ಕೇವಲ 6,999 ರೂ.! ಅಗ್ಗದ ಬೆಲೆಗೆ 50MP ಕ್ಯಾಮೆರಾ ಫೋನ್‌ಗಳು ಸೇಲ್.. ಫ್ಲಿಪ್‌ಕಾರ್ಟ್‌ನಲ್ಲಿ ಮಾತ್ರ
ನೀವು 8000 ರೂ.ಗಿಂತ ಕಡಿಮೆ ಬೆಲೆಯಲ್ಲಿ ಹೊಸ ಸ್ಮಾರ್ಟ್‌ಫೋನ್ ಹುಡುಕುತ್ತಿದ್ದೀರಾ? ಅದರಲ್ಲೂ 50MP ಕ್ಯಾಮೆರಾ ಹೊಂದಿರುವ ಮೊಬೈಲ್‌ಗಳೇ ನಿಮಗೆ ಬೇಕಾ? ಹಾಗಿದ್ರೆ, ನೀವು ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ 2025 (Flipkart Big Saving Days Sale 2025) ಮಿಸ್ ಮಾಡಿಕೊಳ್ಳಬೇಡಿ. ಹೌದು, ಈ ಸೇಲ್ ಮಾರ್ಚ್ 13 ರವರೆಗೆ ನಡೆಯಲಿದೆ. ಈ ಮಾರಾಟದ ಭಾಗವಾಗಿ, ಹಲವು ವರ್ಗಗಳ ಉತ್ಪನ್ನಗಳನ್ನು ರಿಯಾಯಿತಿ ದರದಲ್ಲಿ ಖರೀದಿಸಬಹುದು. ನೀವು ಸ್ಮಾರ್ಟ್‌ಫೋನ್‌ಗಳು, ಸ್ಮಾರ್ಟ್ ಟಿವಿಗಳು, ಇಯರ್‌ಬಡ್‌ಗಳು, ಟ್ಯಾಬ್ಲೆಟ್‌ಗಳು, ಲ್ಯಾಪ್‌ಟಾಪ್‌ಗಳು, ಎಸಿಗಳು, ಕೂಲರ್‌ಗಳು ಮತ್ತು ಇತರೆ ಗೃಹೋಪಯೋಗಿ ಉಪಕರಣಗಳನ್ನು ಕಡಿಮೆ ಬೆಲೆಗೆ ಖರೀದಿಸಬಹುದು.
ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ ಹೊಸದಾಗಿ ಬಿಡುಗಡೆಯಾದ ಸ್ಮಾರ್ಟ್‌ಫೋನ್‌ಗಳನ್ನು ಸಹ ರಿಯಾಯಿತಿ ದರದಲ್ಲಿ ಖರೀದಿಸಬಹುದು. ನೀವು ಹೆಚ್‌ಡಿಎಫ್‌ಸಿ ಬ್ಯಾಂಕ್ ಕಾರ್ಡ್‌ಗಳ ಮೇಲೆ ಗರಿಷ್ಠ ಶೇ.10 ರಷ್ಟು ಡಿಸ್ಕೌಂಟ್ ಪಡೆಯಬಹುದು. ಹೆಚ್ಚುವರಿಯಾಗಿ, ಫ್ಲಿಪ್‌ಕಾರ್ಟ್ ಆಕ್ಸೆಸ್ ಬ್ಯಾಂಕ್ ಕಾರ್ಡ್ ಪಾವತಿ ಮೇಲೆ ನೀವು. ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಸಹ ಪಡೆಯಬಹುದು. ಇದರ ಜೊತೆಗೆ, ಹಳೆಯ ವಸ್ತುಗಳನ್ನು ಎಕ್ಸ್‌ಚೇಂಜ್ ಮಾಡಿಕೊಳ್ಳಲು ಅವಕಾಶವಿದೆ. ಈ ಸೇಲ್‌ನಲ್ಲಿ 8000 ರೂ.ಗಿಂತ ಕಡಿಮೆ ಬೆಲೆಯಲ್ಲಿ 50MP ಪ್ರಾಥಮಿಕ ಕ್ಯಾಮೆರಾ ಹೊಂದಿರುವ ಸ್ಮಾರ್ಟ್‌ಫೋನ್‌ಗಳಿವೆ. ಫ್ಲಿಪ್‌ಕಾರ್ಟ್‌ನಲ್ಲಿ ಲಭ್ಯವಿರುವ ಈ ಫೋನ್‌ಗಳ (Best Smartphones with 50MP Camera under Rs 8000) ಸಂಪೂರ್ಣ ವಿವರ ಇಲ್ಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F05: 6,249 ರೂ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F05 (Samsung Galaxy F05) ಫೋನಿನ 4GB RAM + 64GB ಸ್ಟೋರೇಜ್ ರೂಪಾಂತರವು 6,249 ರೂ.ಗೆ ಮಾರಾಟವಾಗುತ್ತಿದೆ. ಈ ಫೋನ್ 6.7 ಇಂಚಿನ ಹೆಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಈ ಮೊಬೈಲ್ ಅಗ್ಗದ ಬೆಲೆಗೆ ಲಭ್ಯವಿದೆ. ಆದರೆ, ಇದು ಪ್ರೀಮಿಯಂ ಲುಕ್ ಹೊಂದಿದೆ. ಈ ಫೋನಿನಲ್ಲಿ 5000mAh ಬ್ಯಾಟರಿ ಅಳವಡಿಸಲಾಗಿದೆ. ಇದು 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಮೊಬೈಲ್ ಮೀಡಿಯಾ ಟೆಕ್ ಹೆಲಿಯೊ G85 ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 14 ಆಧಾರಿತ ಒನ್ ಯುಐ 5 ಓಎಸ್ ಜೊತೆಗೆ ಕೆಲಸ ನಿರ್ವಹಿಸುತ್ತದೆ. ಈ ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು 50MP ಮುಖ್ಯ ಕ್ಯಾಮೆರಾ, 2MP ದ್ವಿತೀಯ ಕ್ಯಾಮೆರಾ ಮತ್ತು 8MP ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.
ಮೋಟೋ G05: 6,999 ರೂ.
ಮೋಟೋ G05 (Motorola G05) ಫೋನಿನ 4GB RAM + 64GB ಸ್ಟೋರೇಜ್ ರೂಪಾಂತರದ ಬೆಲೆ 6,999 ರೂ. ಆಗಿದೆ. ಫ್ಲಿಪ್‌ಕಾರ್ಟ್ ಆಕ್ಸೆಸ್ ಬ್ಯಾಂಕ್ ಕಾರ್ಡ್‌ಗಳೊಂದಿಗೆ ನೀವು ಶೇ.5 ರಷ್ಟು ರಿಯಾಯಿತಿ ಪಡೆಯಬಹುದು. ಈ ಫೋನ್ 6.67 ಇಂಚಿನ ಹೆಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಈ ಡಿಸ್ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಪಡೆದಿದೆ.
ಮೋಟೋ G05 ಮೊಬೈಲ್ ಮೀಡಿಯಾ ಟೆಕ್ ಹೆಲಿಯೊ G81 ಎಕ್ಸ್‌ಟ್ರೀಮ್ ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 15 ಆಧಾರಿತ ಹಲೋ ಯುಐ ಓಎಸ್ ಜೊತೆಗೆ ಕೆಲಸ ಮಾಡುತ್ತದೆ. ಈ ಮೊಬೈಲ್ ಕ್ವಾಡ್ ಪಿಕ್ಸೆಲ್ ತಂತ್ರಜ್ಞಾನದೊಂದಿಗೆ 50MP ಪ್ರಾಥಮಿಕ ಮತ್ತು 8MP ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಈ ಫೋನ್ 5200mAh ಬ್ಯಾಟರಿ ಹೊಂದಿದೆ. ಇದರೊಂದಿಗೆ 18W ವೈರ್ಡ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ನೀವು ಪ್ಲಮ್ ರೆಡ್, ಫಾರೆಸ್ಟ್ ಗ್ರೀನ್ ಬಣ್ಣಗಳಲ್ಲಿ ಈ ಫೋನನ್ನು ಖರೀದಿಸಬಹುದು.
ಪೊಕೊ C75 5G: 7,999 ರೂ.
ಪೊಕೊ C75 5G (Poco C75 5G) ಮೊಬೈಲ್ 4GB RAM + 64GB ಸ್ಟೋರೇಜ್ ರೂಪಾಂತರದಲ್ಲಿ ಮಾರಾಟವಾಗುತ್ತಿದೆ. ಇದರ ಬೆಲೆ 7,999 ರೂ. ಆಗಿದೆ. ಈ ಫೋನಿನಲ್ಲಿ ದೊಡ್ಡ ಡಿಸ್ಪ್ಲೇ ಮತ್ತು 50MP ಮುಖ್ಯ ಕ್ಯಾಮೆರಾ ಲಭ್ಯವಿದೆ. ಈ ಮೊಬೈಲ್ 6.88 ಇಂಚಿನ ಹೆಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು 5160mAh ಬ್ಯಾಟರಿ ಹೊಂದಿದ್ದು, ಇದಕ್ಕೆ ಪೂರಕವಾಗಿ 18W ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಪೊಕೊ C75 5G ಮೊಬೈಲ್ ಸ್ನಾಪ್‌ಡ್ರಾಗನ್ 4s ಜೆನ್ 2 ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 14 ಆಧಾರಿತ ಹೈಪರ್ ಓಎಸ್‌ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಈ ಫೋನಿನ ಕ್ಯಾಮೆರಾ ಬಗ್ಗೆ ಹೇಳುವುದಾದರೆ, ಇದು 50MP ಕ್ಯಾಮೆರಾ ಜೊತೆಗೆ ಮತ್ತೊಂದು ಸೆಕೆಂಡರಿ ಲೆನ್ಸ್ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 5MP ಫ್ರಂಟ್ ಕ್ಯಾಮೆರಾ ಸಹ ಲಭ್ಯವಿದೆ.


Click it and Unblock the Notifications








