Home
ಮೊಬೈಲ್

ನೀವು ಮೊಬೈಲ್‌ ಗೇಮ್‌ ಜಾಸ್ತಿ ಆಡ್ತೀರಾ?..ಹಾಗಿದ್ರೆ ಈ ಫೋನ್‌ ಲಿಸ್ಟ್‌ ಗಮನಿಸಿ!

ಮೊಬೈಲ್‌ ಮಾರುಕಟ್ಟೆಯಲ್ಲಿ ಗೇಮಿಂಗ್‌ ಫೋನ್‌ಗಳಿಗೂ ಸಿಕ್ಕಾಪಟ್ಟೆ ಡಿಮ್ಯಾಂಡ್‌ ಇದೆ. ಫೋರ್ಟ್‌ನೈಟ್, ಪವ್‌ಜಿ ಮೊಬೈಲ್, ಕಾಲ್ ಆಫ್ ಡ್ಯೂಟಿ ಮೊಬೈಲ್ಸ್, ಫೋರ್ಟ್‌ನೈಟ್ ಮತ್ತು ಆಸ್ಫಾಲ್ಟ್ 9 ಇಂತಹ ಹೈ ಎಂಡ್‌ ಮೊಬೈಲ್ ಗೇಮ್‌ಗಳು ಹೆಚ್ಚು ಬೇಡಿಕೆ ಪಡೆದಿವೆ. ಅಂದಹಾಗೆ ಈ ರೀತಿಯ ಗೇಮ್‌ ಆಡಲು ಅತ್ಯುತ್ತಮ ಪ್ರೊಸೆಸರ್‌ ಬಲ ಪಡೆದಿರುವ ಫೋನ್‌ಗಳು ಇದ್ರೆ, ಆಟ ಬೊಂಬಾಟ್‌.

ಹೌದು, ಅಧಿಕ ಡೇಟಾ ಸೌಲಭ್ಯ ಬಯಸುವ ಗೇಮ್‌ ಆಡಲು ವೇಗದ ಮೊಬೈಲ್‌ಗಳು ಬೆಂಬಲವಾಗಿವೆ. ಗೇಮಿಂಗ್‌ಗಾಗಿಯೇ ಕೆಲವು ಫೋನ್‌ಗಳು ಮಾರುಕಟ್ಟೆಯಲ್ಲಿ ಲಭ್ಯ ಇವೆ. ಆದರೆ ಅವುಗಳ ಬೆಲೆ ದುಬಾರಿ. ಆದರೆ ಬಹುತೇಕ ಗೇಮ್ ಪ್ರಿಯ ಗ್ರಾಹಕರು ಬಜೆಟ್‌ ದರದಲ್ಲಿ ಲಭ್ಯವಾಗುವ ಗೇಮಿಂಗ್‌ ಮೊಬೈಲ್‌ಗಳಿಗೆ ಹೆಚ್ಚು ಗಮನ ನೀಡುತ್ತಾರೆ. ಹಾಗಾದರೆ ಬಜೆಟ್‌ ದರದ ಒಳಗೆ ಲಭ್ಯವಾಗುವ ಗೇಮಿಂಗ್‌ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ನೀವು ಮೊಬೈಲ್‌ ಗೇಮ್‌ ಜಾಸ್ತಿ ಆಡ್ತೀರಾ?..ಹಾಗಿದ್ರೆ ಈ ಫೋನ್‌ ಲಿಸ್ಟ್‌ ಗಮನಿಸಿ!

ಐಕ್ಯೂ Z7 ಸ್ಮಾರ್ಟ್‌ಫೋನ್‌ : ಐಕ್ಯೂ Z7 ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 920 ಪ್ರೊಸೆಸರ್ ನಲ್ಲಿ ಕಾರ್ಯ ನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಓಎಸ್‌ ಬೆಂಬಲ ಪಡೆದಿದೆ. ಇನ್ನು ಈ ಫೋನ್‌ 6.28 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದ್ದು, ಇದು 90hz ಸ್ಕ್ರೀನ್ ರಿಫ್ರೆಶ್ ರೇಟ್‌ ಆಯ್ಕೆ ಹೊಂದಿದೆ. ಇದರೊಂದಿಗೆ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಹೊಂದಿದ್ದು, 4500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಸಹ ಹೊಂದಿದೆ.

ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಸ್ಮಾರ್ಟ್‌ಫೋನ್‌ : ಒನ್‌ಪ್ಲಸ್‌ ಸಂಸ್ಥೆಯು ಈ ಮೊಬೈಲ್‌ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್‌ ಬೆಂಬಲ ಪಡೆದಿದೆ. ಇನ್ನು ಈ ಫೋನ್‌ 6.72 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಪಡೆದಿದ್ದು, ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಟರಿ ಅನ್ನು ಒಳಗೊಂಡಿದೆ.

ಪೊಕೊ X4 ಪ್ರೊ 5G ಸ್ಮಾರ್ಟ್‌ಫೋನ್‌ : ಪೊಕೊ X4 ಪ್ರೊ 5G ಸ್ಮಾರ್ಟ್‌ಫೋನ್‌ ಗೇಮಿಂಗ್‌ಗೆ ಪೂರಕ ಎನಿಸಿದ ಮೊಬೈಲ್‌ ಆಗಿದೆ. ಈ ಮೊಬೈಲ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 695 SoC ಪ್ರೊಸೆಸರ್‌ ಸಾಮರ್ಥ್ಯ ವನ್ನು ಪಡೆದಿದೆ. ಹಾಗೆಯೇ 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ HD+ ಡಿಸ್‌ಪ್ಲೇ ಪಡೆದಿದೆ. ಇದರ ಜೊತೆಗೆ ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಅತ್ಯುತ್ತಮ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ.

ಮೊಟೊ G60 ಸ್ಮಾರ್ಟ್‌ಫೋನ್‌ : ಮೊಟೊದ ಈ ಫೋನ್‌ ಸಹ ಗೇಮಿಂಗ್‌ಗೆ ಪೂರಕವಾಗಿದೆ. ಇದು 1080 x 2460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.8ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದಿದೆ. ಹಾಗೆಯೇ ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732 G SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಪಡೆದಿದೆ. ಜೊತೆಗೆ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಇದ್ದು, ಪ್ರಾಥಮಿಕ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಟರ್ಬೊ ಪವರ್ 20 ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ರಿಯಲ್‌ಮಿ ನಾರ್ಜೊ 30 ಪ್ರೊ 5G ಸ್ಮಾರ್ಟ್‌ಫೋನ್‌ : ಬಜೆಟ್ ದರದಲ್ಲಿ ಅದು ಸಹ ಅತ್ಯುತ್ತಮ ಗೇಮಿಂಗ್ ಫೋನ್ ಆಗಿದೆ. ಈ ಫೋನ್ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 800U SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಅಲ್ಲದೇ ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ಡಾರ್ಟ್‌ ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ.

Best Mobiles in India

English summary
5 best budget mobiles for gaming in india 2023. all details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+