Home
ಮೊಬೈಲ್

smartphones: ವಾಟರ್‌ಪ್ರೂಫ್‌ ಸೌಲಭ್ಯ ಇರುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳಿವು!

ಸ್ಮಾರ್ಟ್‌ಫೋನ್‌ಗಳನ್ನು (Smartphones) ಖರೀದಿ ಮಾಡುವಾಗ ಸಾಮಾನ್ಯವಾಗಿ ಬ್ಯಾಟರಿ, ಕ್ಯಾಮೆರಾ ಹಾಗೂ ಬೆಲೆ ಸೇರಿದಂತೆ ಅಗತ್ಯ ವಿವರವನ್ನು ನೋಡುವುದು ಸಹಜ. ಆದರೆ, ಇತ್ತೀಚಿನ ದಿನಗಳಲ್ಲಿ ವಾಟರ್‌ಪ್ರೂಫ್‌ ಫೀಚರ್ಸ್ (Waterproof features)‌ ಬಗ್ಗೆಯೂ ಖರೀದಿದಾರರು ಗಮನಹರಿಸುತ್ತಿದ್ದಾರೆ.

ಹೌದು, ಸಾಮಾನ್ಯವಾಗಿ ಸ್ಮಾರ್ಟ್‌ಫೋನ್‌ಗಳು ನೀರಿಗೆ ಬಿದ್ದು ಹಾಳಾಗುವ ಹೆಚ್ಚಿನ ಘಟನೆಗಳನ್ನು ನಾವು ನೋಡಿರಬಹುದು. ಈ ಕಾರಣಕ್ಕೆ ಇದೀಗ ಸ್ಮಾರ್ಟ್‌ಫೋನ್‌ ತಯಾರಿಕಾ ಕಂಪೆನಿಗಳು ವಾಟರ್‌ಪ್ರೂಫ್‌ ಸೌಲಭ್ಯದೊಂದಿಗೆ ಫೋನ್‌ಗಳನ್ನು ಲಾಂಚ್‌ ಮಾಡುತ್ತಿದ್ದು, ಈ ವಿಭಾಗದಲ್ಲಿ ಪೊಕೊ, ಶಿಯೋಮಿ, ವಿವೋ (Poco, Xiaomi, Vivo) ಸೇರಿದಂತೆ ಸಾಕಷ್ಟು ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳನ್ನು ನಾವು ನೋಡಬಹುದು. ಹಾಗಿದ್ರೆ, ತಡಯಾಕೆ ಬನ್ನಿ 25 ಸಾವಿರದ ಒಳಗೆ ಲಭ್ಯ ಇರುವ ಅತ್ಯುತ್ತಮ ವಾಟರ್‌ಪ್ರೂಫ್‌ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೋದನ್ನು ನೋಡೋಣ.

ವಾಟರ್‌ಪ್ರೂಫ್‌ ಸೌಲಭ್ಯ ಇರುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳಿವು!

ಶಿಯೋಮಿ ರೆಡ್ಮಿ ನೋಟ್‌ 10S: ಈ ಸ್ಮಾರ್ಟ್‌ಫೋನ್‌ (Xiaomi Redmi Note 10S) ಅನ್ನು ನೀವು 18,499 ರೂ.ಗಳ ದರದಲ್ಲಿ ಖರೀದಿ ಮಾಡಬಹುದಾಗಿದೆ. ಇದು 6.43 ಇಂಚಿನ FHD+ ಅಮೋಲೆಡ್‌ ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, 60 Hz ರಿಫ್ರೆಶ್ ರೇಟ್‌ ಆಯ್ಕೆ ಪಡೆದಿದೆ. ಇದರ ಜೊತೆಗೆ ಮೀಡಿಯಾ ಟೆಕ್ ಹಿಲಿಯೊ G95 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, 64 + 8 + 2 + 2 MP ಕ್ವಾಡ್ ರಿಯರ್‌ ಕ್ಯಾಮೆರಾ ಹಾಗೂ 13 MP ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಹಾಗೆಯೇ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಇದರಲ್ಲಿ ಕಾಣಬಹುದು.

ಪೊಕೊ X4 ಪ್ರೊ: ಈ ಸ್ಮಾರ್ಟ್‌ಫೋನ್‌ (Poco X4 Pro) ಅನ್ನು ನೀವು 18,74 ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಈ ಸ್ಮಾರ್ಟ್‌ಫೋನ್‌ 6.67 ಇಂಚಿನ FHD+ ಅಮೋಲೆಡ್‌ ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, 120 Hz ರಿಫ್ರೆಶ್ ರೇಟ್‌ ಹೊಂದಿದೆ. ಇದರ ಜೊತೆಗೆ ಸ್ನಾಪ್‌ಡ್ರಾಗನ್ 695 ಪ್ರೊಸೆಸರ್‌ ಬಲ ಹಾಗೂ 8 GB RAM ನೊಂದಿಗೆ ಈ ಫೋನ್ ಕಾಣಿಸಿಕೊಂಡಿದೆ. ಹಾಗೆಯೇ 64 MP + 8 MP + 2 MP ಟ್ರಿಪಲ್ ರಿಯರ್‌ ಕ್ಯಾಮೆರಾ, 16 MP ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ.

ವಾಟರ್‌ಪ್ರೂಫ್‌ ಸೌಲಭ್ಯ ಇರುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳಿವು!

ಶಿಯೋಮಿ ರೆಡ್ಮಿ ನೋಟ್‌ 10 ಪ್ರೊ ಮ್ಯಾಕ್ಸ್‌: ಈ ಫೋನ್‌ (Xiaomi Redmi Note 10 Pro Max) ಅನ್ನು 18,820 ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಈ ಫೋನ್ 6.67 ಇಂಚಿನ FHD+ ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, 120 Hz ರಿಫ್ರೆಶ್ ರೇಟ್‌ ಆಯ್ಕೆ ಹೊಂದಿದೆ. ಇದರ ಜೊತೆಗೆ ಸ್ನಾಪ್‌ಡ್ರಾಗನ್ 732G ಪ್ರೊಸೆಸರ್‌ ಬಲ ಪಡೆದಿದ್ದು, 108 + 8 + 5 + 2 MP ಕ್ವಾಡ್ ರಿಯರ್‌ ಕ್ಯಾಮೆರಾ ಮತ್ತು 16 MP ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.

ವಿವೋ Y200e 5G: ಈ ಸ್ಮಾರ್ಟ್‌ಫೋನ್‌ (Vivo Y200e 5G) 19,990 ರೂ.ಗಳ ಬೆಲೆ ಹೊಂದಿದ್ದು, 6.67 ಇಂಚಿನ FHD+ ಅಮೋಲೆಡ್‌ ಹಾಗೂ 120 Hz ರಿಫ್ರೆಶ್ ರೇಟ್‌ ಆಯ್ಕೆಯ ಡಿಸ್‌ಪ್ಲೇ ಹೊಂದಿದೆ. ಇದರ ಜೊತೆಗೆ ಸ್ನಾಪ್‌ಡ್ರಾಗನ್ 4 ಜನ್ 2 ಪ್ರೊಸೆಸರ್‌ ಬಲ ಪಡೆದಿದ್ದು, 8 GB RAM ಆಯ್ಕೆ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸಲಿದೆ. ಇದರ ಜೊತೆಗೆ 50 MP + 2 MP ನೊಂದಿಗೆ ಟ್ರಿಪಲ್ ರಿಯರ್‌ ಕ್ಯಾಮೆರಾ, 16 MP ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದಿದ್ದು, 5000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

ಮೊಟೊ G82: ಈ ಫೋನ್ (Moto G82) 23,999 ರೂ.ಗಳ ಬೆಲೆ ಹೊಂದಿದ್ದು, 6.6 ಇಂಚಿನ FHD+ P-OLED ಡಿಸ್‌ಪ್ಲೇ ಆಯ್ಕೆ ಪಡೆದಿದೆ. ಇದರ ಜೊತೆಗೆ 120 Hz ರಿಫ್ರೆಶ್ ರೇಟ್‌ ಆಯ್ಕೆ ಪಡೆದಿಕೊಂಡಿದೆ. ಇದರ ಜೊತೆಗೆ ಸ್ನಾಪ್‌ಡ್ರಾಗನ್ 695 ಪ್ರೊಸೆಸರ್‌ ಕಾರ್ಯಕ್ಷಮತೆ 50 MP + 8 MP + 2 MP ಟ್ರಿಪಲ್ ರಿಯರ್‌ ಕ್ಯಾಮೆರಾ ಆಯ್ಕೆ ಮತ್ತು 16 MP ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಇದರ ಜೊತೆಗೆ ಈ ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

ವಾಟರ್‌ಪ್ರೂಫ್‌ ಸೌಲಭ್ಯ ಇರುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳಿವು!

ಒಪ್ಪೋ F21 ಪ್ರೊ 5G: ಈ ಸ್ಮಾರ್ಟ್‌ಫೋನ್ (Oppo F21 Pro 5G) 23,999 ರೂ.ಗಳ ಬೆಲೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.43 ಇಂಚಿನ FHD+ ಅಮೋಲೆಡ್‌ ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, 60 Hz ರಿಫ್ರೆಶ್ ರೇಟ್‌ ಆಯ್ಕೆ ಪಡೆದುಕೊಂಡಿದೆ. ಇದರ ಜೊತೆಗೆ ಸ್ನಾಪ್‌ಡ್ರಾಗನ್ 695 ಪ್ರೊಸೆಸರ್‌ 8 GB RAM ಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಅಲ್ಲದೆ ಈ ಫೋನ್ 64 MP + 2 MP + 2 MP ಟ್ರಿಪಲ್ ರಿಯರ್‌ ಕ್ಯಾಮೆರಾ ಹಾಗೂ 16 MP ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಇದರೊಂದಿಗೆ 4500 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, ಸೂಪರ್ ವೂಕ್‌ ಚಾರ್ಜಿಂಗ್ ಬೆಂಬಲ ಪಡೆದಿದೆ.

Best Mobiles in India

English summary
There is a huge demand for waterproof smartphones. Accordingly, these Xiaomi Redmi Note 10S, Poco X4 Pro, Xiaomi Redmi Note 10 Pro Max, Vivo Y200e 5G, Moto G82, oppo F21 Pro 5G smartphones have got these features.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+