್ಘಾವಧಿಯ ಬ್ಯಾಟರಿ ಬಾಳಿಕೆಯನ್ನು ನೀಡುತ್ತವೆ. ಸದ್ಯ ಬಿಡುಗಡೆ ಆಗುತ್ತಿರುವ ಬಹುತೇಕ ಫೋನ್‌ಗಳು ಅಧಿಕ ಬ್ಯಾಟರಿ ಆಯ್ಕೆಯನ್ನು ಹೊಂದಿರುವುದನ್ನು ಗಮನಿಸಬಹುದಾಗಿದೆ. ಈ ಅಧಿಕ ಬ್ಯಾಟರಿ ಫೋನ್‌ಗಳು ಬಳಕೆದಾರರಿಗೆ ಸಿನಿಮಾ ನೋಡಲು, ಗೇಮ್ ಆಡಲು, ಮ್ಯೂಸಿಕ್ ಕೇಳಲು ಹೀಗೆ ಮಲ್ಟಿಟಾಸ್ಕ್ ಕೆಲಸಗಳಿಗೆ ಪೂರಕವಾಗಿವೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಅಧಿಕ ಬ್ಯಾಟರಿ ಬ್ಯಾಕ್‌ಅಪ್ ಇರುವ ಮೊಬೈಲ್‌ಗಳಿಗೆ ಅಧಿಕ ಬೇಡಿಕೆ ಎನ್ನಬಹುದು. ಇತ್ತೀಚಿನ ನೂತನ ಸ್ಮಾರ್ಟ್‌ಫೋನ್‌ಗಳು ಮಲ್ಟಿಟಾಸ್ಕ್ ಕೆಲಸ ನಿರ್ವಹಿಸಿದರೂ ಕನಿಷ್ಠ ಒಂದು ದಿನದ ಬ್ಯಾಕ್‌ಅಪ್ ನೀಡುವ ಸಾಮರ್ಥ್ಯ ಪಡೆದಿವೆ. ಮುಖ್ಯವಾಗಿ 5,000mAh ಹಾಗೂ 6,000 mAh ಸಾಮರ್ಥ್ಯದ ಮೊಬೈಲ್‌ಗಳು ಹೆಚ್ಚು ಗಮನ ಸೆಳೆಯುತ್ತವೆ. ಹಾಗಾದರೇ ಅಧಿಕ ಬ್ಯಾಟರಿ ಬ್ಯಾಕ್‌ಅಪ್ ಪಡೆದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಸ್ಮಾರ್ಟ್‌ಫೋನ್ 6.8 ಇಂಚಿನ ಎಡ್ಜ್ QHD ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದೆ. ಇದರೊಂದಿಗೆ ಐ ಕಂಫರ್ಟ್ ಶೀಲ್ಡ್ ಸೌಲಭ್ಯ ಇದೆ. ಇನ್ನು ಈ ಫೋನ್ ಆಕ್ಟಾ ಕೋರ್ 4 nm SoC ಪ್ರೊಸೆಸರ್ ಬೆಂಬಲ ಹೊಂದಿದ್ದು, 12 GB RAM ಮತ್ತು ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿದೆ. ಹಾಗೆಯೇ ಈ ಫೋನ್ ಕ್ವಾಡ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ಈ ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, 45W ಫಾಸ್ಟ್ ಚಾರ್ಜಿಂಗ್ ಬೆಂಬಲ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ.

ಒನ್‌ಪ್ಲಸ್ 10 ಪ್ರೊ ಸ್ಮಾರ್ಟ್‌ಫೋನ್ ಫೀಚರ್ಸ್
ಒನ್‌ಪ್ಲಸ್ 10 ಪ್ರೊ ಸ್ಮಾರ್ಟ್‌ಫೋನ್ 1,440 x 3,216 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ QHD+ ಲಿಕ್ವಿಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಆಕ್ಸಿಜನ್ OS 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX789 ಸೆನ್ಸಾರ್ ಹೊಂದಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

ಆಸುಸ್ ROG ಫೋನ್ 5 ಸ್ಮಾರ್ಟ್‌ಫೋನ್ ಫೀಚರ್ಸ್
ಆಸುಸ್ ROG ಫೋನ್ 5 ಸ್ಮಾರ್ಟ್‌ಫೋನ್ 1,080 x 2,448 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888SoC ಪ್ರೊಸೆಸರ್ ಅನ್ನು ಹೊಂದಿದ್ದು, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸಾಮರ್ಥ್ಯದಲ್ಲಿದೆ. ಇದು 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ರೆಡ್ಮಿ ನೋಟ್ 11 ಪ್ರೊ+ ಸ್ಮಾರ್ಟ್‌ಫೋನ್ ಫೀಚರ್ಸ್
ಈ ಫೋನ್ 6.67 ಇಂಚಿನ FHD+ ಡಿಸ್‌ಪ್ಲೇ ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಆಯ್ಕ ಪಡೆದುಕೊಂಡಿದೆ. ಹಾಗೆಯೇ ಈ ಡಿಸ್‌ಪ್ಲೇ 1080x2400 ಪಿಕ್ಸೆಲ್ ರೆಸಲ್ಯೂಶನ್ ನೀಡಲಿದ್ದು, 120Hz ರಿಫ್ರೆಶ್ ರೇಟ್ ಹೊಂದಿದೆ. ಈ ಫೋನ್‌ನಲ್ಲಿ ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 ಪ್ರೊಸೆಸರ್ ಅಳವಡಿಸಲಾಗಿದ್ದು, ಉತ್ತಮ ಕಾರ್ಯಕ್ಷಮತೆ ಇರಲಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಹೊಂದಿದ್ದು, ಇದರಲ್ಲಿ 108MP ಮುಖ್ಯ ಕ್ಯಾಮೆರಾ ಹೊಂದಿದೆ. ಈ ಸ್ಮಾರ್ಟ್‌ಫೋನ್ 67W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿಯಿಂದ ಪ್ಯಾಕ್ ಆಗಿದೆ


Click it and Unblock the Notifications








