ಬಜೆಟ್ ಬೆಲೆಯಲ್ಲಿ ವೇಗದ ಚಾರ್ಜಿಂಗ್ ಸೌಲಭ್ಯ ಹೊಂದಿರುವ ಬೆಸ್ಟ್ ಫೋನ್‌ಗಳು!
ಪ್ರಸ್ತುತ ಸ್ಮಾರ್ಟ್‌ಫೋನ್ ಎಲ್ಲರಿಗೂ ಅನಿವಾರ್ಯ ಹಾಗೂ ಅಗತ್ಯ ಡಿವೈಸ್ ಎನ್ನುವುದು ನಿಮಗೆ ತಿಳಿದಿರುವ ಸಂಗತಿಯೇ ಆಗಿದೆ. ಆದರೆ ಮೊಬೈಲ್ ಖರೀದಿಸುವಾಗ ಗ್ರಾಹಕರು ಅಧಿಕ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಇರುವ ಫೋನ್‌ಗಳನ್ನು ಆಯ್ಕೆ ಮಾಡುತ್ತಾರೆ. ಇನ್ನು ಬಿಗ್ ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿರುವ ಮೊಬೈಲ್‌ಗಳಿಗೆ ಬೇಡಿಕೆ ಅಧಿಕ. ಇತ್ತೀಚಿನ ಹಲವು ಬಜೆಟ್ ಪ್ರೈಸ್ ಟ್ಯಾಗ್‌ನ ಫೋನ್‌ಗಳು ಕೂಡಾ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದ್ದು, ಗ್ರಾಹಕರನ್ನು ತಮ್ಮತ್ತ ಸೆಳೆಯುತ್ತಿವೆ.
ಹೌದು, ಹೆಚ್ಚಿನ ಬ್ಯಾಟರಿ ಬ್ಯಾಕ್‌ಅಪ್ ಪಡೆದಿರುವ ಫೋನ್‌ಗಳ ಜೊತೆಗೆ ಫಾಸ್ಟ್ ಚಾರ್ಜಿಂಗ್ ಸೌಲಭ್ಯದ ಫೋನ್‌ಗಳು ಗ್ರಾಹಕರಿಗೆ ಉಪಯುಕ್ತ ಎನಿಸಿವೆ. ಈ ನಿಟ್ಟಿನಲ್ಲಿ ಬಹುತೇಕ ಸಂಸ್ಥೆಗಳು ಬಜೆಟ್ ದರದಲ್ಲಿ ಫಾಸ್ಟ್ ಚಾರ್ಜಿಂಗ್ ಇರುವ ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿವೆ. ಇತ್ತೀಚಿನ ಹಲವು ಫೋನ್‌ಗಳಲ್ಲಿ ಫ್ಲ್ಯಾಶ್ ಚಾರ್ಜಿಂಗ್, ಸೂಪರ್‌ವೂಕ್ ಚಾರ್ಜಿಂಗ್, ಟರ್ಬೋ ಚಾರ್ಜಿಂಗ್ ಆಯ್ಕೆಗಳನ್ನು ಕಾಣಬಹುದಾಗಿದೆ. ಹಾಗಾದರೇ ಫಾಸ್ಟ್ ಚಾರ್ಜಿಂಗ್ ಸೌಲಭ್ಯದ ಕೆಲವು ಬೆಸ್ಟ್ ಫೋನ್‌ಗಳ ಬಗ್ಗೆ ಇಲ್ಲಿದೆ ಮಾಹಿತಿ.

ವಿವೋ T3 5G
ವಿವೋ T3 5G ಈ ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದಕ್ಕೆ ಅನುಗುಣವಾಗಿ 44W ಫಾಸ್ಟ್ ಚಾರ್ಜಿಂಗ್ ಬೆಂಬಲ ಪಡೆದುಕೊಂಡಿದೆ. ಇನ್ನು ಈ ಫೋನ್ 6.67 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ.
ಹಾಗೆಯೇ ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7200 4nm ಪ್ರೊಸೆಸರ್ ಬಲದಲ್ಲಿ ಕೆಲಸ ನಿರ್ವಹಿಸಲಿದ್ದು. ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಬೆಂಬಲ ಕೂಡಾ ಪಡೆದಿದೆ. ಇದರೊಂದಿಗೆ ಈ ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ.
ರಿಯಲ್‌ಮಿ ನಾರ್ಜೋ 70 ಪ್ರೊ 5G
ರಿಯಲ್‌ಮಿ ನಾರ್ಜೋ 70 ಪ್ರೊ 5G ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆಯನ್ನು ಒದಗಿಸಿದ್ದು, ಇದಕ್ಕೆ ಅನುಗುಣವಾಗಿ 67W SUPERVOOC ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಲಾಗಿದೆ. ಇನ್ನು ಇದು 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ OLED ಡಿಸ್‌ಪ್ಲೇ ಅನ್ನು ಹೊಂದಿದ್ದು, ಹಾಗೆಯೇ ಈ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಸಹ ಪಡೆದಿದೆ.
ಹಾಗೆಯೇ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಬೆಂಬಲ ಇದೆ. ಅಲ್ಲದೇ ಈ ಫೋನ್ ಹಿಂಭಾಗದಲ್ಲಿ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಅಪ್ ಇದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸಾಮರ್ಥ್ಯದಲ್ಲಿ ಇದೆ.
ರಿಯಲ್‌ಮಿ 12X 5G ಫೋನ್
ರಿಯಲ್‌ಮಿ 12X 5G ಮೊಬೈಲ್ 5000 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ 45W SuperVOOC ಚಾರ್ಜಿಂಗ್ ಸಪೋರ್ಟ್ ಪಡೆದಿದೆ. ಇನ್ನು ಈ ಫೋನ್ 6.72 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಸೆಟ್‌ಅಪ್ ಪಡೆದಿದ್ದು, ಹಾಗೆಯೇ 1080x2400 ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಒಳಗೊಂಡಿದೆ. ಅಲ್ಲದೇ ಇದು 120Hz ರಿಫ್ರೆಶ್ ರೇಟ್ ಹೊಂದಿದೆ.
ಹಾಗೆಯೇ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್ ಸಾಮರ್ಥ್ಯವನ್ನು ಇದು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಬೆಂಬಲ ಕೂಡಾ ಪಡೆದಿದೆ. ಇದರೊಂದಿಗೆ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇನ್ನು ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ.


Click it and Unblock the Notifications








