ಬಜೆಟ್ ಬೆಲೆಗೆ ಲಭ್ಯವಿರುವ ಈ ಫೋನ್‌ಗಳ ಫೀಚರ್ಸ್ ತಿಳಿದ್ರೆ, ವಾವ್ ಅಂತೀರಾ!
ಇತ್ತೀಚಿನ ಹೊಸ ಫೋನ್‌ಗಳು ಆಕರ್ಷಕ ಫೀಚರ್ಸ್‌ಗಳನೊಂದಿಗೆ ಮಾರುಕಟ್ಟೆ ಪ್ರವೇಶ ಮಾಡುತ್ತಿವೆ. ಬೆಸ್ಟ್ ಕ್ಯಾಮೆರಾ, ವೇಗದ ಪ್ರೊಸೆಸರ್, ಅತ್ಯುತ್ತಮ ಡಿಸ್‌ಪ್ಲೇ, ಆಕರ್ಷಕ ಡಿಸೈನ್ ಆಯ್ಕೆಗಳನ್ನಿ ನೀಡುತ್ತಿದ್ದು, ಮುಖ್ಯವಾಗಿ ಅಧಿಕ ಬ್ಯಾಟರಿ ಬ್ಯಾಕ್‌ಅಪ್ ಆಯ್ಕೆ ಸಹ ಒಂದಾಗಿದೆ. ಅದರಲ್ಲಿಯೂ ಇಂದಿನ ಅನೇಕ ಫೋನ್‌ಗಳಲ್ಲಿ 5000mAh ಬ್ಯಾಟರಿ ಫೀಕ್ಸ್ ಎನ್ನಬಹುದಾಗಿದೆ.
ಹೌದು, ಬಿಗ್ ಬ್ಯಾಟರಿ ಬ್ಯಾಕ್‌ಅಪ್ ಇರುವ ಫೋನ್‌ಗಳಿಗೆ ಗ್ರಾಹಕರಿಂದ ಬೇಡಿಕೆ ಹೆಚ್ಚಿದ್ದು, ನೂತನ ಫೋನ್ ಖರೀದಿಸುವಾಗ ಅಧಿಕ ಬ್ಯಾಟರಿ ಆಯ್ಕೆ ಗಮನಿಸುತ್ತಾರೆ. 5,000mAh ಬ್ಯಾಟರಿ ಸೌಲಭ್ಯದ ಫೋನ್‌ಗಳು ಕನಿಷ್ಠ ಒಂದು ದಿನದ ಬ್ಯಾಕ್‌ಅಪ್ ನೀಡುವ ಸಾಮರ್ಥ್ಯ ಹೊಂದಿವೆ. ಹಾಗಾದರೇ ಬಜೆಟ್ ದರದಲ್ಲಿ 5,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಪೊಕೊ X6 ನಿಯೋ 5G
ಪೊಕೊದ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಸಹ ಒಳಗೊಂಡಿದೆ. ಅಲ್ಲದೇ ಈ ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದ್ದು, ಇದರ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ.
ಹಾಗೆಯೇ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ (6 nm) ಪ್ರೊಸೆಸರ್ ಪವರ್ ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಕೆಲಸ ಮಾಡಲಿದೆ. ಇಲ್ಲದೇ ಇದು ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ.
ರೆಡ್ಮಿ 13C 5G ಮೊಬೈಲ್
ರೆಡ್ಮಿ 13C 5G ಮೊಬೈಲ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಇದಕ್ಕೆ ಅನುಗುಣವಾಗಿ 18W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಪಡೆದಿದೆ. ಹಾಗೆಯೇ ಇದು 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದು ಡಿಸ್‌ಪ್ಲೇ 1080×2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ.
ಹಾಗೆಯೇ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080SoC ಪ್ರೊಸೆಸರ್ನಲ್ಲಿ ಕೆಲಸ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ಸಪೋರ್ಟ್ ಜೊತೆಗೆ ಕೆಲಸ ಮಾಡಲಿದೆ. ಇದಲ್ಲದೇ ಈ ಫೋನ್ 6GB RAM + 128 GB ಹಾಗೂ 8 GB RAM + 256 GB ಸ್ಟೋರೇಜ್ ಸಾಮರ್ಥ್ಯದ ಮಾಡೆಲ್ ಆಯ್ಕೆ ಒಳಗೊಂಡಿದ್ದು, ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ.
ರಿಯಲ್‌ಮಿ C67 5G ಫೋನ್
ಈ ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಕೂಡಾ ಹೊಂದಿದ್ದು, ಹಾಗೆಯೇ ಇದು 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದುಕೊಂಡಿದೆ. ಇನ್ನು ಈ ಫೋನನ್ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದರ ಡಿಸ್‌ಪ್ಲೇ 120Hz ವರೆಗಿನ ರಿಫ್ರೆಶ್ ರೇಟ್ ನಲ್ಲಿ ಇದೆ.
ಇದರೊಂದಿಗೆ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್ ಸಾಮರ್ಥ್ಯ ಸಹ ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಕಾಣಬಹುದಾಗಿದೆ. ಅಲ್ಲದೇ ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ನಲ್ಲಿ ಇದೆ.


Click it and Unblock the Notifications








