ಈ ಫೋನ್‌ಗಳು ಬಜೆಟ್‌ ಬೆಲೆಗೆ ಲಭ್ಯ!..ಜೊತೆಗೆ ಜಬರ್ದಸ್ತ್ ಬ್ಯಾಟರಿ ಬ್ಯಾಕ್‌ಅಪ್‌!

|

ಪ್ರತಿ ಫೋನಿಗೂ ಅತ್ಯುತ್ತಮ ಬ್ಯಾಟರಿ ಬ್ಯಾಕ್‌ಅಪ್‌ ಅಗತ್ಯ. ಹೆಚ್ಚಿನ ಬ್ಯಾಟರಿ ಹೊಂದಿರುವ ಸ್ಮಾರ್ಟ್‌ಫೋನ್‌ಗಳು ದೀರ್ಘಾವಧಿಯ ಬ್ಯಾಟರಿ ಬಾಳಿಕೆಯನ್ನು ನೀಡುತ್ತವೆ. ಸದ್ಯ ಬಿಡುಗಡೆ ಆಗುತ್ತಿರುವ ಬಹುತೇಕ ಫೋನ್‌ಗಳು ಅಧಿಕ ಬ್ಯಾಟರಿ ಆಯ್ಕೆಯನ್ನು ಹೊಂದಿರುವುದನ್ನು ಗಮನಿಸಬಹುದಾಗಿದೆ. ಈ ಅಧಿಕ ಬ್ಯಾಟರಿ ಫೋನ್‌ಗಳು ಬಳಕೆದಾರರಿಗೆ ಸಿನಿಮಾ ನೋಡಲು, ಗೇಮ್ ಆಡಲು, ಮ್ಯೂಸಿಕ್ ಕೇಳಲು ಹೀಗೆ ಮಲ್ಟಿಟಾಸ್ಕ್‌ ಕೆಲಸಗಳಿಗೆ ಪೂರಕವಾಗಿವೆ.

ಮಾರುಕಟ್ಟೆಯಲ್ಲಿ

ಭಾರತದ ಮೊಬೈಲ್‌ ಮಾರುಕಟ್ಟೆಯಲ್ಲಿ ಅಧಿಕ ಬ್ಯಾಟರಿ ಬ್ಯಾಕ್‌ಅಪ್‌ ಫೋನ್‌ಗಳಿಗೆ ಬೇಡಿಕೆ ಹೆಚ್ಚು ಎನ್ನಬಹುದು. ಇತ್ತೀಚಿನ ಮೊಬೈಲ್‌ಗಳು ಮಲ್ಟಿಟಾಸ್ಕ್‌ ಕೆಲಸ ನಿರ್ವಹಿಸಿದರೂ ಕನಿಷ್ಠ ಒಂದು ದಿನದ ಬ್ಯಾಕ್‌ಅಪ್‌ ನೀಡುತ್ತವೆ. ಮುಖ್ಯವಾಗಿ 6,000 mAh ಸಾಮರ್ಥ್ಯದ ಮೊಬೈಲ್‌ಗಳು ಹೆಚ್ಚು ಗಮನ ಸೆಳೆಯುತ್ತವೆ. ಹಾಗಾದರೇ ಸದ್ಯ ಬಜೆಟ್ ಬೆಲೆಯಲ್ಲಿ ಅಧಿಕ ಬ್ಯಾಟರಿ ಬ್ಯಾಕ್‌ಅಪ್‌ ಪಡೆದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಸ್ಮಾರ್ಟ್‌ ಫೋನ್‌ ಆಕ್ಟಾ ಕೋರ್‌ ಎಕ್ಸಿನೋಸ್‌ 850SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್‌ ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM + 64 GB ಮತ್ತು 6GB RAM + 128 GB ವೇರಿಯೆಂಟ್‌ ಆಯ್ಕೆಯ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ವನ್ನು ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಈ ಸ್ಮಾರ್ಟ್‌ ಫೋನ್‌ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಟೆಕ್ನೋ ಸ್ಮಾರ್ಕ್‌ 7 ಸ್ಮಾರ್ಟ್‌ಫೋನ್‌

ಟೆಕ್ನೋ ಸ್ಮಾರ್ಕ್‌ 7 ಸ್ಮಾರ್ಟ್‌ಫೋನ್‌

ಟೆಕ್ನೋ ಸ್ಪಾರ್ಕ್ 7 ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. 2GB RAM ರೂಪಾಂತರವು ಕ್ವಾಡ್-ಕೋರ್ ಮೀಡಿಯಾ ಟೆಕ್ ಹಿಲಿಯೊ A20 SoC ಹೊಂದಿದ್ದರೆ, 3 GB RAM ರೂಪಾಂತರವು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ A25 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಾರ್ಯ ನಿರ್ವಹಿಸಲಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಈ ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಪೊಕೊ M3 ಫೋನ್

ಪೊಕೊ M3 ಫೋನ್

ಈ ಸ್ಮಾರ್ಟ್‌ಫೋನ್‌ 1,080 x 2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 19.5:9 ರಚನೆಯ ಅನುಪಾತವನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಇದು ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ MIUI 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರ 6 GB RAM + 64 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಪಡೆದಿದೆ. ಪೊಕೊ M3 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಆಗಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಸ್ಮಾರ್ಟ್‌ ಫೋನ್ 2400 x 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಇನ್ಫಿನಿಟಿ ಯು ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 6GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ.

ಸೆನ್ಸಾರ್‌

ಈ ಸ್ಮಾರ್ಟ್‌ಫೋನ್‌ ಕ್ವಾಡ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 6,000 mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ತಂತ್ರಜ್ಞಾನ ವನ್ನು ಬೆಂಬಲಿಸುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M21 2021 ಫೋನ್

ಸ್ಯಾಮ್‌ಸಂಗ್ ಗ್ಯಾಲಕ್ಸಿ M21 2021 ಫೋನ್

ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್‌ 1080 x 2340 ಪಿಕ್ಸಲ್‌ ರೆಸಲ್ಯೂಶನ್‌ ಹೊಂದಿರುವ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಜೊತೆಗೆ ಇನ್‌ಫಿನಿಟಿ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ ಕೋರ್ exynos 9611 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಎರಡು ವೇರಿಯಂಟ್ ಆಯ್ಕೆಗಳಿದ್ದು, ಅವುಗಳು ಕ್ರಮವಾಗಿ 4GB RAM + 64 GB ಸ್ಟೋರೇಜ್ ಮತ್ತು 6GB RAM + 128 GB ಸಾಮರ್ಥ್ಯ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ತ್ರಿವಳಿ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಈ ಸ್ಮಾರ್ಟ್‌ಫೋನ್‌ 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 15W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ.

Best Mobiles in India

English summary
Best Smartphones with Big Battery Backup (July 2022).

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X