256GB ಸ್ಟೋರೇಜ್ ಇರುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ಲಿಸ್ಟ್ ಇಲ್ಲಿದೆ ನೋಡಿ!
ಇಂದಿನ ದಿನಗಳಲ್ಲಿ ಸ್ಮಾರ್ಟ್‌ಫೋನ್ ಪ್ರತಿಯೊಬ್ಬರ ಅಗತ್ಯ ಡಿವೈಸ್ ಎನ್ನುವುದರಲ್ಲಿ ಎರಡು ಮಾತಿಲ್ಲ. ಅನೇಕ ಆನ್‌ಲೈನ್ ಕೆಲಸಗಳು ಮೊಬೈಲ್ ಮೂಲಕವೇ ನಡೆಯುತ್ತವೆ ಅಲ್ಲದೇ ಅನೇಕ ದಾಖಲೆಗಳು ಫೋನಿನಲ್ಲೇ ಸಂಗ್ರಹ ಮಾಡಿಕೊಂಡಿರುತ್ತಾರೆ. ಈ ನಿಟ್ಟಿನಲ್ಲಿ ಅನೇಕ ಗ್ರಾಹಕರು ಅಧಿಕ ಸ್ಟೋರೇಜ್ ಫೀಚರ್ ಇರುವ ಸ್ಮಾರ್ಟ್ ಫೋನ್‌ಗಳನ್ನು ಖರೀದಿಸಲು ಮುಂದಾಗುತ್ತಾರೆ. ಹೀಗಾಗಿ ಪ್ರಮುಖ ಮೊಬೈಲ್ ಸಂಸ್ಥೆಗಳು ಸಹ ಹೆಚ್ಚಿನ ಆಂತರೀಕ ಸ್ಟೋರೇಜ್ ಸಾಮರ್ಥ್ಯದ ವೇರಿಯಂಟ್ ಆಯ್ಕೆಗಳನ್ನು ಪರಿಚಯಿಸುತ್ತ ಮುನ್ನಡೆದಿವೆ. ಅವುಗಳ ಪೈಕಿ 256GB ಹೆಚ್ಚು ಡಿಮ್ಯಾಂಡ್ ಪಡೆದಿದೆ.
ಅಧಿಕ ಸ್ಟೋರೇಜ್ ಸೌಲಭ್ಯ ಒಳಗೊಂಡಿರುವ ಸ್ಮಾರ್ಟ್‌ಫೋನ್‌ಗಳು ಹೆಚ್ಚಿನ ಫೋಟೋ, ವಿಡಿಯೋ ಹಾಗೂ ಇತರೆ ದಾಖಲೆಗಳನ್ನು ಸಂಗ್ರಹ ಮಾಡಲು ಬಳಕೆದಾರರಿಗೆ ನೆರವಾಗುತ್ತವೆ. ಕಡಿಮೆ ಸ್ಟೋರೇಜ್ ಇದ್ದರೆ, ಬಹುಬೇಗನೆ ಭರ್ತಿಯಾಗಿ ಫೋನ್ ಕಾರ್ಯವೈಖರಿಯು ನಿಧಾನವಾಗುವ ಸಾಧ್ಯತೆಗಳು ಇರುತ್ತವೆ. ಅಲ್ಲದೇ ಫೋನ್ ಸ್ಟೋರೇಜ್ ಫುಲ್ ಆಗಿ, ಕೆಲವು ಫೈಲ್‌ಗಳನ್ನು ಡಿಲೀಟ್ ಮಾಡಬೇಕಾಗಿ ಬರುತ್ತದೆ. ಈ ಲೇಖನದಲ್ಲಿ 256GB ಸ್ಟೋರೇಜ್ ಸಾಮರ್ಥ್ಯದ ಫೋನ್‌ಗಳ ಲಿಸ್ಟ್ ನೀಡಲಾಗಿದೆ ಒಮ್ಮೆ ಗಮನಿಸಿ.

ಮೊಟೊರೊಲಾ ಎಡ್ಜ್ 50 ಫ್ಯೂಜನ್ ಸ್ಮಾರ್ಟ್‌ಫೋನ್
ಮೊಟೊರೊಲಾ ಎಡ್ಜ್ 50 ಫ್ಯೂಜನ್ ಮೊಬೈಲ್ 6.7 ಇಂಚಿನ 3D ಕರ್ವ್ಡ್ pOLED ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದರ ಡಿಸ್‌ಪ್ಲೇಯು 2400 × 1080p ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. ಹಾಗೆಯೇ ಈ ಫೋನಿನ 1600 ನಿಟ್ಸ್ ಪೀಕ್ ಬ್ರೈಟ್ನೆಸ್, 144Hz ರಿಫ್ರೆಶ್ ರೇಟ್ ಸೌಲಭ್ಯ ಸಹ ಒಳಗೊಂಡಿದೆ. ಇನ್ನು ಈ ಫೋನ್ ಕ್ವಾಲ್ಕಮ್ ಸ್ನಾಪ್ಡ್ರಾಗನ್ 7s ಜೆನ್ 3 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಇದು 256GB ಸ್ಟೋರೇಜ್ ಇದೆ.
ಹಾಗೆಯೇ ಈ ಫೋನ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಇದರೊಂದಿಗೆ 5,000 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದರ ಜೊತೆಗೆ 68W ಟರ್ಬೋ ಪವರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಹೊಂದಿದೆ.
ಒನ್‌ಪ್ಲಸ್ ನಾರ್ಡ್ 4 ಸ್ಮಾರ್ಟ್‌ಫೋನ್
ಒನ್‌ಪ್ಲಸ್ ನಾರ್ಡ್ 4 ಸ್ಮಾರ್ಟ್‌ಫೋನ್ 6.74 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1240 x 2772 ಪಿಕ್ಸೆಲ್ ರೆಸಲ್ಯೂಶನ್ ಅನ್ನು ಒಳಗೊಂಡಿದೆ. ಹಾಗೆಯೇ ಇದು ಕ್ವಾಲ್ಕಮ್ ಸ್ನಾಪ್ಡ್ರಾಗನ್ 7+ ಜೆನ್ 3 ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಆಧಾರಿತ OxygenOS 14 ನಲ್ಲಿ ಕೆಲಸ ನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 256GB ಸ್ಟೋರೇಜ್ ಅನ್ನು ಒಳಗೊಂಡಿದೆ.
ಹಾಗೆಯೇ ಒನ್‌ಪ್ಲಸ್ ನಾರ್ಡ್ 4 ಫೋನ್ ಹಿಂಭಾಗದಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ನಲ್ಲಿ ಇದೆ. ಒನ್‌ಪ್ಲಸ್ ನಾರ್ಡ್ 4 ಸ್ಮಾರ್ಟ್‌ಫೋನ್ 5,500mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, ಇದರೊಂದಿಗೆ 100W ವೈಯರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಕೂಡಾ ಇವೆ.
ಪೊಕೊ F6 ಸ್ಮಾರ್ಟ್‌ಫೋನ್
ಪೊಕೊ F6 5G ಮೊಬೈಲ್ 6.67 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಡಿಸ್‌ಪ್ಲೇಯು 2712 x 1220 ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಪಡೆದುಕೊಂಡಿದೆ. ಅಲ್ಲದೇ ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8s ಜನ್ 3 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 OS ಸಪೋರ್ಟ್ ಸಹ ಇದೆ. ಈ ಫೋನ್ 8GB + 256GB, 8GB + 256GB ಮತ್ತು 12GB + 512GB ಸ್ಟೋರೇಜ್ ವೇರಿಯಂಟ್ ಸಾಮರ್ಥ್ಯದ ಆಯ್ಕೆಯಲ್ಲಿ ಇವೆ.
ಇದರೊಂದಿಗೆ ಈ ಮೀಡ್‌ರೇಂಜ್ ಪೋನ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಕ್ಯಾಮೆರಾ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಇದು 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದುಕೊಂಡಿದೆ.


Click it and Unblock the Notifications








